Realme GT 2 Pro: ಇಂದಿನಿಂದ ರಿಯಲ್‌ ಮಿ GT 2 ಪ್ರೊ ಮಾರಾಟ ಆರಂಭ: ಖರೀದಿಗೆ ಕ್ಯೂ ನಿಲ್ಲೋದು ಗ್ಯಾರಂಟಿ

| Updated By: Vinay Bhat

Updated on: Apr 14, 2022 | 1:30 PM

Realme GT 2 Pro Sale: ರಿಯಲ್‌ ಮಿ ಜಿಟಿ 2 ಪ್ರೊ (Realme GT 2 Pro) ಸ್ಮಾರ್ಟ್‌ಫೋನ್‌ ಇದೀಗ ಖರೀದಿಗೆ ಸಿಗುತ್ತಿದೆ. ಫ್ಲಿಪ್‌ಕಾರ್ಟ್, ರಿಯಲ್‌ ಮಿ.ಕಾಮ್ ಮತ್ತು ಆಯ್ದ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಈಗ ಮಾರಾಟ ಆಗುತ್ತಿದೆ.

Realme GT 2 Pro: ಇಂದಿನಿಂದ ರಿಯಲ್‌ ಮಿ GT 2 ಪ್ರೊ ಮಾರಾಟ ಆರಂಭ: ಖರೀದಿಗೆ ಕ್ಯೂ ನಿಲ್ಲೋದು ಗ್ಯಾರಂಟಿ
Realme GT 2 Pro
Follow us on

ರಿಯಲ್ ಮಿ (Realme) ಕಂಪನಿ ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಬಜೆಟ್ ಪ್ರಿಯರಿಗೆಂದೇ ಬರೋಬ್ಬರಿ 108MP ಕ್ಯಾಮೆರಾದ ರಿಯಲ್ ಮಿ 9 4G (Reamle 9 4G) ಫೋನ್ ಲಾಂಚ್ ಮಾಡಿತ್ತು. ಇದರ ಬೆನ್ನಲ್ಲೇ ರಿಯಲ್‌ ಮಿ ಜಿಟಿ 2 ಪ್ರೊ (Realme GT 2 Pro) ಸ್ಮಾರ್ಟ್‌ಫೋನ್‌ ಅನ್ನು ಕೂಡ ದೇಶದಲ್ಲಿ ಅನಾವರಣ ಮಾಡಿತ್ತು. ಇದೀಗ ಈ ಫೋನ್ ಇಂದಿನಿಂದ ಖರೀದಿಗೆ ಸಿಗುತ್ತಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಹೊಂದಿದ್ದು ಸಾಕಷ್ಟು ಬಲಿಷ್ಠವಾಗಿದೆ. ಜೊತೆಗೆ LTPO 2.0-ಬೆಂಬಲಿತ ಸೂಪರ್ ರಿಯಾಲಿಟಿ ಡಿಸ್‌ಪ್ಲೇ, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದಿಂದ ಆವೃತ್ತವಾಗಿದೆ. ಇದು ಫ್ಲಿಪ್‌ಕಾರ್ಟ್, ರಿಯಲ್‌ ಮಿ.ಕಾಮ್ ಮತ್ತು ಆಯ್ದ ಆಫ್‌ಲೈನ್ ರಿಟೇಲ್ ಸ್ಟೋರ್‌ಗಳ ಮೂಲಕ ಈಗ ಮಾರಾಟ ಆಗುತ್ತಿದೆ.

ಬೆಲೆ – ಆಫರ್ ಏನು?:

ಭಾರತದಲ್ಲಿ ರಿಯಲ್‌ ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ. ಇದರ ಬೇಸ್ ಮಾಡೆಲ್‌ 8GB RAM ಮತ್ತು 128GB ಸ್ಟೋರೇಜ್ ಮಾದರಿಗೆ 49,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 57,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ರಿಯಲ್‌ ಮಿ GT 2 ಪ್ರೊ ಫೋನ್‌ ಖರೀದಿಸುವ ಗ್ರಾಹಕರು 5,000 ರೂ. ವರೆಗಿನ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. HDFC ಬ್ಯಾಂಕ್ ಕಾರ್ಡ್‌ಗಳು ಮತ್ತು SBI ಕ್ರೆಡಿಟ್ ಕಾರ್ಡ್‌ಗಳ ಮೂಲಕ ಹ್ಯಾಂಡ್‌ಸೆಟ್ ಖರೀದಿಸುವ ಗ್ರಾಹಕರಿಗೆ ಈ ಆಫರ್‌ ದೊರೆಯಲಿದೆ. ಇದಲ್ಲದೆ ನೋ-ಕಾಸ್ಟ್ ಇಎಂಐ ಸೌಲಭ್ಯವನ್ನು ಕೂಡ ಪಡೆಯಬಹುದಾಗಿದೆ. ಜೊತೆಗೆ ಫ್ಲಿಪ್‌ಕಾರ್ಟ್ ಆಕ್ಸಿಸ್ ಬ್ಯಾಂಕ್ ಕಾರ್ಡ್‌ಗಳ ಮೂಲಕ ಖರೀದಿಗಳಿಗೆ 5% ಕ್ಯಾಶ್‌ಬ್ಯಾಕ್ ನೀಡುತ್ತಿದೆ.

ಏನು ವಿಶೇಷತೆ?:

ರಿಯಲ್‌ ಮಿ GT 2 ಪ್ರೊ ಸ್ಮಾರ್ಟ್‌ಫೋನ್‌ 1,440×3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ 2K LTPO 2.0 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್​ನಿಂದ ಕೂಡಿದೆ. ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್‌ 12 ಆಧಾರಿತ ರಿಯಲ್‌ಮಿ UI 3.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಟೆಕ್ನಾಲಜಿಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

Moto G22: ಭರ್ಜರಿ ಕ್ಯಾಮೆರಾ, ಬ್ಯಾಟರಿಯ ಬಜೆಟ್ ಸ್ಮಾರ್ಟ್​​ಫೋನ್ ಮೋಟೋ G22 ಮಾರಾಟ ಆರಂಭ

WhatsApp : ವಾಟ್ಸ್​ಆ್ಯಪ್​ನಲ್ಲಿ ಚಾಟ್ ಅನ್ನು ಹೈಡ್ ಮಾಡುವ ಟ್ರಿಕ್ ನಿಮಗೆ ಗೊತ್ತೇ?: ಇಲ್ಲಿದೆ ನೋಡಿ