Realme GT 3: 10 ನಿಮಿಷಗಳ ಒಳಗೆ ಫುಲ್ ಚಾರ್ಜ್: ಮಾರುಕಟ್ಟೆಗೆ ಅಪ್ಪಳಿಸಲು ತಯಾರಾದ ರಿಯಲ್‌ ಮಿ GT 3 ಫೋನ್

ಜಾಗತೀಕ ಮಾರುಕಟ್ಟೆಯಲ್ಲಿ ರಿಯಲ್‌ ಮಿ ಜಿಟಿ 3 (Realme GT 3) ರಿಲೀಸ್ ಆಗಲು ಸಿದ್ಧವಾಗಿದೆ. ಇದು ಅತ್ಯಂತ ವೇಗದ ಚಾರ್ಜಿಂಗ್‌ ಮೊಬೈಲ್‌ ಎಂದು ಹೇಳಲಾಗಿದ್ದು ಫೆಬ್ರವರಿ 28 ರಂದು ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2023 ಈವೆಂಟ್‌ನಲ್ಲಿ ಬಿಡುಗಡೆ ಆಗಲಿದೆಯಂತೆ.

Realme GT 3: 10 ನಿಮಿಷಗಳ ಒಳಗೆ ಫುಲ್ ಚಾರ್ಜ್: ಮಾರುಕಟ್ಟೆಗೆ ಅಪ್ಪಳಿಸಲು ತಯಾರಾದ ರಿಯಲ್‌ ಮಿ GT 3 ಫೋನ್
Realme GT 3
Follow us
Vinay Bhat
|

Updated on:Feb 25, 2023 | 1:13 PM

ಪ್ರಸಿದ್ಧ ರಿಯಲ್ ಮಿ ಕಂಪನಿ ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿರುವುದು ತೀರಾ ಕಡಿಮೆ ಆಗುತ್ತಿದೆ. ಅಪರೂಪಕ್ಕಷ್ಟೆ ಮೊಬೈಲ್​​ಗಳನ್ನು ಅನಾವರಣ ಮಾಡುತ್ತಿದೆ. ಕೊನೆಯದಾಗಿ ರಿಯಲ್ ಮಿ ಕಂಪನಿ ಪ್ರಸಿದ್ಧ ಪಾನೀಯ ಸಂಸ್ಥೆ ಕೋಕಾ-ಕೋಲಾ ಜೊತೆಗೂಡಿ ರಿಯಲ್ ಮಿ 10 ಪ್ರೊ 5ಜಿ ಕೋಕಾ-ಕೋಲಾ ಎಡಿಷನ್ (Realme 10 Pro Coca-Cola Edition) ಅನ್ನು ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್​ಫೋನ್​ಗೆ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದೆ. ಇದೀಗ ಜಾಗತೀಕ ಮಾರುಕಟ್ಟೆಗೆ ಕಂಪನಿ ಹೊಸ ಮೊಬೈಲ್ ಒಂದನ್ನು ಪರಿಚಯಿಸಲಿ ಸಿದ್ಧತೆ ನಡೆಸುತ್ತಿದೆ. ಅದುವೇ ರಿಯಲ್‌ ಮಿ ಜಿಟಿ 3 (Realme GT 3). ಇದು ಅತ್ಯಂತ ವೇಗದ ಚಾರ್ಜಿಂಗ್‌ ಮೊಬೈಲ್‌ ಎಂದು ಹೇಳಲಾಗಿದ್ದು ಇದೇ ಫೆಬ್ರವರಿ 28 ರಂದು ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2023 ಈವೆಂಟ್‌ನಲ್ಲಿ ರಿಲೀಸ್ ಆಗಲಿದೆಯಂತೆ. ಇದರ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನು ಫೀಚರ್ಸ್:

ರಿಯಲ್‌ ಮಿ GT 3 ಸ್ಮಾರ್ಟ್‌ಫೋನ್​ನಲ್ಲಿ ಏನೆಲ್ಲ ಫೀಚರ್​ಗಳು ಇರಲಿದೆ ಎಂಬ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ ಇದು 1080 x 2412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇ ಹೊಂದಿರಲಿದೆ ಎಂದು ವರದಿಯಾಗಿದೆ. ಡಿಸ್‌ಪ್ಲೇ ಸ್ಕ್ರೀನ್ ಟು ಬಾಡಿ ಅನುಪಾತ 87.79 % ಇರಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ v5 ಪ್ರೊಟೆಕ್ಷನ್‌ ಪಡೆದುಕೊಂಡಿರುವ ಸಾಧ್ಯತೆ ಇದೆ.

ಇದನ್ನೂ ಓದಿ
Image
Nokia C02: ಅತಿ ಕಡಿಮೆ ಬೆಲೆಯ ನೋಕಿಯಾ C02 ಸ್ಮಾರ್ಟ್​ಫೋನ್ ಬಿಡುಗಡೆ: ಏನೆಲ್ಲ ಫೀಚರ್ಸ್ ಇದೆ ನೋಡಿ
Image
Tech Tips: ಸ್ಮಾರ್ಟ್​ಫೋನ್ ಡಿಸ್ ಪ್ಲೇ ಮೇಲೆ ಸ್ಕ್ರಾಚ್​ಗಳಿದ್ದರೆ ಸುಲಭವಾಗಿ ಹೇಗೆ ತೆಗೆಯುವುದು?
Image
Tech Tips: ಮೊಬೈಲ್ ಚಾರ್ಜರ್​ಗಳ ಬಣ್ಣ ಕಪ್ಪು ಮತ್ತು ಬಿಳಿ ಮಾತ್ರ ಇರುತ್ತದೆ ಯಾಕೆ ಗೊತ್ತೇ?; ಇಲ್ಲಿದೆ ಸೀಕ್ರೆಟ್
Image
Smule App: ಸ್ಮ್ಯೂಲ್ ಕರೋಕೆ ಆ್ಯಪ್​ಗೆ ಹವ್ಯಾಸಿ ಹಾಡುಗಾರರು ಫಿದಾ: ಇದನ್ನು ಹೇಗೆ ಬಳಸುವುದು?

Tech Tips: ಹೊಸ ಸ್ಮಾರ್ಟ್​ಫೋನ್ ಖರೀದಿಸುವಾಗ ಎಲ್ಲರಂತೆ ನೀವು ಕೂಡ ಈ ತಪ್ಪು ಮಾಡಬೇಡಿ

ಬಲಿಷ್ಠವಾದ ಮೀಡಿಯಾಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಬಹುದು.

ರಿಯಲ್‌ ಮಿ GT 3 ಸ್ಮಾರ್ಟ್‌ಫೋನ್​ನ ಮುಖ್ಯ ಹೈಲೇಟ್ ಇದರ ಬ್ಯಾಟರಿ ಹಾಗೂ ಫಾಸ್ಟ್ ಚಾರ್ಜಿಂಗ್. ಇದು 240W ವೇಗದ ಚಾರ್ಜಿಂಗ್‌ ಬೆಂಬಲಿಸುವ 4,500mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರುವುದು ಬಹುತೇಕ ಖಚಿತವಾಗಿದೆ. ಇದು 10 ನಿಮಿಷಗಳ ಒಳಗೆ 0-100% ಫುಲ್ ಚಾರ್ಜ್ ಆಗುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಒಳಗೊಂಡಿರಬಹುದು. ಈ ಫೋನಿನ ಬೆಲೆ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ, 25,000-30,000 ರೂ. ಒಳಗಡೆ ಇರಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Sat, 25 February 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್