Realme GT 5G: ಬಂಪರ್ ಆಫರ್: ರಿಯಲ್‌ಮಿ GT 5G ಸ್ಮಾರ್ಟ್​​ಫೋನ್ ಮೇಲೆ ಹಿಂದೆಂದೂ ಕಂಡಿರದ ಡಿಸ್ಕೌಂಟ್

2021 ರಲ್ಲಿ ಬಿಡುಗಡೆ ಆಗಿದ್ದರೂ ಈಗಲೂ ಕೂಡ ಭರ್ಜರಿ ಬೇಡಿಕೆ ಪಡೆದುಕೊಂಡಿರುವ ರಿಯಲ್‌ಮಿ GT 5G ಸ್ಮಾರ್ಟ್​​ಫೋನ್ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ.

Realme GT 5G: ಬಂಪರ್ ಆಫರ್: ರಿಯಲ್‌ಮಿ GT 5G ಸ್ಮಾರ್ಟ್​​ಫೋನ್ ಮೇಲೆ ಹಿಂದೆಂದೂ ಕಂಡಿರದ ಡಿಸ್ಕೌಂಟ್
Realme GT
Follow us
TV9 Web
| Updated By: Vinay Bhat

Updated on:Mar 17, 2022 | 2:10 PM

ಭಾರತದಲ್ಲಿ ಒಂದರ ಹಿಂದೆ ಒಂದರಂತೆ ಹೊಸ ಹೊಸ ಸ್ಮಾರ್ಟ್​​ಫೋನ್​ಗಳನ್ನು (Smartphone) ಪರಿಚಯಿಸುತ್ತಿರುವ ಪ್ರಸಿದ್ಧ ರಿಯಲ್ ಮಿ ಕಂಪನಿ ಇದೀಗ ತನ್ನ ಹಳೆಯ ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್ ಘೋಷಿಸಿದೆ. ಕಳೆದ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿ ಧೂಳಬ್ಬಿಸಿದ್ದ ರಿಯಲ್‌ಮಿ ಜಿಟಿ 5ಜಿ (Realme GT 5G) ಸ್ಮಾರ್ಟ್‌ಫೋನ್‌ ಇದೀಗ ಆಕರ್ಷಕ ರಿಯಾಯಿತಿ ಪಡೆದುಕೊಂಡಿದೆ. 2021 ರಲ್ಲಿ ಬಿಡುಗಡೆ ಆಗಿದ್ದರೂ ಈಗಲೂ ಕೂಡ ಭರ್ಜರಿ ಬೇಡಿಕೆ ಪಡೆದುಕೊಂಡಿರುವ ಈ ಸ್ಮಾರ್ಟ್​​ಫೋನ್ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ನಲ್ಲಿ (Flipkart) ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿದೆ. ನೀವು ಮೀಡಿಯಂ ಬೆಲೆಗೆ ಅತ್ಯುತ್ತಮ ಕ್ಯಾಮೆರಾ, ಪ್ರೊಸೆಸರ್, ಭರ್ಜರಿ ಬ್ಯಾಟರಿಯ ಫೋನ್ ಎದುರು ನೋಡುತ್ತಿದ್ದರೆ ರಿಯಲ್‌ ಮಿ GT ಅನ್ನು ಕಣ್ಣುಮುಚ್ಚು ಖರೀದಿಸಬಹುದು. ಹಾಗಾದ್ರೆ ಏನಿದು ಆಫರ್, ಬೆಲೆ ಎಷ್ಟು ಎಂಬುದನ್ನು ನೋಡೋಣ.

ರಿಯಲ್‌ ಮಿ GT ಸ್ಮಾರ್ಟ್‌ಫೋನ್‌ನ ಅಧಿಕೃತ ಬೆಲೆ 37,999 ರೂ. ಆಗಿದೆ. ಆದರೆ ನೀವು ಕೆಲವು ಮಾನದಂಡಗಳನ್ನು ಪೂರೈಸಿದರೆ ಫ್ಲಿಪ್‌ಕಾರ್ಟ್‌ನಲ್ಲಿ ಕಡಿಮೆ ಬೆಲೆಗೆ ಈ ಫೋನ್‌ ಖರೀದಿಸಬಹುದಾಗಿದೆ. ನೀವು ಆನ್‌ಲೈನ್ ಪಾವತಿಗಳನ್ನು ಆರಿಸಿಕೊಂಡರೆ ಮಾತ್ರ ಫ್ಲಿಪ್‌ಕಾರ್ಟ್‌ ಈ ಫೋನ್‌ ಮೇಲೆ 2,000 ರೂ.ಗಳ ರಿಯಾಯಿತಿ ನೀಡುತ್ತದೆ. ಅಂದರೆ ಫ್ಲಿಪ್‌ಕಾರ್ಟ್‌ನಲ್ಲಿ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ಅಥವಾ UPI ಮೂಲಕ ಪಾವತಿಯನ್ನು ಮಾಡಿದರೆ ಬೆಲೆ ಕಡಿತವಾಗುತ್ತದೆ.

ಈ 2,000 ರೂ. ರಿಯಾಯಿತಿ ಆಫರ್ ಆಕ್ಸಿಸ್ ಬ್ಯಾಂಕ್, ಸಿಟಿ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್‌ಗಳು, ಇಂಡಸ್‌ಇಂಡ್ ಬ್ಯಾಂಕ್, ಕೋಟಕ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಫೆಡರಲ್ ಬ್ಯಾಂಕ್, ಡಿಬಿಎಸ್ ಬ್ಯಾಂಕ್, ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್, ಯೆಸ್ ಬ್ಯಾಂಕ್ , HSBC ಬ್ಯಾಂಕ್, RBL ಬ್ಯಾಂಕ್, ಅಮೇರಿಕನ್ ಎಕ್ಸ್‌ಪ್ರೆಸ್, IDFC ಫಸ್ಟ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಕಾರ್ಡ್‌ಗಳಲ್ಲಿ ಮಾತ್ರ ಆಫರ್‌ ಸಿಗಲಿದೆ.

ರಿಯಲ್‌ಮಿ GT ಸ್ಮಾರ್ಟ್​ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ ಇದು 6.43 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಹೊಂದಿದ್ದು, ಮೇಲಿನ ಎಡ ಮೂಲೆಯಲ್ಲಿ ಪಂಚ್-ಹೋಲ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX682 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ರಿಯಲ್‌ಮಿ GT ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯ ಪಡೆದುಕೊಂಡಿದ್ದು, 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC ಮತ್ತು USB Type-C ಪೋರ್ಟ್ ಬೆಂಬಲವನ್ನು ಪಡೆದುಕೊಂಡಿದೆ.

Holi 2022: ವಾಟ್ಸ್​ಆ್ಯಪ್​ನಲ್ಲಿ ಹೋಳಿ ಸ್ಟಿಕ್ಕರ್ ಡೌನ್​ಲೋಡ್ ಮತ್ತು ಕಳುಹಿಸುವುದು ಹೇಗೆ?: ಇಲ್ಲಿದೆ ನೋಡಿ

Xiaomi 12 Series: ಸ್ಮಾರ್ಟ್​​ಫೋನ್ ಮಾರುಕಟ್ಟೆಯನ್ನೇ ನಡುಗಿಸಿದ ಶವೋಮಿ 12 ಸರಣಿ ಬಿಡುಗಡೆ: ಬೆಲೆ ಎಷ್ಟು?

Published On - 2:09 pm, Thu, 17 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ