ರಿಯಲ್ ಮಿ (Realme) ಕಂಪೆನಿ ಭಾರತದಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಮಾಡಿದ್ದ ರಿಯಲ್‌ಮಿ GT ಮಾಸ್ಟರ್ ಎಡಿಷನ್ (Realme GT Master Edition) ಸ್ಮಾರ್ಟ್‌ಫೋನ್ ಇಂದಿನಿಂದ ಖರೀದಿಗೆ ಸಿಗಲಿದೆ. ಪ್ರಸಿದ್ಧ ಇ-ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಸೇಲ್ ಆರಂಭವಾಗಿದೆ. ಸ್ನ್ಯಾಪ್‌ಡ್ರಾಗನ್ 778G 5G ಪ್ರೊಸೆಸರ್, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್, 4500mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳನ್ನು ಈ ಫೋನ್ ಒಳಗೊಂಡಿದೆ.
ಬೆಲೆ ಎಷ್ಟು?:
ರಿಯಲ್‌ಮಿ GT ಮಾಸ್ಟರ್ ಎಡಿಶನ್ ಸ್ಮಾರ್ಟ್‌ಫೋನ್ ಒಟ್ಟು ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 25,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ಸ್ಟೋರೆಜ್ ಆಯ್ಕೆಗೆ 27,999 ರೂ. ಮತ್ತು 8GB RAM ಮತ್ತು 256GB ಸ್ಟೋರೇಜ್ಗೆ 29,999 ರೂ. ಇದೆ. ಐಸಿಐಸಿಐ ಕ್ರೆಡೆಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 2000 ರೂ. ಡಿಸ್ಕೌಂಟ್ ಸಿಗಲಿದೆ.
ಏನು ವಿಶೇಷತೆ?:
ರಿಯಲ್‌ಮಿ GT ಮಾಸ್ಟರ್ ಎಡಿಶನ್ ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಬೆಂಬಲದೊಂದಿಗೆ 6.43-ಇಂಚಿನ ಫುಲ್ ಹೆಚ್‌ಡಿ+ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಪ್ರಾಥಮಿಕ ಸಂವೇದಕ, ಸೆಕೆಂಡರಿ ಕ್ಯಾಮೆರಾವು ಎಫ್ / 2.2 ಲೆನ್ಸ್ ಹೊಂದಿರುವ 8 ಮೆಗಾ ಪಿಕ್ಸೆಲ್ ಸಂವೇದಕ ಮತ್ತು ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸಂವೇದಕ ಪಡೆದಿದೆ. ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆಲ್ಫಿ ಶೂಟರ್ ಅನ್ನು ಎಫ್ / 2.5 ಅಪರ್ಚರ್ ಹೊಂದಿದೆ.
ಇನ್ನೂ ಈ ಸ್ಮಾರ್ಟ್‌ಫೋನ್ 4,300mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಹಾಗೆಯೇ ಇದು 65W ಸೂಪರ್ ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಉಳಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS, NFC, ಮತ್ತು USB Type-C ಪೋರ್ಟ್ ನೀಡಲಾಗಿದೆ.
Moto G50 5G: 48MP ಕ್ಯಾಮೆರಾ, 5000mAh ಬ್ಯಾಟರಿಯ ಮೋಟೋ ಜಿ60 5G ಸ್ಮಾರ್ಟ್‌ಫೋನ್ ಬಿಡುಗಡೆ
(Realme GT Master Edition Sale started India via Flipkart Rs 2000 discount for ICICI Bank holders)