ಭಾರತದಲ್ಲಿ ಭರ್ಜರಿ ಮಾರಾಟ ಆಗುತ್ತಿದೆ ರಿಯಲ್ ಮಿ GT ನಿಯೋ 3 ಥಾರ್ ಆಂಡ್ ಥಂಡರ್ ಎಡಿಷನ್
ರಿಯಲ್ ಮಿ GT ನಿಯೋ 3 ಥಾರ್ ಆಂಡ್ ಥಂಡರ್ ಎಡಿಷನ್ (Realme GT Neo 3 Thor) ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ (Flipkart) ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಖರೀದಿಗೆ ಸಿಗುತ್ತಿದೆ. ಮಧ್ಯಮ ಬೆಲೆಯ ಈ ಫೋನ್ ಭರ್ಜರಿ ಬೇಡಿಕೆ ಸೃಷ್ಟಿಸಿದೆ.
ವಿಶ್ವದ ಮೊಬೈಲ್ ಮಾರುಕಟ್ಟೆಯಲ್ಲಿ ವಿಭಿನ್ನ ಸ್ಮಾರ್ಟ್ಫೋನ್ಗಳನ್ನು (Smartphone) ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ರಿಯಲ್ ಮಿ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ ರಿಯಲ್ ಮಿ GT ನಿಯೋ 3 ಥಾರ್ ಆಂಡ್ ಥಂಡರ್ ಎಡಿಷನ್ (Realme GT Neo 3 Thor) ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಿತ್ತು. ಇದೀಗ ಈ ಫೋನ್ ಜನಪ್ರಿಯ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ (Flipkart) ಹಾಗೂ ಅಧಿಕೃತ ರಿಯಲ್ ಮಿ ತಾಣದ ಮೂಲಕ ಖರೀದಿಗೆ ಸಿಗುತ್ತಿದೆ. ಮಧ್ಯಮ ಬೆಲೆಯ ಈ ಫೋನ್ ಭರ್ಜರಿ ಬೇಡಿಕೆ ಸೃಷ್ಟಿಸಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ Dimensity 8100 ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.
- ಭಾರತದಲ್ಲಿ ರಿಯಲ್‌ಮಿ GT ನಿಯೋ 3 ಥಾರ್ ಆಂಡ್ ಥಂಡರ್ ಎಡಿಷನ್ ಸ್ಮಾರ್ಟ್‌ಫೋನ್ ಒಂದು ಆಯ್ಕೆಯಲ್ಲಷ್ಟೇ ಇದೆ. ಇದರ 12 GB RAM ಮತ್ತು 256 GB ಇಂಟರ್ ಸ್ಟೋರೇಜ್ ರೂಪಾಂತರದ ಬೆಲೆ 42,999 ರೂ. ಆಗಿದೆ.
- ಈ ಫೋನ್ 1,080 x 2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ HD+ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಒಳಗೊಂಡಿದೆ.
- ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ರಿಯಲ್‌ಮಿ UI 3.0 ಜೊತೆಗೆ ರನ್ ಆಗುತ್ತದೆ.
- ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಸನ್ಸಾರ್ ಬೆಂಬಲಿಸಲಿದೆ.
- ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಜೊತೆಗೆ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ S5K3P9 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
- ಈ ಸ್ಮಾರ್ಟ್‌ಫೋನ್ ಎರಡು ಬ್ಯಾಟರಿ ಮತ್ತು ಚಾರ್ಜಿಂಗ್ ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ 4,500mAh ಸಾಮರ್ಥ್ಯದ ಬ್ಯಾಟರಿ 150W ಅಲ್ಟ್ರಾಡಾರ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.
- ಇನ್ನು 4500mAh ಸಾಮರ್ಥ್ಯದ ಬ್ಯಾಟರಿಯ 150W ಡಾರ್ಟ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್, GPS, NFC ಮತ್ತು USB ಟೈಪ್-C ಪೋರ್ಟ್ ಸೇರಿವೆ.
ಇದನ್ನೂ ಓದಿ