ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ಮಾದರಿಯ ವರೆಗೆ ಫೋನ್ಗಳನ್ನು ಬಿಡುಗಡೆ ಮಾಡಿ ಯಶಸ್ಸು ಸಾಧಿಸಿರುವ ಪ್ರಸಿದ್ಧ ರಿಯಲ್ ಮಿ (Realme) ಕಂಪನಿ 2022ರಲ್ಲಂತು ಆಕರ್ಷಕ ಮೊಬೈಲ್ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್ಫೋನ್ಗಳು ಬಿಡುಗಡೆಗೆ ಸಜ್ಜಾಗಿ ನಿಂತಿವೆ. ಇದರ ನಡುವೆ ಕಂಪನಿ ಇದೀಗ ಭಾರತದಲ್ಲಿ ಹೊಸದಾಗಿ ರಿಯಲ್ ಮಿ ಜಿಟಿ ನಿಯೋ 3ಟಿ (Realme GT Neo 3T) ಫೋನ್ ಅನ್ನು ಅನಾವರಣ ಮಾಡಿದೆ. ಕೇವಲ 12 ನಿಮಿಷಗಳಲ್ಲಿ 50% ಚಾರ್ಜ್ ಆಗುವ ಈ ಫೋನ್ನಲ್ಲಿ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್, 5,000mAh ಸಾಮರ್ಥ್ಯದ ಬ್ಯಾಟರಿ, ಅತ್ಯುತ್ತಮ ಕ್ಯಾಮೆರಾ ಕೂಡ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ರಿಯಲ್ ಮಿ GT ನಿಯೋ 3T ಸ್ಮಾರ್ಟ್‌ಫೋನ್ ಒಟ್ಟು ಮೂರು ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 29,999ರೂ., 8GB RAM + 128GB ಸ್ಟೋರೇಜ್ ಆವೃತ್ತಿಯ ಬೆಲೆ 31,999ರೂ. ಮತ್ತು 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ 33,999ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟೆಂಬರ್ 23ರಂದು ಮಧ್ಯಾಹ್ನ 12 ಗಂಟೆಗೆ ರಿಯಲ್ ಮಿ.ಕಾಮ್, ಫ್ಲಿಪ್‌ಕಾರ್ಟ್ ಮತ್ತು ಮುಖ್ಯ ಸ್ಟೋರ್‌ಗಳಲ್ಲಿ ಸೇಲ್ ಆಗಲಿದೆ. ಫಸ್ಟ್ ಸೇಲ್ ಪ್ರಯುಕ್ತ 7,000 ರೂ. ವರೆಗೆ ರಿಯಾಯಿತಿಯನ್ನು ಪಡೆಯಬಹುದು.
ಏನು ಫೀಚರ್ಸ್?:
ರಿಯಲ್ ಮಿ GT ನಿಯೋ 3T ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.62-ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಅನ್ನು ರಿಯಲ್ ಮಿ UI 3.0 ಜೊತೆಗೆ ರನ್ ಮಾಡುತ್ತದೆ.
ಈ ಫೋನ್ ಡೈನಾಮಿಕ್ RAM ವಿಸ್ತರಣೆ ತಂತ್ರಜ್ಞಾನವನ್ನು ಪಡೆದುಕೊಂಡಿದ್ದು ಇದರ ಮೂಲಕ ಹೆಚ್ಚುವರಿ 5GB RAM ಅನ್ನು ನೀಡಲಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ ಎಂಟು ಕೂಲಿಂಗ್ ಲೇಯರ್‌ಗಳನ್ನು ಒಳಗೊಂಡಿರುವ ಸ್ಟೇನ್‌ಲೆಸ್ ಸ್ಟೀಲ್ ಆವಿ ಕೂಲಿಂಗ್ ಸಿಸ್ಟಮ್ ಪ್ಲಸ್ ಅನ್ನು ಹೊಂದಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ 119 ಡಿಗ್ರಿ ಫೀಲ್ಡ್–ಆಫ್–ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ,
ರಿಯಲ್ ಮಿ GT ನಿಯೋ 3T ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ಸೂಪರ್‌ಡಾರ್ಟ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಇದು ಕೇವಲ 12 ನಿಮಿಷಗಳಲ್ಲಿ 50% ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 5G, 4G LTE, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಪಡೆದುಕೊಂಡಿದೆ.
Published On - 11:35 am, Sun, 18 September 22