ನಾಳೆ ಬಿಡುಗಡೆ ಆಗಲಿದೆ ಬಹುನಿರೀಕ್ಷಿತ ರಿಯಲ್‌ ಮಿ GT ನಿಯೋ 3T: ಬೆಲೆ ಎಷ್ಟು?, ಏನು ಫೀಚರ್ಸ್?

Realme GT Neo 3T Launch: ರಿಯಲ್ ಮಿ ಹಳೆ ಫೋನಿನ ಮುಂದುವರೆದ ಭಾಗವಾಗಿ ರಿಯಲ್‌ ಮಿ GT ನಿಯೋ 3ಟಿ (Realme GT Neo 3T) ಫೋನನ್ನು ಅನಾವರಣ ಮಾಡಲು ಮುಂದಾಗಿದೆ. ನಾಳೆ (ಜೂ. 7) ಈ ಫೋನ್ ಜಾಗತೀಕ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ.

ನಾಳೆ ಬಿಡುಗಡೆ ಆಗಲಿದೆ ಬಹುನಿರೀಕ್ಷಿತ ರಿಯಲ್‌ ಮಿ GT ನಿಯೋ 3T: ಬೆಲೆ ಎಷ್ಟು?, ಏನು ಫೀಚರ್ಸ್?
Realme GT Neo 3T
Follow us
TV9 Web
| Updated By: Vinay Bhat

Updated on:Jun 06, 2022 | 2:17 PM

ಏಪ್ರಿಲ್​ನಲ್ಲಿ ರಿಯಲ್ ಮಿ ಕಂಪನಿ ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಗೆ ಮೊದಲ ಬಾರಿ ಅತ್ಯಂತ ವೇಗವಾಗಿ ಚಾರ್ಜ್ ಆಗುವ 150W ಫಾಸ್ಟ್ ಚಾರ್ಜರ್​ನ (150W Fast Charger) ರಿಯಲ್‌ ಮಿ ಜಿಟಿ ನಿಯೋ 3 (Realme GT Neo 3) ಫೋನ್ ಅನ್ನು ಬಿಡುಗಡೆ ಮಾಡಿತ್ತು. ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದ ಈ ಫೋನ್ ದೊಡ್ಡ ಮಟ್ಟದಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹೀಗಿರುವಾಗ, ರಿಯಲ್ ಮಿ ಈ ಫೋನಿನ ಮುಂದುವರೆದ ಭಾಗವಾಗಿ ರಿಯಲ್‌ ಮಿ ಜಿಟಿ ನಿಯೋ 3ಟಿ (Realme GT Neo 3T) ಫೋನನ್ನು ಅನಾವರಣ ಮಾಡಲು ಮುಂದಾಗಿದೆ. ನಾಳೆ (ಜೂ. 7) ಈ ಫೋನ್ ಜಾಗತೀಕ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷ ಫೀಚರ್​ಗಳಿವೆ ಎಂಬುದನ್ನು ನೋಡೋಣ.

  1. ರಿಯಲ್‌ ಮಿ GT ನಿಯೋ 3T ಸ್ಮಾರ್ಟ್‌ಫೋನ್‌ ಅತ್ಯುತ್ತಮ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 1,000Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ.
  2. ಕ್ವಾಲ್ಕಾಮ್ ಸ್ನಾಪ್​ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ರಿಯಲ್‌ಮಿ UI 3.0 ಜೊತೆಗೆ ರನ್ ಆಗುತ್ತದೆ.
  3. ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಸೆನ್ಸಾರ್‌ ಬೆಂಬಲಿಸಲಿದೆ ಎಂಬ ಮಾತಿದೆ.
  4. ಈ ಫೋನಿನಲ್ಲಿರುವ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಜೊತೆಗೆ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
  5. ಇದನ್ನೂ ಓದಿ
    Image
    WhatsApp: ಬಳಕೆದಾರರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟ ವಾಟ್ಸ್​ಆ್ಯಪ್: ಏನದು ನೋಡಿ
    Image
    ಇಂದಿನಿಂದ Apple WWDC 2022 ಈವೆಂಟ್‌ ಪ್ರಾರಂಭ: iOS 16 ಬಿಡುಗಡೆ ಆಗುವ ನಿರೀಕ್ಷೆ
    Image
    Moto E32s: ಬಜೆಟ್ ಪ್ರಿಯರನ್ನು ದಂಗಾಗಿಸಿದ ಮೋಟೋ E32s ಫೋನ್ ಮಾರಾಟ ಇಂದಿನಿಂದ ಆರಂಭ
    Image
    Best Smartphone: ಇಲ್ಲಿದೆ ನೋಡಿ 15,000 ರೂ. ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು
  6. ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ. ಇದಕ್ಕೆ ತಕ್ಕಂತೆ 80W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಇದರ ಜೊತೆಗೆ 150W ಚಾರ್ಜರ್ ಕೂಡ ನೀಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
  7. 150W ಫಾಸ್ಟ್​ ಚಾರ್ಜರ್​​ನಲ್ಲಿ ಶೇ. 50 ರಷ್ಟು ಚಾರ್ಜ್ ಆಗಲು ಕೇವಲ ಐದು ನಿಮಿಷ ಸಾಕೆಂದು ಕಂಪನಿ ಹೇಳಿದೆ. ಹಾಗೆಯೆ 80W ಚಾರ್ಜರ್​ನಲ್ಲಿ ಶೇ. 100 ರಷ್ಟು ಚಾರ್ಜ್ 32 ನಿಮಿಷಗಳ ಒಳಗೆ ಆಗುತ್ತಂತೆ.
  8. ರಿಯಲ್‌ ಮಿ GT ನಿಯೋ 3T 12GB RAM ಮತ್ತು 256GB ಸ್ಟೋರೆಜ್ ಆಯ್ಕೆ ಹೊಂದಿರುವ ಸಾಧ್ಯತೆ ಇದೆ. ಇದರ ನಿಖರ ಬೆಲೆ ಬಹಿರಂಗವಾಗಿಲ್ಲ. ಆದರೆ, 30,000 ದಿಂದ 35,000 ರೂ. ಒಳಗೆ ಇರಬಹುದು ಎನ್ನಲಾಗಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:17 pm, Mon, 6 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ