Kannada News Technology Realme GT Neo 3T will launch globally on June 7 which is tomorrow check price and specs
ನಾಳೆ ಬಿಡುಗಡೆ ಆಗಲಿದೆ ಬಹುನಿರೀಕ್ಷಿತ ರಿಯಲ್ ಮಿ GT ನಿಯೋ 3T: ಬೆಲೆ ಎಷ್ಟು?, ಏನು ಫೀಚರ್ಸ್?
Realme GT Neo 3T Launch: ರಿಯಲ್ ಮಿ ಹಳೆ ಫೋನಿನ ಮುಂದುವರೆದ ಭಾಗವಾಗಿ ರಿಯಲ್ ಮಿ GT ನಿಯೋ 3ಟಿ (Realme GT Neo 3T) ಫೋನನ್ನು ಅನಾವರಣ ಮಾಡಲು ಮುಂದಾಗಿದೆ. ನಾಳೆ (ಜೂ. 7) ಈ ಫೋನ್ ಜಾಗತೀಕ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ.
Realme GT Neo 3T
Follow us on
ಏಪ್ರಿಲ್ನಲ್ಲಿ ರಿಯಲ್ ಮಿ ಕಂಪನಿ ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಮೊದಲ ಬಾರಿ ಅತ್ಯಂತ ವೇಗವಾಗಿ ಚಾರ್ಜ್ ಆಗುವ 150W ಫಾಸ್ಟ್ ಚಾರ್ಜರ್ನ (150W Fast Charger) ರಿಯಲ್ ಮಿ ಜಿಟಿ ನಿಯೋ 3 (Realme GT Neo 3) ಫೋನ್ ಅನ್ನು ಬಿಡುಗಡೆ ಮಾಡಿತ್ತು. ಮೀಡಿಯಾ ಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದ ಈ ಫೋನ್ ದೊಡ್ಡ ಮಟ್ಟದಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹೀಗಿರುವಾಗ, ರಿಯಲ್ ಮಿ ಈ ಫೋನಿನ ಮುಂದುವರೆದ ಭಾಗವಾಗಿ ರಿಯಲ್ ಮಿ ಜಿಟಿ ನಿಯೋ 3ಟಿ (Realme GT Neo 3T) ಫೋನನ್ನು ಅನಾವರಣ ಮಾಡಲು ಮುಂದಾಗಿದೆ. ನಾಳೆ (ಜೂ. 7) ಈ ಫೋನ್ ಜಾಗತೀಕ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷ ಫೀಚರ್ಗಳಿವೆ ಎಂಬುದನ್ನು ನೋಡೋಣ.
ರಿಯಲ್ ಮಿ GT ನಿಯೋ 3T ಸ್ಮಾರ್ಟ್‌ಫೋನ್ ಅತ್ಯುತ್ತಮ ರೆಸಲ್ಯೂಶನ್ ಸಾಮರ್ಥ್ಯದ 6.62 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 1,000Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿರುವ ಸಾಧ್ಯತೆ ಇದೆ.
ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 870 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ರಿಯಲ್‌ಮಿ UI 3.0 ಜೊತೆಗೆ ರನ್ ಆಗುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ (EIS) ಸೆನ್ಸಾರ್ ಬೆಂಬಲಿಸಲಿದೆ ಎಂಬ ಮಾತಿದೆ.
ಈ ಫೋನಿನಲ್ಲಿರುವ ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಜೊತೆಗೆ 119-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ಇದನ್ನೂ ಓದಿ
ರಿಯಲ್‌ಮಿ GT ನಿಯೋ 3T ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿರಲಿದೆ. ಇದಕ್ಕೆ ತಕ್ಕಂತೆ 80W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ. ಇದರ ಜೊತೆಗೆ 150W ಚಾರ್ಜರ್ ಕೂಡ ನೀಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
150W ಫಾಸ್ಟ್ ಚಾರ್ಜರ್ನಲ್ಲಿ ಶೇ. 50 ರಷ್ಟು ಚಾರ್ಜ್ ಆಗಲು ಕೇವಲ ಐದು ನಿಮಿಷ ಸಾಕೆಂದು ಕಂಪನಿ ಹೇಳಿದೆ. ಹಾಗೆಯೆ 80W ಚಾರ್ಜರ್ನಲ್ಲಿ ಶೇ. 100 ರಷ್ಟು ಚಾರ್ಜ್ 32 ನಿಮಿಷಗಳ ಒಳಗೆ ಆಗುತ್ತಂತೆ.
ರಿಯಲ್ ಮಿ GT ನಿಯೋ 3T 12GB RAM ಮತ್ತು 256GB ಸ್ಟೋರೆಜ್ ಆಯ್ಕೆ ಹೊಂದಿರುವ ಸಾಧ್ಯತೆ ಇದೆ. ಇದರ ನಿಖರ ಬೆಲೆ ಬಹಿರಂಗವಾಗಿಲ್ಲ. ಆದರೆ, 30,000 ದಿಂದ 35,000 ರೂ. ಒಳಗೆ ಇರಬಹುದು ಎನ್ನಲಾಗಿದೆ.