Realme GT Neo 5: ಬರೋಬ್ಬರಿ 240W ಫಾಸ್ಟ್ ಚಾರ್ಜಿಂಗ್: ಸ್ಮಾರ್ಟ್‌ಫೋನ್ ಜಗತ್ತಿನಲ್ಲಿ ಇತಿಹಾಸ ರಚಿಸುತ್ತಾ ರಿಯಲ್ ಮಿ?
240W Fast Charger: ಇದೀಗ ರಿಯಲ್ ಮಿ ಕಂಪನಿ ರಿಯಲ್ ಮಿ ಜಿಟಿ ನಿಯೋ 5 (Realme GT Neo 5) ಫೋನ್ ಅನ್ನು ತಯಾರು ಮಾಡುತ್ತಿದೆ. ಇದರಲ್ಲಿ ಊಹಿಸಲಾಗ ಬರೋಬ್ಬರಿ 240W ಫಾಸ್ಟ್ ಚಾರ್ಜಿಂಗ್ ಬೆಂಬಲ ನೀಡಲಾಗುತ್ತಿದ್ದು ನೂತನ ದಾಖಲೆಯೇ ಆಗಿದೆ.

ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ಮಾದರಿಯ ವರೆಗೆ ಫೋನ್ಗಳನ್ನು ಬಿಡುಗಡೆ ಮಾಡಿ ಯಶಸ್ಸು ಸಾಧಿಸಿರುವ ಪ್ರಸಿದ್ಧ ರಿಯಲ್ ಮಿ (Realme) ಕಂಪನಿ 2022 ರಲ್ಲಂತು ಆಕರ್ಷಕ ಮೊಬೈಲ್ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್ಫೋನ್ಗಳು ಬಿಡುಗಡೆಗೆ ಸಜ್ಜಾಗಿ ನಿಂತಿವೆ. ಮೇಲ್ನೋಟಕ್ಕೆ ರಿಯಲ್ ಮಿ ತನ್ನ ನಿಯೋ ಸರಣಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದೆ. ಕಳೆದ ಸೆಪ್ಟೆಂಬರ್ನಲ್ಲಿ ರಿಯಲ್ ಮಿ ಜಿಟಿ ನಿಯೋ 3T ಫೋನನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ರಿಯಲ್ ಮಿ ಜಿಟಿ ನಿಯೋ 5 (Realme GT Neo 5) ಫೋನ್ ಅನ್ನು ತಯಾರು ಮಾಡುತ್ತಿದೆ. ಇದರಲ್ಲಿ ಊಹಿಸಲಾಗ ಬರೋಬ್ಬರಿ 240W ಫಾಸ್ಟ್ ಚಾರ್ಜಿಂಗ್ ಬೆಂಬಲ ನೀಡಲಾಗುತ್ತಿದ್ದು ನೂತನ ದಾಖಲೆಯೇ ಆಗಿದೆ. ನಿಯೋ 5 ಯಾವಾಗ ಬಿಡುಗಡೆ ಆಗಲಿದೆ ಎಂಬ ಬಗ್ಗೆ ಕಂಪನಿ ಬಹಿರಂಗ ಪಡಿಸಿಲ್ಲ. ಆದರೆ, ಈ ಫೋನಿನ ಕೆಲವು ಫೀಚರ್ಗಳು ಆನ್ಲೈನ್ನಲ್ಲಿ ಸೋರಿಕೆ ಆಗಿದೆ.
ಏನಿದೆ ಫೀಚರ್ಸ್?:
ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ, ರಿಯಲ್ ಮಿ GT ನಿಯೋ 5 ಸ್ಮಾರ್ಟ್‌ಫೋನ್ 1,080*2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ E4 ಅಮೋಲೆಡ್ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. 120Hz ರಿಫ್ರೆಶ್ ರೇಟ್ ನೀಡಲಾಗಿದೆ. ಬಲಿಷ್ಠವಾದ ಮೀಡಿಯಾಟೆಕ್ ಡೈಮೆನ್ಸಿಟಿ 8100 5G SoC ಪ್ರೊಸೆಸರ್, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ.
Fake iPhone: ಮಾರುಕಟ್ಟೆಯಲ್ಲಿ ಭರ್ಜರಿ ಸೇಲ್ ಆಗುತ್ತಿದೆ ಡುಪ್ಲಿಕೇಟ್ ಐಫೋನ್ಗಳು: ಕಂಡುಹಿಡಿಯುವುದು ಹೇಗೆ?
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX890 ಸೆನ್ಸಾರ್ನಿಂದ ಕೂಡಿದೆ. ಉಳಿದ ಕ್ಯಾಮೆರಾ ಆಯ್ಕೆ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಆದರೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನಿರೀಕ್ಷಿಸಲಾಗಿದೆ.
ರಿಯಲ್ ಮಿ GT ನಿಯೋ 5ಸ್ಮಾರ್ಟ್‌ಫೋನ್ ಎರಡು ಬ್ಯಾಟರ್ ಆಯ್ಕೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ. 4,600mAh ಬ್ಯಾಟರಿಗೆ 240W ಫಾಸ್ಟ್ ಚಾರ್ಜರ್ ಮತ್ತು 5,000mAh ಸಾಮರ್ಥ್ಯದ ಬ್ಯಾಟರಿಗೆ 150W ಫಾಸ್ಟ್ ಚಾರ್ಜ್ ಟೆಕ್ನಾಲಜಿಯನ್ನು ನೀಡಲಾಗಿದೆ. ಇದು ಕೇಲವೇ ನಿಮಿಷಗಳಲ್ಲಿ 100% ಚಾರ್ಜ್ ಆಗುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 5G, 4G LTE, ಬ್ಲೂಟೂತ್ v5.2, NFC, ಮತ್ತು USB ಟೈಪ್-C ಪೋರ್ಟ್ ಅನ್ನು ಪಡೆದುಕೊಂಡಿದೆ.
ಬೆಲೆ ಎಷ್ಟಿರಬಹುದು?:
ಭಾರತದಲ್ಲಿ ರಿಯಲ್ ಮಿ GT ನಿಯೋ 5 ಸ್ಮಾರ್ಟ್‌ಫೋನ್ ಒಟ್ಟು ಮೂರು ಆಯ್ಕೆಯಲ್ಲಿ ಬರಬಹುದು. 6GB RAM + 128GB ಸ್ಟೋರೇಜ್ ಆಯ್ಕೆ, 8GB RAM + 128GB ಸ್ಟೋರೇಜ್, 31,999ರೂ. ಮತ್ತು 8GB RAM + 256GB ಸ್ಟೋರೇಜ್ ಆಯ್ಕೆಯೊಂದಿಗೆ ರಿಲೀಸ್ ಆಗಬಹುದು. ಇದರ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:05 am, Tue, 6 December 22