AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme 10 Pro: 108MP ಕ್ಯಾಮೆರಾ, 67W ಫಾಸ್ಟ್ ಚಾರ್ಜರ್: ರಿಯಲ್ ಮಿಯಿಂದ ಊಹಿಸಲಾಗದ ಬೆಲೆಗೆ ಸ್ಮಾರ್ಟ್​ಫೋನ್ ರಿಲೀಸ್

ಹಲವು ದಿನಗಳ ಬಳಿಕ ಮೊನ್ನೆಯಷ್ಟೆ ವಿದೇಶದಲ್ಲಿ ರಿಯಲ್‌ಮಿ 10 ಪ್ರೊ ಸರಣಿಯ (Realme 10 5G) ಸ್ಮಾರ್ಟ್‌ಫೋನ್​ಗಳನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ಇದೇ ಮೊಬೈಲ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ರಿಯಲ್‌ ಮಿ 10 ಪ್ರೊ 5G (Realme 10 Pro) ಮತ್ತು ರಿಯಲ್‌ ಮಿ 10 ಪ್ರೊ + 5G ಎಂಬ ಎರಡು ಮೊಬೈಲ್ ಇದೆ. ಈ ಎರಡೂ ಸ್ಮಾರ್ಟ್​ಫೋನ್​ಗಳಲ್ಲಿ ಅತ್ಯಂತ ಬಲಿಷ್ಠವದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ನೀಡಲಾಗಿದೆ. ಹಾಗಾದರೆ ಈ ಮೊಬೈಲ್​ಗಳ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

Realme 10 Pro: 108MP ಕ್ಯಾಮೆರಾ, 67W ಫಾಸ್ಟ್ ಚಾರ್ಜರ್: ರಿಯಲ್ ಮಿಯಿಂದ ಊಹಿಸಲಾಗದ ಬೆಲೆಗೆ ಸ್ಮಾರ್ಟ್​ಫೋನ್ ರಿಲೀಸ್
realme 10 Pro and Realme 10 Pro Plus
TV9 Web
| Edited By: |

Updated on:Oct 08, 2026 | 2:29 PM

Share

ಪ್ರಸಿದ್ಧ ರಿಯಲ್ ಮಿ (Realme) ಕಂಪನಿಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತಿರುವ ಸಂಖ್ಯೆ ಈಗ ಕಡಿಮೆ ಆಗಿದೆ. ಅಪರೂಪಕ್ಕೆ ಒಂದೊಂದು ಮೊಬೈಲ್​ಗಳನ್ನು ರಿಲೀಸ್ ಮಾಡುತ್ತಿದೆಯಷ್ಟೆ. ಹಲವು ದಿನಗಳ ಬಳಿಕ ಮೊನ್ನೆಯಷ್ಟೆ ವಿದೇಶದಲ್ಲಿ ರಿಯಲ್‌ಮಿ 10 ಪ್ರೊ ಸರಣಿಯ (Realme 10 5G) ಸ್ಮಾರ್ಟ್‌ಫೋನ್​ಗಳನ್ನು ಅನಾವರಣ ಮಾಡಿದ್ದ ಕಂಪನಿ ಇದೀಗ ಇದೇ ಮೊಬೈಲ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ರಿಯಲ್‌ ಮಿ 10 ಪ್ರೊ 5G (Realme 10 Pro) ಮತ್ತು ರಿಯಲ್‌ ಮಿ 10 ಪ್ರೊ + 5G ಎಂಬ ಎರಡು ಮೊಬೈಲ್ ಇದೆ. ಈ ಎರಡೂ ಸ್ಮಾರ್ಟ್​ಫೋನ್​ಗಳಲ್ಲಿ ಅತ್ಯಂತ ಬಲಿಷ್ಠವದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ನೀಡಲಾಗಿದೆ. ಹಾಗಾದರೆ ಈ ಮೊಬೈಲ್​ಗಳ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ರಿಯಲ್‌ ಮಿ 10ಪ್ರೊ 5G ಸ್ಮಾರ್ಟ್‌ಫೋನ್‌ ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM + 128GB ಸ್ಟೋರೇಜ್ ಮಾದರಿಯ ಬೆಲೆ 18,999ರೂ. ಆಗಿದೆ. 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 19,999ರೂ. ನಿಗದಿ ಮಾಡಲಾಗಿದೆ. ಅಂತೆಯೆ ರಿಯಲ್‌ ಮಿ 10 ಪ್ರೊ+ 5G ಸ್ಮಾರ್ಟ್‌ಫೋನ್‌ 6GB RAM + 128GB ಸ್ಟೋರೇಜ್ ಆಯ್ಕೆಯ ಬೆಲೆ 24,999ರೂ., 8GB RAM + 128GB ಸ್ಟೋರೇಜ್ ಮಾದರಿಗೆ 25,999ರೂ. ಇದೆ. 8GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಯ ಬೆಲೆ 27,999ರೂ. ಆಗಿದೆ. ರಿಯಲ್‌ ಮಿ 10ಪ್ರೊ 5G ಡಿಸೆಂಬರ್ 16 ರಿಂದ ಹಾಗೂ ರಿಯಲ್‌ ಮಿ 10ಪ್ರೊ+ 5G ಡಿಸೆಂಬರ್ 14 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌ ಮತ್ತು ರಿಯಲ್‌ ಮಿ.ಕಾಮ್‌, ಪ್ರಮುಖ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಸಿಗಲಿದೆ.

ರಿಯಲ್‌ ಮಿ 10 ಪ್ರೊ 5G:

ರಿಯಲ್‌ ಮಿ 10 ಪ್ರೊ 5G ಸ್ಮಾರ್ಟ್‌ಫೋನ್‌ 1,080x 2,400ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.72 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದರಲ್ಲಿ 120Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ನೀಡಲಾಗಿದ್ದು, ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W SuperVOOC ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್‌ ಮಾಡಬಹುದು ಎಂದು ಕಂಪನಿ ಹೇಳಿಕೊಂಡಿದೆ.

ರಿಯಲ್‌ ಮಿ 10ಪ್ರೊ + 5G:

ರಿಯಲ್‌ ಮಿ 10ಪ್ರೊ + 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಆಕ್ಟಾ-ಕೋರ್ 6nm ಮೀಡಿಯಾ ಟೆಕ್ ಡೈಮೆನ್ಸಿಟಿ 1080 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ G68 GPU ಸಪೋರ್ಟ್‌ ಪಡೆದಿದೆ. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಕೂಡ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM6 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W SuperVOOC ಚಾರ್ಜಿಂಗ್ ಬೆಂಬಲಿಸಲಿದೆ. ಇದರಿಂದ 47 ನಿಮಿಷಗಳಲ್ಲಿ 100% ಚಾರ್ಜ್‌ ಮಾಡಬಹುದಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:09 pm, Fri, 9 December 22

Follow Us
TV9 Web
TV9 Web

TV9 Kannada

Read More
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?