Realme GT Neo 5 Pro: ಬಿಡುಗಡೆಗೆ ಸಜ್ಜಾಗಿ ನಿಂತಿದೆ ರೋಚಕತೆ ಸೃಷ್ಟಿಸಿರುವ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್

ರಿಯಲ್ ಮಿ ಈ ವರ್ಷದ ಆರಂಭದಲ್ಲಿ ರಿಯಲ್‌ ಮಿ ಜಿಟಿ ನಿಯೋ 5 ಎಂಬ ಹೊಸ ಫೋನ್‌ ಅನಾವರಣ ಮಾಡಿತ್ತು. ಇದೀಗ ಇದೇ ಸರಣಿ ಅಡಿಯಲ್ಲಿ ಹೊಸದಾಗಿ ರಿಯಲ್‌ ಮಿ GT ನಿಯೋ 5 ಪ್ರೊ ಫೋನ್‌ ಅನ್ನು ಲಾಂಚ್ ಮಾಡಲು ಸಜ್ಜಾಗಿದೆ.

Realme GT Neo 5 Pro: ಬಿಡುಗಡೆಗೆ ಸಜ್ಜಾಗಿ ನಿಂತಿದೆ ರೋಚಕತೆ ಸೃಷ್ಟಿಸಿರುವ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್
Realme GT Neo 5 Pro
Follow us
Vinay Bhat
|

Updated on: Jun 12, 2023 | 4:24 PM

ಟೆಕ್ ಮಾರ್ಕೆಟ್​ನಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ಪ್ರಸಿದ್ಧ ರಿಯಲ್ ಮಿ (Realme) ಕಂಪನಿ ಈಗ ಹಿಂದಿನ ರೀತಿಯಿಲ್ಲ. ಸಾಕಷ್ಟು ಬೆಳವಣಿಗೆ ಕಂಡಿದೆ. ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ಸಮಯ ತೆಗೆದುಕೊಂಡು ಆಕರ್ಷಕವಾದ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ಒಂದೊಂದು ಸ್ಮಾರ್ಟ್​ಫೋನ್​ನಲ್ಲಿ ಸದಾ ಹೊಸತನವನ್ನು ಬಿಡುಗಡೆ ಮಾಡುವ ರಿಯಲ್ ಮಿ ಈ ವರ್ಷದ ಆರಂಭದಲ್ಲಿ ವಿಶ್ವದ ಮೊದಲ 240W ವೇಗದ ಚಾರ್ಜಿಂಗ್‌ ಬೆಂಬಲಿಸುವ ರಿಯಲ್‌ ಮಿ ಜಿಟಿ ನಿಯೋ 5 (Realme GT Neo 5) ಎಂಬ ಹೊಸ ಫೋನ್‌ ಅನಾವರಣ ಮಾಡಿತ್ತು. ಇದೀಗ ಇದೇ ಸರಣಿ ಅಡಿಯಲ್ಲಿ ಹೊಸದಾಗಿ ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಲು ಸಜ್ಜಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆಗಳಿವೆ? ಎಂಬುದನ್ನು ನೋಡೋಣ.

ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್​ಫೋನ್​ನ ಬೆಲೆ ಬಹಿರಂಗ ಗೊಂಡಿಲ್ಲ. ಆದರೆ, ಮೂಲಗಳ ಪ್ರಕಾರ 40,000 ರೂ. ಆಸುಪಾಸಿನಲ್ಲಿ ರಬಹುದು ಎಂದು ಅಂದಾಜಿಸಲಾಗಿದೆ. ಇದು 16GB RAM ಮತ್ತು 256GB/512GB ಇಂಟರ್ನಲ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗಳನ್ನು ಪಡೆದಿರಲಿದೆ.

Infinix Note 30 5G: ಭಾರತಕ್ಕೆ ಬರುತ್ತಿದೆ 108MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್: ಯಾವುದು?, ಬೆಲೆ ಎಷ್ಟು ನೋಡಿ

ಇದನ್ನೂ ಓದಿ
Image
Google Pixel: ಎಫ್1 ಇನ್ಫೋ ಜೊತೆ ಗೂಗಲ್ ಸಹಭಾಗಿತ್ವ: ಪಿಕ್ಸೆಲ್ ಸ್ಮಾರ್ಟ್​ಫೋನ್​ಗಳ ಸರ್ವೀಸ್ ಸಮಸ್ಯೆಗೆ ಸಿಕ್ಕಿತು ಪರಿಹಾರ
Image
Best Camera Phones: 50,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್ ಕ್ಯಾಮೆರಾ ಸ್ಮಾರ್ಟ್​ಫೋನ್​ಗಳು ಇಲ್ಲಿದೆ ನೋಡಿ
Image
WhatsApp New Feature: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಅಚ್ಚರಿಯ ಫೀಚರ್: ಆಂಡ್ರಾಯ್ಡ್ ಬಳಕೆದಾರರಿಗೆ ಸಂತಸದ ಸುದ್ದಿ
Image
Tech Tips: ಪೇಟಿಯಂ ಆ್ಯಪ್ ಮೂಲಕ ರೈಲು ಎಲ್ಲಿದೆ ಎಂದು ತಿಳಿಯುವುದು ಹೇಗೆ?: ಇಲ್ಲಿದೆ ಟ್ರಿಕ್

ಈ ಸ್ಮಾರ್ಟ್​ಫೋನ್ ಫೋನ್ 6.7 ಇಂಚಿನ 1.5K OLED ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಇದು 144Hz ರಿಫ್ರೆಶ್ ರೇಟ್‌ ನೀಡಲಿದೆ ಎನ್ನಲಾಗಿದೆ. 1400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. 2160Hz PWM ಡಿಮಿಂಗ್ ಹೊಂದಿರಲಿದ್ದು, ಬಲಿಷ್ಠವಾದ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವುದು ಬಹುತೇಕ ಖಚಿತವಾಗಿದೆ. ಇತ್ತೀಚಿನ ಆಂಡ್ರಾಯ್ಡ್ 13 ಓಎಸ್‌ ಸಫೋರ್ಟ್‌ ಪಡೆದಿರಲಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ರಿಯಲ್‌ ಮಿ GT ನಿಯೋ 5 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿರುವ ಸಾಧ್ಯತೆ ಇದೆ. ಇದರಲ್ಲಿ 50 ಮೆಗಾ ಪಿಕ್ಸೆಲ್‌ ಪ್ರಾಥಮಿಕ ಕ್ಯಾಮೆರಾ, 8 ಮೆಗಾ ಪಿಕ್ಸೆಲ್‌ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ ಮತ್ತು 2 ಮೆಗಾ ಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿರಲಿದೆ. ಮುಂಭಾಗ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾ ಪಿಕ್ಸೆಲ್‌ ಕ್ಯಾಮೆರಾ ಅಳವಡಿಸಲಾಗಿದೆ.

ಈ ಸ್ಮಾರ್ಟ್‌ಫೋನ್​ನಲ್ಲಿ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಪವರ್ ನೀಡಲಾಗಿದ್ದು, ಇದಕ್ಕೆ ಪೂರಕವಾಗಿ 100W ಫಾಸ್ಟ್‌ ಚಾರ್ಜಿಂಗ್ ಸಪೋರ್ಟ್‌ ಸಹ ಇದೆ. ಉಳಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಸಪೋರ್ಟ್ ಮಾಡಲಿದೆ. 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಇರಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್