ರಿಯಲ್ ಮಿ (Realme) ಪ್ರಿಯರಿಗೆ ಇದೀಗ ಹಬ್ಬವೋ ಹಬ್ಬ. ಎರಡು ಹೊಸ ಸ್ಮಾರ್ಟ್ಫೋನ್ಗಳನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಬಜೆಟ್ ಪ್ರಿಯರಿಗೆಂದೇ ಬರೋಬ್ಬರಿ 108MP ಕ್ಯಾಮೆರಾದ ರಿಯಲ್ ಮಿ 9 4G (Reamle 9 4G) ಫೋನ್ ಲಾಂಚ್ ಮಾಡಿದೆ. ಇದರ ಜೊತೆಗೆ ಹೊಸ ರಿಯಲ್ ಮಿ ಜಿಟಿ 2 ಪ್ರೊ (Realme GT 2 Pro) ಸ್ಮಾರ್ಟ್‌ಫೋನ್ ಅನ್ನು ಕೂಡ ದೇಶದಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದ್ದು ಸಾಕಷ್ಟು ಬಲಿಷ್ಠವಾಗಿದೆ. ಜೊತೆಗೆ LTPO 2.0-ಬೆಂಬಲಿತ ಸೂಪರ್ ರಿಯಾಲಿಟಿ ಡಿಸ್‌ಪ್ಲೇ, 5,000mAh ಸಾಮರ್ಥ್ಯದ ಬ್ಯಾಟರಿ, ಆಕರ್ಷಕ ಕ್ಯಾಮೆರಾದಿಂದ ಆವೃತ್ತವಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ರಿಯಲ್ ಮಿ GT 2 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗುತ್ತಿದೆ. ಇದರ ಬೇಸ್ ಮಾಡೆಲ್ 8GB RAM ಮತ್ತು 128GB ಸ್ಟೋರೇಜ್ ಮಾದರಿಗೆ 49,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 12GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 57,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಪೇಪರ್ ಗ್ರೀನ್, ಪೇಪರ್ ವೈಟ್ ಮತ್ತು ಸ್ಟೀಲ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ರಿಯಲ್ ಮಿ GT 2 ಪ್ರೊ ಇದೇ ಏಪ್ರಿಲ್ 14 ರಿಂದ ರಿಯಲ್ ಮಿ.ಕಾಮ್ ಅಧಿಕೃತ ಭಾರತ ವೆಬ್ಸೈಟ್, ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಚಿಲ್ಲರೆ ಅಂಗಡಿಗಳ ಮೂಲಕ ಖರೀದಿಗೆ ಸಿಗಲಿದೆ.
ಏನು ವಿಶೇಷತೆ?:
ರಿಯಲ್ ಮಿ GT 2 ಪ್ರೊ ಸ್ಮಾರ್ಟ್‌ಫೋನ್ 1,440×3,216 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ 2K LTPO 2.0 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ನಿಂದ ಕೂಡಿದೆ. ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI 3.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಎಲೆಕ್ಟ್ರಾನಿಕ್ ಇಮೇಜ್ ಸ್ಟೆಬಿಲೈಸೇಶನ್ ಟೆಕ್ನಾಲಜಿಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದು 65W ಸೂಪರ್‌ಡಾರ್ಟ್ ಚಾರ್ಜ್ ವರ್ಧಿತ ವೇಗದ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.
Realme 9 4G: ಭಾರತದಲ್ಲಿ ರಿಯಲ್ ಮಿ 9 ಬಿಡುಗಡೆ: ಇಷ್ಟೊಂದು ಕಡಿಮೆ ಬೆಲೆಗೆ 108MP ಕ್ಯಾಮೆರಾ ಫೋನ್
Google Maps: ಗೂಗಲ್ ಮ್ಯಾಪ್ನಲ್ಲಿ ಟೋಲ್ ದರದ ಮಾಹಿತಿ: ಆಂಡ್ರಾಯ್ಡ್, ಐಒಎಸ್ ಬಳಕೆದಾರರು ಇಲ್ಲಿ ಗಮನಿಸಿ