Narzo 50A Prime: ಕೇವಲ 11,499 ರೂ. ಗೆ ಬಿಡುಗಡೆ ಆಯಿತು ರಿಯಲ್‌ ಮಿ ನಾರ್ಜೋ 50A ಪ್ರೈಮ್: ಏನಿದೆ ಫೀಚರ್ಸ್?

Realme Narzo 50A Prime: ಭಾರತದಲ್ಲಿ ರಿಯಲ್‌ ಮಿ ನಾರ್ಜೊ 50A ಪ್ರೈಮ್‌ ಫೋನ್‌ ಬಿಡುಗಡೆ ಆಗಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ T612 ಪ್ರೊಸೆಸರ್‌ ಬಲವನ್ನು ಪಡೆದಿದ್ದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ನೀಡಲಾಗಿದೆ.

Narzo 50A Prime: ಕೇವಲ 11,499 ರೂ. ಗೆ ಬಿಡುಗಡೆ ಆಯಿತು ರಿಯಲ್‌ ಮಿ ನಾರ್ಜೋ 50A ಪ್ರೈಮ್: ಏನಿದೆ ಫೀಚರ್ಸ್?
Realme Narzo 50A Prime
Follow us
TV9 Web
| Updated By: Vinay Bhat

Updated on: Apr 25, 2022 | 2:48 PM

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ (Realme) ಕಂಪನಿ 2022ರಲ್ಲಂತು ಅತ್ಯುತ್ತಮ ಮೊಬೈಲ್​​ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್​ಫೋನ್​ಗಳು ಬಿಡುಗಡೆಗೆ ಸಜ್ಜಾಗಿವೆ ನಿಂತಿವೆ. ಇದರ ನಡುವೆ ಭಾರತದಲ್ಲಿ ರಿಯಲ್‌ ಮಿ ನಾರ್ಜೊ 50A ಪ್ರೈಮ್‌ (Realme Narzo 50A Prime) ಫೋನ್‌ ಬಿಡುಗಡೆ ಮಾಡಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ T612 ಪ್ರೊಸೆಸರ್‌ ಬಲವನ್ನು ಪಡೆದಿದ್ದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ನೀಡಲಾಗಿದೆ. ಜೊತೆಗೆ ಇದೊಂದಿ ಬಜೆಟ್ ಫೋನ್ ಎಂಬುದು ವಿಶೇಷ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇವೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ರಿಯಲ್‌ ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ಮಾದರಿಗೆ ಕೇವಲ 11,499 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 128GB ರೂಪಾಂತರದ ಬೆಲೆ 12,499 ರೂ. ಆಗಿದೆ. ಈ ಫೋನ್‌ ಫ್ಲ್ಯಾಶ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇದೇ ಏಪ್ರಿಲ್ 28 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ರಿಯಲ್‌ ಮಿ ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್ ಸ್ಟೋರ್‌ಗಳ ಮೂಲಕ ಸೇಲ್ ಕಾಣಲಿದೆ.

ಏನು ವಿಶೇಷತೆ?:

ರಿಯಲ್‌ ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ 2,408×1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇ 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. 12nm ಆಕ್ಟಾ-ಕೋರ್ ಯೂನಿಸೋಕ್‌ T612 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ VGA B&W ಪೊಟ್ರೆಟ್‌ ಸೇನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

Motorola G52: ಕಡಿಮೆ ಬೆಲೆ-ಭರ್ಜರಿ ಫೀಚರ್: ಭಾರತದಲ್ಲಿ ಮೋಟೋ G52 ಸ್ಮಾರ್ಟ್‌ಫೋನ್‌ ಬಿಡುಗಡೆ

Micromax IN2c: ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ನಾಳೆ ಅಪ್ಪಳಿಸಲಿದೆ ಬೊಂಬಾಟ್ ಫೀಚರ್ಸ್​​ನ ದೇಶೀಯ ಫೋನ್

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ