Realme 10S 5G: ರಿಯಲ್ ಮಿಯಿಂದ ಮತ್ತೊಂದು ಸ್ಮಾರ್ಟ್​ಫೋನ್ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್

ರಿಯಲ್‌ ಮಿ ಸದ್ದಿಲ್ಲದೆ ನೂತನವಾಗಿ ರಿಯಲ್‌ ಮಿ 10ಎಸ್ 5ಜಿ (Realme 10S 5G) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಬಲಿಷ್ಠ ಪ್ರೊಸೆಸರ್‌, 5000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ.

Realme 10S 5G: ರಿಯಲ್ ಮಿಯಿಂದ ಮತ್ತೊಂದು ಸ್ಮಾರ್ಟ್​ಫೋನ್ ಬಿಡುಗಡೆ: ಇದು ಬಜೆಟ್ ಬೆಲೆಯ ಬಂಪರ್ ಫೋನ್
Realme 10S 5G
Edited By:

Updated on: Dec 17, 2022 | 1:18 PM

2022ನೇ ವರ್ಷ ಮುಗಿಯುತ್ತಿದ್ದಂತೆ ಪ್ರಸಿದ್ಧ ರಿಯಲ್ ಮಿ (Realme) ಸಂಸ್ಥೆ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ 108 ಮೆಗಾಫಿಕ್ಸೆಲ್ ಕ್ಯಾಮೆರಾದ ರಿಯಲ್‌ ಮಿ 10 ಪ್ರೊ 5G (Realme 10 Pro 5G) ಮತ್ತು ರಿಯಲ್‌ ಮಿ 10 ಪ್ರೊ + 5G ಫೋನನ್ನು ಅನಾವರಣ ಮಾಡಿತ್ತು. ಇದೀಗ ಸದ್ದಿಲ್ಲದೆ ನೂತನವಾಗಿ ರಿಯಲ್‌ ಮಿ 10ಎಸ್ 5ಜಿ (Realme 10S 5G) ಸ್ಮಾರ್ಟ್‌ಫೋನ್‌ ಅನ್ನು ರಿಲೀಸ್ ಮಾಡಿದೆ. ಇದೊಂದು ಬಜೆಟ್ ಬೆಲೆಯ ಫೋನಾಗಿದ್ದರೂ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌, 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ನೀಡಲಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನು ಫೀಚರ್ಸ್ ಇದೆ ಎಂಬುದನ್ನು ನೋಡೋಣ.

  • ರಿಯಲ್‌ ಮಿ 10S 5G ಸದ್ಯಕ್ಕೆ ಚೀನಾದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಈ ತಿಂಗಳ ಅಂತ್ಯಕ್ಕೆ ಅಥವಾ ಮುಂದಿನ ವರ್ಷ ಭಾರತಕ್ಕೂ ಕಾಲಿಡಲಿದೆ.
  • ಈ ಫೋನಿನ 8GB + 128GB ಬೆಲೆಯು ಚೀನಾದಲ್ಲಿ CNY 1099, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 13,100ರೂ. ಎನ್ನಬಹುದು. ಹಾಗೆಯೇ 8GB + 256GB ವೇರಿಯಂಟ್‌ ಬೆಲೆಯು CNY 1299 (ಭಾರತದಲ್ಲಿ ಅಂದಾಜು 15,400ರೂ.).
  • ಇದನ್ನೂ ಓದಿ
    Tech Tips: ಕಳೆದ 24 ಗಂಟೆಗಳಲ್ಲಿ ನಿಮ್ಮ ವಾಟ್ಸ್ಆ್ಯಪ್ ಡಿಪಿ ಯಾರು ನೋಡಿದ್ದಾರೆ ತಿಳಿಯಬೇಕೆ?
    Realme 10 Pro: 108MP ಕ್ಯಾಮೆರಾ, 5000mAh ಬ್ಯಾಟರಿ: ರಿಯಲ್‌ ಮಿ 10 ಪ್ರೊ 5G ಫೋನ್ ಈಗ ಖರೀದಿಗೆ ಲಭ್ಯ
    Galaxy M04: ಇಂದು ಗ್ಯಾಲಕ್ಸಿ M04 ಸ್ಮಾರ್ಟ್‌ಫೋನ್‌ ಮಾರಾಟ: ಇದರ ಬೆಲೆ ಕೇವಲ 9,499 ರೂ.
    Nokia C31: ವಿದೇಶದಲ್ಲಿ ಧೂಳೆಬ್ಬಿಸಿದ ನೋಕಿಯಾ C31 ಭಾರತದಲ್ಲಿ ಬಿಡುಗಡೆ: ಬೆಲೆ ಎಷ್ಟು?
  • ಈ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇ ಹೊಂದಿದೆ.
  • ಇದು 60Hz ರಿಫ್ರೆಶ್ ರೇಟ್‌ ಮತ್ತು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಬೆಂಬಲಿಸಲಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಪಡೆದಿದೆ.
  • ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಸದ್ಯದಲ್ಲೇ ಆಂಡ್ರಾಯ್ಡ್‌ 13 ಓಎಸ್‌ಗೆ ಅಪ್‌ಡೇಟ್‌ ಸಹ ಸಿಗಲಿದೆ ಎಂದು ಕಂಪನಿ ಹೇಳಿದೆ.
  • ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ರಿಯಲ್‌ಮಿ 10S 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ.
  • ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಮುಂಭಾಗದಲ್ಲಿ 8 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. 33 ವೋಲ್ಟ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿ ನೀಡಲಾಗಿದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G VoLTE, ವೈ-ಫೈ 802.1ac, ಬ್ಲೂಟೂತ್ 5.2, ಜಿಪಿಎಸ್‌, USB-C ಪೋರ್ಟ್ ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:18 pm, Sat, 17 December 22