AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Realme Narzo 30: ರಿಯಲ್ ಮಿಯಿಂದ ಬಂಪರ್ ಕೊಡುಗೆ: ನಾರ್ಜೊ 30 5G ಈಗ ಹೊಸ ವೇರಿಯೆಂಟ್​ನಲ್ಲಿ ಲಭ್ಯ

ಈ ಹಿಂದೆ 6GB RAM ಮತ್ತು 128GB ಸ್ಟೋರೆಜ್​ನ ಕೇವಲ ಒಂದು ಆಯ್ಕೆಯಲ್ಲಿ 15,999 ರೂ. ಗೆ ಲಭ್ಯವಿದ್ದು ರಿಯಲ್ ಮಿ ನಾರ್ಜೋ 30 5G ಈಗ 4GB RAM ಮತ್ತು 64GB ಸ್ಟೋರೆಜ್ ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ ಬೆಲೆ 13,999 ರೂ. ಆಗಿದೆ.

Realme Narzo 30: ರಿಯಲ್ ಮಿಯಿಂದ ಬಂಪರ್ ಕೊಡುಗೆ: ನಾರ್ಜೊ 30 5G ಈಗ ಹೊಸ ವೇರಿಯೆಂಟ್​ನಲ್ಲಿ ಲಭ್ಯ
Realme Narzo 30 5G
TV9 Web
| Updated By: Vinay Bhat|

Updated on:Aug 24, 2021 | 12:46 PM

Share

ಭಾರತದಲ್ಲಿ ಕಡಿಮೆ ಬೆಲೆಗೆ ಆಕರ್ಷಕ ಸ್ಮಾರ್ಟ್ ಫೋನುಗಳನ್ನು ಬಿಡುಗಡೆ ಮಾಡಿ ಸೈ ಎನಿಸಿಕೊಂಡಿರುವ ರಿಯಲ್ ಮಿ ಕಂಪೆನಿ ಸದ್ಯ ತನ್ನ ನಾರ್ಜೊ 30 5G (Realme Narzo 30) ಸ್ಮಾರ್ಟ್‌ಫೋನ್‌ ನಲ್ಲಿ ಹೊಸ ವೇರಿಯೆಂಟ್ ಅನ್ನು ಬಿಡುಗಡೆ ಮಾಡಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ ಪ್ರೊಸೆಸರ್, 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರುವ ಈ ಫೋನ್ ಈಗ 4GB RAM ಮತ್ತು 64GB ಸ್ಟೋರೆಜ್ ಆಯ್ಕೆಯಲ್ಲಿ ಅತಿ ಕಡಿಮೆ ಬೆಲೆಗೆ ಲಭ್ಯವಿದೆ.

ಈ ಹಿಂದೆ 6GB RAM ಮತ್ತು 128GB ಸ್ಟೋರೆಜ್​ನ ಕೇವಲ ಒಂದು ಆಯ್ಕೆಯಲ್ಲಿ 15,999 ರೂ. ಗೆ ಲಭ್ಯವಿದ್ದು ರಿಯಲ್ ಮಿ ನಾರ್ಜೊ 30 5G ಈಗ 4GB RAM ಮತ್ತು 64GB ಸ್ಟೋರೆಜ್ ಮಾದರಿಯಲ್ಲಿ ಬಿಡುಗಡೆ ಆಗಿದೆ. ಇದರ ಬೆಲೆ 13,999 ರೂ. ಆಗಿದೆ. ರಿಯಲ್ ಮಿ ಫ್ಯಾನ್ ಫೆಸ್ಟಿವಲ್ ಪ್ರಯುಕ್ತ ಈ ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಸೇಲ್ ಶುರುವಾಗಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ ಸೇರಿದಂತೆ ರಿಯಲ್ ಮಿ ಇಂಡಿಯಾ ವೆಬ್​ಸೈಟ್​ನಲ್ಲಿ ಮಾರಾಟವಾಗುತ್ತಿದೆ.

ರಿಯಲ್‌ ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ 1,080*2,400 ಫಿಕ್ಸೆಲ್​ನ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಸ್ಕ್ರೀನ್-ಟು-ಬಾಡಿ ಅನುಪಾತ 90.5 ಹೊಂದಿದೆ.

ಇದು ಆಕ್ಟಾ-ಕೋರ್ ಮೀಡಿಯಾ ಟೆಕ್  ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಬಳಸಿ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸಿಕೊಳ್ಳಬಹುದಾಗಿದೆ.

ರಿಯಲ್‌ ಮಿ ನಾರ್ಜೊ 30 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ 4ಕೆ 30 ಎಫ್‌ಪಿಎಸ್ ವೀಡಿಯೊಗಳಿಗೆ ಬೆಂಬಲಿಸಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಇನ್-ಡಿಸ್ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ-ಸಿ ಪೋರ್ಟ್ ಮೂಲಕ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ.

ಮೊಬೈಲ್ ಬಳಕೆದಾರರೇ ಎಚ್ಚರ: ಈ 8 ಆ್ಯಪ್​ಗಳನ್ನು ತಕ್ಷಣವೇ ಡಿಲೀಟ್ ಮಾಡಿ

Vivo Y33s: 50MP ಕ್ಯಾಮೆರಾ, ಫಾಸ್ಟ್ ಚಾರ್ಜಿಂಗ್: ಬಜೆಟ್ ಬೆಲೆಗೆ ವಿವೋ Y33s ಸ್ಮಾರ್ಟ್​ಫೋನ್ ರಿಲೀಸ್

(Realme Narzo 30 5G Gets 4GB RAM 64GB Model SAle on Flipkart and Realme Fan Festival 2021 Starts August 24)

Published On - 12:45 pm, Tue, 24 August 21

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು