AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narzo 50A Prime: 11,499 ರೂಪಾಯಿಯ ರಿಯಲ್‌ ಮಿ ನಾರ್ಜೋ 50A ಪ್ರೈಮ್ ಫೋನ್ ಇಂದಿನಿಂದ ಖರೀದಿಗೆ ಲಭ್ಯ

Realme Narzo 50A: ರಿಯಲ್‌ ಮಿ ನಾರ್ಜೊ 50A ಪ್ರೈಮ್‌ ಸ್ಮಾರ್ಟ್​​ಫೋನ್ ಇದೀಗ ಮೊದಲ ಸೇಲ್ ಕಾಣುತ್ತಿದೆ. ಆಕ್ಟಾ-ಕೋರ್ ಯೂನಿಸೋಕ್‌ T612 ಪ್ರೊಸೆಸರ್‌ ಬಲ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರುವ ಈ ಫೋನ್ ಬಜೆಟ್ ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿದೆ.

Narzo 50A Prime: 11,499 ರೂಪಾಯಿಯ ರಿಯಲ್‌ ಮಿ ನಾರ್ಜೋ 50A ಪ್ರೈಮ್ ಫೋನ್ ಇಂದಿನಿಂದ ಖರೀದಿಗೆ ಲಭ್ಯ
Realme Narzo 50A Prime
TV9 Web
| Edited By: |

Updated on: Apr 28, 2022 | 3:09 PM

Share

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ (Realme) ಕಂಪನಿ 2022ರಲ್ಲಂತು ಅತ್ಯುತ್ತಮ ಮೊಬೈಲ್​​ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್​ಫೋನ್​ಗಳು ಬಿಡುಗಡೆಗೆ ಸಜ್ಜಾಗಿವೆ ನಿಂತಿವೆ. ಇದರ ನಡುವೆ ಭಾರತದಲ್ಲಿ ಮೊನ್ನೆಯಷ್ಟೆ ರಿಯಲ್‌ ಮಿ ನಾರ್ಜೊ 50ಎ ಪ್ರೈಮ್‌ (Realme Narzo 50A Prime) ಫೋನ್‌ ಬಿಡುಗಡೆ ಮಾಡಿತ್ತು. ಆಕ್ಟಾ-ಕೋರ್ ಯೂನಿಸೋಕ್‌ T612 ಪ್ರೊಸೆಸರ್‌ ಬಲ, ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರುವ ಈ ಸ್ಮಾರ್ಟ್​​ಫೋನ್ ಇದೀಗ ಮೊದಲ ಸೇಲ್ ಕಾಣುತ್ತಿದೆ. ಇದೊಂದು ಬಜೆಟ್ ಫೋನ್ ಆಗಿದ್ದು ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇವೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ರಿಯಲ್‌ ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ಮಾದರಿಗೆ ಕೇವಲ 11,499 ರೂ. ನಿಗದಿ ಮಾಡಲಾಗಿದೆ. ಹಾಗೆಯೆ 4GB RAM ಮತ್ತು 128GB ರೂಪಾಂತರದ ಬೆಲೆ 12,499 ರೂ. ಆಗಿದೆ. ಈ ಫೋನ್‌ ಫ್ಲ್ಯಾಶ್ ಬ್ಲ್ಯಾಕ್ ಮತ್ತು ಫ್ಲ್ಯಾಶ್ ಬ್ಲೂ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಏಪ್ರಿಲ್ 28 ಇಂದಿನಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ರಿಯಲ್‌ ಮಿ ಕಂಪನಿಯ ಆನ್‌ಲೈನ್ ಸ್ಟೋರ್ ಮತ್ತು ರಿಟೇಲ್ ಸ್ಟೋರ್‌ಗಳ ಮೂಲಕ ಇದರ ಸೇಲ್ ಆರಂಭವಾಗಿದ.

ಏನು ವಿಶೇಷತೆ?:

ರಿಯಲ್‌ ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ 2,408×1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇ 600 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. 12nm ಆಕ್ಟಾ-ಕೋರ್ ಯೂನಿಸೋಕ್‌ T612 SoC ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI R ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ VGA B&W ಪೊಟ್ರೆಟ್‌ ಸೇನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ರಿಯಲ್‌ಮಿ ನಾರ್ಜೋ 50A ಪ್ರೈಮ್ ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

iQOO Z6 Pro 5G: ಭರ್ಜರಿ ಕ್ಯಾಮೆರಾ, ಬೊಂಬಾಟ್ ಬ್ಯಾಟರಿ: ದೇಶದಲ್ಲಿ ಐಕ್ಯೂ Z6 ಪ್ರೊ 5G, ಐಕ್ಯೂ Z6 4G ​​ಫೋನ್ ಬಿಡುಗಡೆ

Realme GT 2: ಇಂದು ರಿಯಲ್‌ ಮಿ GT 2 ಮಾರಾಟ: ಮೊದಲ ಸೇಲ್​ನಲ್ಲಿ ಬರೋಬ್ಬರಿ 5,000 ರೂ. ಡಿಸ್ಕೌಂಟ್

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್