ಭಾರತದಲ್ಲಿ ರಿಯಲ್ ಮಿ ನಾರ್ಜೋ 50i ಪ್ರೈಮ್ ಬಿಡುಗಡೆಗೆ ದಿನಾಂಕ ನಿಗದಿ: ಯಾವಾಗ?, ಬೆಲೆ ಎಷ್ಟು?
Realme Narzo 50i Prime: ರಿಯಲ್ ಮಿ ನಾರ್ಜೊ 50ಐ ಪ್ರೈಮ್ ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಲು ಕಂಪನಿ ಸಜ್ಜಾಗಿದೆ. ಇದೇ ಸೆಪ್ಟಂಬರ್ 13 ರಂದು ಈ ಫೋನ್ ಭಾರತಕ್ಕೆ ಕಾಲಿಡಲಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್ ಮಿ (Realme) ಕಂಪನಿ 2022ರಲ್ಲಂತು ಅತ್ಯುತ್ತಮ ಮೊಬೈಲ್ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್ಫೋನ್ಗಳು ಬಿಡುಗಡೆಗೆ ಸಜ್ಜಾಗಿವೆ ನಿಂತಿವೆ. ಇದರ ನಡುವೆ ಇದೀಗ ರಿಯಲ್ ಮಿ ನಾರ್ಜೊ 50ಐ ಪ್ರೈಮ್ (Realme Narzo 50i Prime) ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಲು ಕಂಪನಿ ಸಜ್ಜಾಗಿದೆ. ಇದೇ ಸೆಪ್ಟಂಬರ್ 13 ರಂದು ಈ ಫೋನ್ ಭಾರತಕ್ಕೆ ಕಾಲಿಡಲಿದೆ. ವಿದೇಶಿ ಮಾರುಕಟ್ಟೆಯಲ್ಲಿ ಈ ಫೋನ್ ಧೂಳಬ್ಬಿಸಿದ್ದು, ಅತ್ಯಂತ ಕಡಿಮೆ ಬೆಲೆಯ ಬೆಸ್ಟ್ ಫೋನ್ ಆಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್ ಇವೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ರಿಯಲ್ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್ ಒಂದು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಇದರ 3GB RAM ಮತ್ತು 32GB ಸ್ಟೋರೇಜ್ ರೂಪಾಂತರದ ಬೆಲೆ 10,000 ರೂ. ಒಳಗೆ ಇರಬಹುದು.
ಏನು ವಿಶೇಷತೆ?:
ರಿಯಲ್ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್ 720*1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇ 400 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿರುವ ಸಾಧ್ಯತೆ ಇದೆ.
ಯುನಿಸೆಕ್ T612 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್ ಮಿಯ R ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸಿಂಗಲ್ ಕ್ಯಾಮೆರಾ ಸೆಟಪ್ ಹೊಂದಿದ್ದು 8 ಮೆಗಾಫಿಕ್ಸೆಲ್ನಿಂದ ಆವೃತ್ತವಾಗಿದೆ. 5 ಮೆಗಾಪಿಕ್ಸೆಲ್ AI ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.
ರಿಯಲ್‌ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದಕ್ಕೆ ತಕ್ಕಂತೆ 18W ಫಾಸ್ಟ್ ಚಾರ್ಜಿಂಗ್ ನೀಡುವ ಸಾಧ್ಯತೆ ಇದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.