Realme Narzo 50i Prime: ಭಾರತಕ್ಕೆ ಬರುತ್ತಿದೆ ರಿಯಲ್‌ ಮಿಯ ಹೊಸ ಸ್ಮಾರ್ಟ್​ಫೋನ್: ಇದರ ಬೆಲೆ ಕೇವಲ …

| Updated By: Vinay Bhat

Updated on: Jun 19, 2022 | 11:06 AM

ಭಾರತದಲ್ಲಿ ಇದೀಗ ರಿಯಲ್‌ ಮಿ ನಾರ್ಜೊ 50ಐ ಪ್ರೈಮ್‌ (Realme Narzo 50i Prime) ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಫೋನ್ ಇದೇ ಜೂನ್ 22 ರಂದು ದೇಶೀಯ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ.

Realme Narzo 50i Prime: ಭಾರತಕ್ಕೆ ಬರುತ್ತಿದೆ ರಿಯಲ್‌ ಮಿಯ ಹೊಸ ಸ್ಮಾರ್ಟ್​ಫೋನ್: ಇದರ ಬೆಲೆ ಕೇವಲ …
Realme Narzo 50i prime
Follow us on

ಸ್ಮಾರ್ಟ್‌ಫೋನ್‌ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್​ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್‌ ಮಿ (Realme) ಕಂಪನಿ 2022ರಲ್ಲಂತು ಅತ್ಯುತ್ತಮ ಮೊಬೈಲ್​​ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್​ಫೋನ್​ಗಳು ಬಿಡುಗಡೆಗೆ ಸಜ್ಜಾಗಿವೆ ನಿಂತಿವೆ. ಇದರ ನಡುವೆ ಭಾರತದಲ್ಲಿ ಇದೀಗ ರಿಯಲ್‌ ಮಿ ನಾರ್ಜೊ 50ಐ ಪ್ರೈಮ್‌ (Realme Narzo 50i Prime) ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಫೋನ್ ಇದೇ ಜೂನ್ 22 ರಂದು ದೇಶೀಯ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಎರಡು ಕಲರ್​​ನಲ್ಲಿ ರಿಯಲ್‌ ಮಿ ನಾರ್ಜೋ 50i ಪ್ರೈಮ್ ರಿಲೀಸ್ ಆಗಲಿದ್ದು, ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರುವ ಸಾಧ್ಯತೆ ಇದೆ. ಜೊತೆಗೆ ಬಲಿಷ್ಠವಾಗಿ ಬ್ಯಾಟರಿ ಬ್ಯಾಕಪ್​ನೊಂದಿಗೆ ಬರಲಿದೆಯಂತೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟಿರಬಹುದು? ಏನೆಲ್ಲ ಫೀಚರ್ಸ್​ ಇವೆ ಎಂಬುದನ್ನು ನೋಡೋಣ.

ಬೆಲೆ ಎಷ್ಟು?:

ರಿಯಲ್‌ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೆಜ್ ಆಯ್ಕೆಯಲ್ಲಿ ಬಿಡುಗಡೆ ಆಗಲಿದೆ. ಇದು 4GB RAM ಮತ್ತು 64GB ಸ್ಟೋರೇಜ್ ಹಾಗೆಯೆ 4GB RAM ಮತ್ತು 128GB ರೂಪಾಂತರದಲ್ಲಿ ಖರೀದಿಗೆ ಸಿಗಲಿದೆ. ಇದರ ನಿಖರ ಬೆಲೆ ಎಷ್ಟು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಆದರೆ, ಮೂಲಗಳ ಪ್ರಕಾರ 10,000 ರೂ. ಒಳಗೆ ಇರಬಹುದೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ
Airtel: ಬರೋಬ್ಬರಿ 14 ಒಟಿಟಿ ಪ್ಲಾಟ್​ಫಾರ್ಮ್ ಉಚಿತ: ಏರ್ಟೆಲ್​ನ ಈ ಆಫರ್ ಮಿಸ್ ಮಾಡ್ಬೇಡಿ
Tech Tips: ಗೂಗಲ್​ನಲ್ಲಿ ನಿಮ್ಮ ಹೆಸರು ಹಾಕಿ ಸರ್ಚ್ ಮಾಡಿದ್ರೆ ಫೋಟೋ ಬರಬೇಕಾ: ಹಾಗಿದ್ರೆ ಹೀಗೆ ಮಾಡಿ
WhatsApp: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಫೀಚರ್: ಈಗ ಡಿಪಿ, ಲಾಸ್ಟ್​ ಸೀನ್ ಕೆಲವರಿಗೆ ಮಾತ್ರ ಕಾಣುವಂತೆ ಮಾಡಿ
ಸ್ಮಾರ್ಟ್​​ಫೋನ್ ಪ್ರಿಯರ ಹುಚ್ಚು ಹಿಡಿಸಿದೆ Nothing Phone (1): ಫಸ್ಟ್​ ಲುಕ್ ರಿಲೀಸ್

Tecno Pova 3: ಬಿಡುಗಡೆಗೆ ಒಂದೇ ದಿನ ಬಾಕಿ: ಟೆಕ್ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದೆ ಈ ಫೋನ್

ಏನು ವಿಶೇಷತೆ?:

ರಿಯಲ್‌ ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್‌ 720×1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ನೀಡಲಾಗಿದೆ. ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, 180Hz ಟಚ್‌ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. 12nm ಆಕ್ಟಾ-ಕೋರ್ ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ರಿಯಲ್‌ ಮಿ ಗೋ UI ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಇದರಲ್ಲಿ ಮುಖ್ಯ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ VGA B&W ಪೊಟ್ರೆಟ್‌ ಸೇನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ AI ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ರಿಯಲ್‌ಮಿ ನಾರ್ಜೋ 50i ಪ್ರೈಮ್ ಸ್ಮಾರ್ಟ್‌ಫೋನ್‌ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿರುವುದು ಖಚಿತವಾಗಿದೆ. ಇದು 18W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂಬ ಮಾತಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್ v5, GPS/ A-GPS, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:06 am, Sun, 19 June 22