ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಹೈರೇಂಜ್ ವರೆಗೆ ಫೋನ್ಗಳನ್ನು ಬಿಡುಗಡೆ ಮಾಡಿ ಯಶಸ್ವಿಯಾಗಿರುವ ಪ್ರಸಿದ್ಧ ರಿಯಲ್ ಮಿ (Realme) ಕಂಪನಿ ಈ ವರ್ಷ ಅತ್ಯುತ್ತಮ ಮೊಬೈಲ್ಗಳನ್ನು ಪರಿಚಯಿಸಿದೆ. ಈಗಾಗಲೇ ಸಾಲು ಸಾಲು ರಿಯಲ್ ಮಿ ಸ್ಮಾರ್ಟ್ಫೋನ್ಗಳು ಬಿಡುಗಡೆಗೆ ಸಜ್ಜಾಗಿವೆ ನಿಂತಿವೆ. ಇದರ ನಡುವೆ ಕಳೆದ ವಾರ ರಿಯಲ್ ಮಿ ಸಂಸ್ಥೆ ಭಾರತದಲ್ಲಿ ನೂತನ ರಿಯಲ್ ಮಿ ನಾರ್ಜೊ ಎನ್53 (Realme Narzo N53) ಎಂಬ ಹೊಸ ಫೋನ್ ಬಿಡುಗಡೆ ಮಾಡಿತ್ತು. ಸಾಕಷ್ಟು ಸಂಚಲನ ಸೃಷ್ಟಿಸಿರುವ ಈ ಫೋನ್ ಬಜೆಟ್ ಬೆಲೆಗೆ ಲಭ್ಯವಿದ್ದು, ಇಂದಿನಿಂದ ಸೇಲ್ ಕಾಣುತ್ತಿದೆ. ಹಾಗಾದರೆ ಈ ಫೋನಿನ ದರ ಎಷ್ಟು?, ಏನೆಲ್ಲ ಫೀಚರ್ಸ್ ಇದೆ ಎಂಬುದನ್ನು ನೋಡೋಣ.
ಬೆಲೆ ಎಷ್ಟು?:
ಭಾರತದಲ್ಲಿ ರಿಯಲ್ ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಅನಾವರಣಗೊಂಡಿದೆ. ಇದರ 4GB RAM + 64GB ಸ್ಟೋರೇಜ್ ಮಾದರಿಯ ಆಯ್ಕೆಗೆ 8,999 ರೂ. ಇದೆ. ಅಂತೆಯೆ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು 10,999 ರೂ. ನಿಗದಿ ಮಾಡಲಾಗಿದೆ. ಈ ಸ್ಮಾರ್ಟ್‌ಫೋನ್ ಫೆದರ್ ಬ್ಲಾಕ್ ಮತ್ತು ಫೆದರ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಇಂದಿನಿಂದ (ಮೇ 22) ಖರೀದಿಗೆ ಸಿಗುತ್ತಿದೆ. ಮೊದಲ ಸೇಲ್ ದಿನ ವಿಶೇಷ ಆಫರ್ ಘೋಷಣೆ ಮಾಡಲಾಗಿದ್ದು ಎಚ್‌ಡಿಎಫ್‌ಸಿ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 1,000 ರೂ. ರಿಯಾಯಿತಿ ಸಿಗಲಿದೆ.
Tech Tips: ಲ್ಯಾಪ್ಟಾಪ್ ತುಂಬಾ ಸ್ಲೋ ಆಗಿದೆಯೆ?: ಹಾಗಿದ್ರೆ ಈ ಟ್ರಿಕ್ ಉಪಯೋಗಿಸಿ ಸೂಪರ್ ಫಾಸ್ಟ್ ಮಾಡಿ
ಫೀಚರ್ಸ್ ಏನಿದೆ?:
ರಿಯಲ್ ಮಿ ನಾರ್ಜೋ N53 ಸ್ಮಾರ್ಟ್‌ಫೋನ್ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದ್ದು, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಬೆಲೆಗೆ ತಕ್ಕಂತೆ ಆಕ್ಟಾ-ಕೋರ್ ಯುನಿಸೊಕ್ T612 SoC ಪ್ರೊಸೆಸರ್ ವೇಗವನ್ನು ನೀಡಲಾಗಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ವಿಶೇಷ ಎಂದರೆ ಈ ಫೋನ್ನಲ್ಲಿ ಹೆಚ್ಚುವರಿ 6GB ವರ್ಚುವಲ್ RAM ಅನ್ನು ನೀಡಲಾಗಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2MP ಸೆನ್ಸಾರ್ ಪಡೆದಿದೆ. ಇದಲ್ಲದೆ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.
ರಿಯಲ್ ಮಿ ನಾರ್ಜೋ N53 ಸ್ಮಾರ್ಟ್‌ಫೋನ್ ದೀರ್ಘ ಸಮಯ ಬಾಳಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೈರ್ಡ್ ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕಂಪನಿ ಹೇಳಿರುವ ಪ್ರಕಾರ ಇದರಿಂದ 30 ನಿಮಿಷಗಳಲ್ಲಿ 0% ನಿಂದ 50% ವರೆಗೆ ಚಾರ್ಜ್ ಮಾಡಬಹುದು. ಉಳಿದಂತೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಇದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ