Best Smartphones: ಮಾರುಕಟ್ಟೆಯಲ್ಲಿ 10,000 ರೂ. ಒಳಗೆ ಸಿಗುತ್ತಿರುವ ಬೆಸ್ಟ್ ಸ್ಮಾರ್ಟ್ಫೋನ್ಗಳು ಇಲ್ಲಿದೆ ನೋಡಿ
Smartphones Under Rs.10,000: ನೀವು ಕಡಿಮೆ ಬೆಲೆಗೆ ಹೊಸ ಮೊಬೈಲ್ ಖರೀದಿಸುವ ಪ್ಲಾನ್ನಲ್ಲಿದ್ದರೆ 10,000 ರೂ. ಒಳಗೆ ಲಭ್ಯವಿರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳ ಪಟ್ಟಿ ಇಲ್ಲಿದೆ ನೋಡಿ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ಇಂದು ಲೆಕ್ಕವಿಲ್ಲದಷ್ಟು ಬಜೆಟ್ ಫೋನ್ಗಳಿವೆ. ಕಡಿಮೆ ಎಂದರೂ ವಾರಕ್ಕೆ 2,3 ಮೊಬೈಲ್ಗಳು ಅನಾವರಣಗೊಳ್ಳುತ್ತದೆ. ತಿಂಗಳಿಗೆ ಕಡಿಮೆ ಎಂದರೂ 10-12 ಸ್ಮಾರ್ಟ್ಫೋನ್ಗಳು ರಿಲೀಸ್ ಆಗುತ್ತವೆ. ಸ್ಯಾಮ್ಸಂಗ್ (Samsung), ರೆಡ್ಮಿ, ರಿಯಲ್ ಮಿ, ಪೋಕೋ, ಇನ್ಫಿನಿಕ್ಸ್ ಕಂಪನಿಗಳು ಅತ್ಯಂತ ಕಡಿಮೆ ದರಕ್ಕೆ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತದೆ. ಹಾಗಂತ ಇದರಲ್ಲಿ ಎಲ್ಲವೂ ಯಶಸ್ಸು ಸಾಧಿಸುವುದಿಲ್ಲ. ಕೆಲವೊಂದು ಹೇಳ ಹೆಸರಿಲ್ಲದಂತೆ ಮಾಯವಾದರೆ ಇನ್ನೂ ಕೆಲವು ಸದಾ ಟ್ರೆಂಡಿಂಗ್ನಲ್ಲಿ (Trending) ಕಾಣಿಸುತ್ತದೆ. ಅದರಂತೆ ನೀವು ಕಡಿಮೆ ಬೆಲೆಗೆ ಹೊಸ ಮೊಬೈಲ್ ಖರೀದಿಸುವ ಪ್ಲಾನ್ನಲ್ಲಿದ್ದರೆ 10,000 ರೂ. ಒಳಗೆ ಲಭ್ಯವಿರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳ ಪಟ್ಟಿ ಇಲ್ಲಿದೆ ನೋಡಿ.
ರಿಯಲ್ ಮಿ ನಾರ್ಜೋ N53: ರಿಯಲ್ ಮಿ ನಾರ್ಜೋ N53 ಸ್ಮಾರ್ಟ್ಫೋನ್ನ 4GB RAM + 64GB ಸ್ಟೋರೇಜ್ ಮಾದರಿಯ ಆಯ್ಕೆಗೆ ಕೇವಲ 8,999 ರೂ. ಇದೆ. ಇದು 6.74 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ-ಕೋರ್ ಯುನಿಸೊಕ್ T612 SoC ಪ್ರೊಸೆಸರ್ ವೇಗವನ್ನು ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ AI ಸೆನ್ಸಾರ್ ಅನ್ನು ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೈರ್ಡ್ ಸೂಪರ್‌ವೂಕ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ F04: ಈ ಸ್ಮಾರ್ಟ್ಫೋನ್ನ ಬೆಲೆ ಕೇವಲ 8,499 ರೂ. ಆಗಿದೆ. ಇದು 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಮೀಡಿಯಾಟೆಕ್ ಹಿಲಿಯೋ P35 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಬಲಿಷ್ಠವಾದ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಪೋಕೋ C55: ಈ ಸ್ಮಾರ್ಟ್ಫೋನ್ನ ಬೆಲೆ ಕೇವಲ 8,499 ರೂ. ಈ ಫೋನ್ 6.71 ಇಂಚಿನ ಹೆಚ್‌ಡಿ ಪ್ಲಸ್ ರೆಸಲೂಷನ್ನ ಎಲ್ಸಿಡಿ ಡಿಸ್ ಪ್ಲೇ ಹೊಂದಿದೆ. ಮೀಡಿಯಾಟೆಕ್ ಹೀಲಿಯೊ G85 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಹೊಂದಿದೆ. 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.
ಮೋಟೋ G22: ಈ ಸ್ಮಾರ್ಟ್‌ಫೋನ್ ಪ್ರಸ್ತುತ ಅಮೆಜಾನ್ನಲ್ಲಿ 10,999 ರೂ. ಗೆ ಸೇಲ್ ಆಗುತ್ತಿದೆ. ಆದರೆ ಫ್ಲಿಪ್‌ಕಾರ್ಟ್ ಅಥವಾ ಅಮೆಜಾನ್ನಲ್ಲಿ ಹೆಚ್ಚಿನ ರಿಯಾಯಿತಿ ಪಡೆದು ಇನ್ನಷ್ಟು ಕಡಿಮೆ ಬೆಲೆಗೆ ಖರೀದಿಸಬಹುದು. ಇದು 6.5-ಇಂಚಿನ 90Hz ರಿಫ್ರೆಶ್ರೇಟ್ ಹೊಂದಿರುವ LCD ಡಿಸ್ ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್ G37 ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, 5000mAh ಬ್ಯಾಟರಿ ಮತ್ತು 50MP ಮುಖ್ಯ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.
ಇನ್ಫಿನಿಕ್ಸ್ ನೋಟ್ 12i: ಫ್ಲಿಪ್ಕಾರ್ಟ್ನಲ್ಲಿ ಈ ಸ್ಮಾರ್ಟ್‌ಫೋನ್ ಕೇವಲ 9,999 ರೂ. ಗೆ ಖರೀದಿಸಬಹುದು. ಇದು 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ತ್ರಿವಳಿ ಕ್ಯಾಮೆರಾಗಳನ್ನು ಪಡೆದುಕೊಂಡಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಹೊಂದಿದೆ. 5,000mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ