Realme V25: ಫುಲ್‌ ಚಾರ್ಜ್‌ ಮಾಡಿದ್ರೆ 24 ದಿನಗಳ ಸ್ಟ್ಯಾಂಡ್‌ಬೈ ಟೈಂ: ಇದು ರಿಯಲ್ ಮಿಯ ಹೊಸ ಪವರ್​​ಫುಲ್ ಫೋನ್

ರಿಯಲ್‌ ಮಿ V25 ಸ್ಮಾರ್ಟ್‌ಫೋನ್‌ ಕ್ಯಾಮೆರಾ ಕೂಡ ಬೊಂಬಾಟ್ ಆಗಿದ್ದು ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ವಿಶೇಷ ಎಂದರೆ ಇದು ಫೋಟೋಕ್ರೋಮಿಕ್ ಬ್ಯಾಕ್ ಪ್ಯಾನೆಲ್ ಹೊಂದಿರುವ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಆಗಿದೆ.

Realme V25: ಫುಲ್‌ ಚಾರ್ಜ್‌ ಮಾಡಿದ್ರೆ 24 ದಿನಗಳ ಸ್ಟ್ಯಾಂಡ್‌ಬೈ ಟೈಂ: ಇದು ರಿಯಲ್ ಮಿಯ ಹೊಸ ಪವರ್​​ಫುಲ್ ಫೋನ್
Realme V25
Follow us
TV9 Web
| Updated By: Vinay Bhat

Updated on:Mar 04, 2022 | 2:51 PM

ಜಾಗತೀಕ ಮೊಬೈಲ್ ಮಾರುಕಟ್ಟೆಯಲ್ಲಿ ವಿಭಿನ್ನ ಸ್ಮಾರ್ಟ್​ಫೋನ್​ಗಳನ್ನು (Smartphone) ಪರಿಚಯಿಸಿ ವಿಶೇಷ ಸ್ಥಾನ ಸಂಪಾದಿಸಿರುವ ರಿಯಲ್ ಮಿ (Realme) ಕಂಪನಿ ಇದೀಗ ತನ್ನ ಬಹುನಿರೀಕ್ಷಿತ ಹೊಸ ರಿಯಲ್‌ ಮಿ ವಿ25 (Realme V25) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌, 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಅಲ್ಲದೆ  120Hz ರಿಫ್ರೆಶ್ ರೇಟ್ ಹೊಂದಿರುವ ಡಿಸ್‌ಪ್ಲೇಯನ್ನು ಸಹ ಒಳಗೊಂಡಿದೆ. ಇದರ ಕ್ಯಾಮೆರಾ ಕೂಡ ಬೊಂಬಾಟ್ ಆಗಿದ್ದು ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ವಿಶೇಷ ಎಂದರೆ ಇದು ಫೋಟೋಕ್ರೋಮಿಕ್ ಬ್ಯಾಕ್ ಪ್ಯಾನೆಲ್ ಹೊಂದಿರುವ ರಿಯಲ್‌ ಮಿ ಕಂಪನಿಯ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ಏನು ವಿಶೇಷತೆ ಎಂಬುದನ್ನು ನೋಡೋಣ.

ರಿಯಲ್‌ ಮಿ V25 ಸ್ಮಾರ್ಟ್‌ಫೋನ್‌ 6.6 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ LTPO ಫೀಚರ್ಸ್​ನಿಂದ ಕೂಡಿದ್ದು, ಈಗಾಗಲೇ ಹೇಳಿರುವಂತೆ 120Hz ನಿಂದ 30Hz ವರೆಗೆ ಕಡಿಮೆ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ವಿಷಯಕ್ಕೆ ಅನುಗುಣವಾಗಿ 30Hz, 48Hz, 50Hz, 60Hz, 90Hz ಮತ್ತು 120Hz ನಂತಹ ಆರು ವಿಭಿನ್ನ ರಿಫ್ರೆಶ್‌ ರೇಟ್‌ ಆಯ್ಕೆಯನ್ನು ನೀಡಲಿದೆ. ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ರಿಯಲ್‌ಮಿ UI 3.0 ಜೊತೆಗೆ ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇನ್ನುಳಿದಂತೆ ಡೆಪ್ತ್‌ ಸೆನ್ಸಾರ್‌ ಮತ್ತು ಮ್ಯಾಕ್ರೋ ಶೂಟರ್‌ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 5,000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ನೀಡಲಾಗಿದ್ದು ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಬ್ಯಾಟರಿ ಫುಲ್‌ ಚಾರ್ಜ್‌ ಮಾಡಿದರೆ 24 ದಿನಗಳವರೆಗೆ ಸ್ಟ್ಯಾಂಡ್‌ಬೈ ಟೈಂ ಅನ್ನು ನೀಡುತ್ತದೆ ಎಂದು ಕಂಪನಿ ಹೇಳಿದೆ. ಇದಲ್ಲದೆ 27 ನಿಮಿಷಗಳಿಗೆ 0 ರಿಂದ 50% ಬ್ಯಾಟರಿ ಚಾರ್ಜ್‌ ಮಾಡಬಹುದಾಗಿದೆಯಂತೆ.

ರಿಯಲ್‌ ಮಿ V25 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಯ ಬೆಲೆ CNY 1,999, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 23,900 ರೂ. ಎನ್ನಬಹದು. ಸದ್ಯಕ್ಕೆ ಚೀನಾದಲ್ಲಿ ರಿಲೀಸ್ ಆಗಿರುವ ಈ ಸ್ಮಾರ್ಟ್​ಫೋನ್ ಕೆಲವೇ ತಿಂಗಳಲ್ಲಿ ಭಾರತಕ್ಕೂ ಕಾಲಿಡಲಿದೆ ಎನ್ನಲಾಗಿದೆ.

Motorola Edge 30 Pro: 68W ಟರ್ಬೊ ಚಾರ್ಜರ್, 50MP ಕ್ಯಾಮೆರಾ: ಮೋಟೋ ಎಡ್ಜ್‌ 30 ಪ್ರೊ ಇಂದು ಮೊದಲ ಸೇಲ್

Redmi Note 11 Pro series: ಬಹುನಿರೀಕ್ಷಿತ ರೆಡ್ಮಿ ನೋಟ್ 11 ಫೋನ್ ಬೆಲೆಯ ಬಗ್ಗೆ ಹೊರಬಿತ್ತು ಶಾಕಿಂಗ್ ವಿಚಾರ

Published On - 2:50 pm, Fri, 4 March 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ