Realme 11 Pro: 5G: ಭಾರತದಲ್ಲಿ ಖರೀದಿಗೆ ಸಿಗುತ್ತಿದೆ 200MP ಕ್ಯಾಮೆರಾದ ಹೊಸ ರಿಯಲ್ ಮಿ 11 ಪ್ರೊ+ 5G ಸ್ಮಾರ್ಟ್​ಫೋನ್

Realme 11 Pro 5G: ರಿಯಲ್ ಮಿ 11 ಪ್ರೊ+, ರಿಯಲ್ ಮಿ 11 ಪ್ರೊ ಈ ಎರಡೂ ಮೊಬೈಲ್​ಗಳು ದೇಶದಲ್ಲಿ ಸೇಲ್ ಕಾಣುತ್ತಿದ್ದು, ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗುತ್ತಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ನೋಡಿ.

Realme 11 Pro: 5G: ಭಾರತದಲ್ಲಿ ಖರೀದಿಗೆ ಸಿಗುತ್ತಿದೆ 200MP ಕ್ಯಾಮೆರಾದ ಹೊಸ ರಿಯಲ್ ಮಿ 11 ಪ್ರೊ+ 5G ಸ್ಮಾರ್ಟ್​ಫೋನ್
Realme 11 Pro+
Follow us
Vinay Bhat
|

Updated on: Jun 16, 2023 | 3:04 PM

ಕಳೆದ ವಾರ ಭಾರತೀಯ ಮಾರುಕಟ್ಟೆಯಲ್ಲಿ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಲಾಂಚ್ ಆಗಿತ್ತು. ಪ್ರಸಿದ್ಧ ರಿಯಲ್ ಮಿ (Realme) ಕಂಪನಿ ತನ್ನ ಮೊಟ್ಟ ಮೊದಲ 200 ಮೆಗಾ ಪಿಕ್ಸೆಲ್ ಕ್ಯಾಮೆರಾದ ಹೊಸ ಫೋನ್ ರಿಯಲ್ ಮಿ 11 ಪ್ರೊ+ 5G (Realme 11 Pro+ 5G) ಅನ್ನು ದೇಶದಲ್ಲಿ ಬಿಡುಗಡೆ ಮಾಡಿತ್ತು. ಇದರ ಜೊತೆಗೆ ರಿಯಲ್ ಮಿ 11 ಪ್ರೊ 5G ಸ್ಮಾರ್ಟ್​ಫೋನ್ ಕೂಡ ಲಾಂಚ್ ಆಗಿತ್ತು. ಇದೀಗ ಈ ಎರಡೂ ಮೊಬೈಲ್​ಗಳು ದೇಶದಲ್ಲಿ ಸೇಲ್ ಕಾಣುತ್ತಿದ್ದು, ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮೂಲಕ ಖರೀದಿಗೆ ಸಿಗುತ್ತಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಬೆಲೆ ಎಷ್ಟು?:

ರಿಯಲ್ ಮಿ 11 ಪ್ರೊ 5G ಫೋನ್ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಸಿಗುತ್ತಿದೆ. ಇದರ 8GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ದರವು 23,999 ರೂ., 8GB RAM + 256GB ಮತ್ತು 12GB RAM + 256GB ಸ್ಟೋರೇಜ್ ಆಯ್ಕೆಗೆ ಕ್ರಮವಾಗಿ 24,999 ರೂ. ಹಾಗೂ 27,999 ರೂ. ನಿಗದಿ ಮಾಡಲಾಗಿದೆ.

ಇದನ್ನೂ ಓದಿ
Image
Father’s Day 2023: ನಿಮ್ಮ ತಂದೆಗೆ ಈ ವಿಶೇಷ ಉಡುಗೊರೆ ಕೊಡಲು ಮರೆಯದಿರಿ
Image
Redmi 12: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಜೆಟ್ ಬೆಲೆಯ ರೆಡ್ಮಿ 12 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ?
Image
Samsung Galaxy F13: ಬೆಸ್ಟ್ ಆಫರ್ ಪ್ರೈಸ್​ಗೆ ಸೇಲ್ ಆಗುತ್ತಿದೆ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌
Image
Infinix Note 30 VIP: ಇನ್ಫಿನಿಕ್ಸ್ ನೋಟ್‌ 30 VIP 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು

ಇನ್ನು ರಿಯಲ್ ಮಿ 11 ಪ್ರೊ+ 5G ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ದರವು 27,999 ರೂ. ಆಗಿದೆ. ಅಂತೆಯೆ 12GB RAM + 256GB ಸ್ಟೋರೇಜ್ ಆಯ್ಕೆಗೆ 29,999 ರೂ. ಇದೆ. ಈ ಎರಡೂ ಫೋನ್​ಗಳು ಈಗಾಗಲೇ ಫ್ಲಿಪ್​ಕಾರ್ಟ್ ಮತ್ತು ರಿಯಲ್ ಮಿ.ಕಾಮ್​ನಲ್ಲಿ ಮಾರಾಟ ಕಾಣುತ್ತಿದೆ. ಈ ಎರಡೂ ಫೋನ್​ಗಳ ಮೇಲೆ ಆಯ್ದ ಬ್ಯಾಂಕ್ ಕಾರ್ಡ್ ಮೂಲಕ ಖರೀದಿಸಿದರೆ 2,000 ರೂ. ಗಳ ಡಿಸ್ಕೌಂಟ್ ಆಫರ್ ಘೋಷಿಸಲಾಗಿದೆ.

Reliance JioTag: ಏರ್​ಟ್ಯಾಗ್​ಗೆ ಸೆಡ್ಡು ಹೊಡೆಯಲು ಬಂತು ರಿಲಯನ್ಸ್ ಜಿಯೋಟ್ಯಾಗ್

ಫೀಚರ್ಸ್ ಏನಿದೆ?:

ರಿಯಲ್ ಮಿ 11 ಪ್ರೊ 5G ಮತ್ತು ರಿಯಲ್ ಮಿ 11 ಪ್ರೊ+ 5G ಪ್ರೊ ಸ್ಮಾರ್ಟ್‌ಫೋನ್‌ 1,080*2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್​ಡಿ+ ಕರ್ವಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್​ನಿಂದ ಕೂಡಿದೆ. ಇದು ಆಕ್ಟಾ-ಕೋರ್ 6nm ಮೀಡಿಯಾಟೆಕ್ ಡೈಮನ್ಸಿಟಿ 7050 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 13 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಈ ಎರಡೂ ಫೋನಿನ ಪ್ರಮುಖ ಹೈಲೈಟ್ ಕ್ಯಾಮೆರಾ. ರಿಯಲ್ ಮಿ 11 ಪ್ರೊ 5G ಫೋನ್​ನಲ್ಲಿ ಡ್ಯುಯೆಲ್ ರಿಯರ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ. 100 ಮೆಗಾ ಪಿಕ್ಸೆಲ್​ನ ಪ್ರೈಮರಿ ಸೆನ್ಸಾರ್ ನೀಡಲಾಗಿದ್ದು, ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. 2 ಮೆಗಾ ಪಿಕ್ಸೆಲ್​ನ ಸೆಕೆಂಡರಿ ಕ್ಯಾಮೆರಾ ನೀಡಲಾಗಿದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಇತ್ತ ರಿಯಲ್ ಮಿ 11 ಪ್ರೊ+ 5G ಫೋನ್​ನಲ್ಲಿ ಆಕರ್ಷಕವಾದ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಇದೆ. ಇದರಲ್ಲಿರುವ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್​ನ ಸ್ಯಾಮ್​ಸಂಗ್ ISOCELL HP3 ಸೆನ್ಸಾರ್​ನಿಂದ ಕೂಡಿದೆ. ಇದರಿಂದ ದೂರದ ವರೆಗೆ ಸುಲಭವಾಗಿ ಝೂಮ್ ಮಾಡಬಹುದಂತೆ. ಇದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಟೆಕ್ನಾಲಜಿಯನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಜೊತೆಗೆ 2 ಮೆಗಾಪಿಕ್ಸೆಲ್​ನ ಮ್ಯಾಕ್ರೊ ಸೆನ್ಸಾರ್‌ ಇದೆ. ಮುಂಭಾಗ ಸೆಲ್ಫೀ ಮತ್ತು ವಿಡಿಯೋ ಕರೆಗಳಿಗಾಗಿ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಈ ಎರಡೂ ಫೋನ್​ಗೆ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಅಳವಡಿಸಲಾಗಿದೆ. ಇದರಲ್ಲಿ ರಿಯಲ್ ಮಿ 11 ಪ್ರೊ+ 100W ಸೂಪರ್‌ವೂಕ್ ಚಾರ್ಜ್ ವೇಗದ ಚಾರ್ಜಿಂಗ್‌ ಅನ್ನು ಒಳಗೊಂಡಿದ್ದರೆ, ರಿಯಲ್ ಮಿ 11 ಪ್ರೊ 67W ಸೂಪರ್‌ವೂಕ್ ಚಾರ್ಜ್ ವೇಗದ ಚಾರ್ಜಿಂಗ್‌ ಸಪೋರ್ಟ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದರಲ್ಲಿ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೇರಿದಂತೆ ಇತ್ತೀಚೆಗಿನ ಎಲ್ಲ ಆಯ್ಕೆಗಳನ್ನು ಅಳವಡಿಸಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್