Redmi 10: ಕೇವಲ 10,999 ರೂ. ಗೆ ರೆಡ್ಮಿ 10 ಬಿಡುಗಡೆ: ಇದನ್ನು ಖರೀದಿಸಲು ಕ್ಯೂ ಗ್ಯಾರೆಂಟಿ

Redmi 10 Price: ಶವೋಮಿ ಇದೀಗ ದೇಶದಲ್ಲಿ ಹೊಸ ರೆಡ್ಮಿ 10 (Redmi 10) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಅತ್ಯಂತ ಬಲಿಷ್ಠವಾದ ದೀರ್ಘ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಈ ಫೋನ್​ಗೆ ನೀಡಲಾಗಿದೆ. ಅಲ್ಲದೆ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ.

Redmi 10: ಕೇವಲ 10,999 ರೂ. ಗೆ ರೆಡ್ಮಿ 10 ಬಿಡುಗಡೆ: ಇದನ್ನು ಖರೀದಿಸಲು ಕ್ಯೂ ಗ್ಯಾರೆಂಟಿ
Redmi 10
Follow us
TV9 Web
| Updated By: Vinay Bhat

Updated on: Mar 17, 2022 | 3:25 PM

ಶವೋಮಿ (Xioami) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಇದಕ್ಕಾಗಿಯೇ ಇದು ದೇಶದ ನಂಬರ್ ಒನ್ ಮೊಬೈಲ್ ಬ್ರ್ಯಾಂಡ್ ಆಗಿದೆ. ತನ್ನ ಎಂಐ, ರೆಡ್ಮಿ ಅಡಿಯಲ್ಲಿ ಹೊಚ್ಚ ಹೊಸ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವ ಶವೋಮಿ ಇದೀಗ ದೇಶದಲ್ಲಿ ಹೊಸ ರೆಡ್ಮಿ 10 (Redmi 10) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಅತ್ಯಂತ ಬಲಿಷ್ಠವಾದ ದೀರ್ಘ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿ ಈ ಫೋನ್​ಗೆ ನೀಡಲಾಗಿದೆ. ಅಲ್ಲದೆ ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ, ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಇದರಲ್ಲಿರುವ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್​ನಿಂದ ಕೂಡಿದೆ. ಇಷ್ಟೆಲ್ಲ ಭರ್ಜರಿ ಫೀಚರ್​ಗಳಿಂದ ಕೂಡಿರುವ ಈ ಫೋನಿನ ಬೆಲೆ ಕೇವಲ 10,999 ರೂ. ಎಂದರೆ ನಂಬಲೇ ಬೇಕು. ಹಾಗಾದ್ರೆ ಈ ಸ್ಮಾರ್ಟ್​ಫೋನ್​ನ (Smartphone) ಇತರೆ ವಿಶೇಷತೆ ಏನು?, ಯಾವಾಗ ಖರೀದಿಗೆ ಸಿಗಲಿದೆ?, ಆಫರ್ ಇದೆಯೇ? ಎಂಬ ಬಗೆಗಿನ ಮಾಹಿತಿ ತಿಳಿದುಕೊಳ್ಳೋಣ.

ಬೆಲೆ ಎಷ್ಟು?:

ಭಾರತದಲ್ಲಿ ರೆಡ್ಮಿ 10 ಸ್ಮಾರ್ಟ್‌ಫೋನ್‌ ಒಟ್ಟು ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ ಕೇವಲ 10,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 6GB RAM ಮತ್ತು 128GB ಮಾದರಿಯ ಆಯ್ಕೆಗೆ 12,999 ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಮಾರ್ಚ್ 24 ರಂದು ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌, ಎಂಐ.ಕಾಮ್‌, ಎಂಐ ಹೋಮ್‌ ಮೂಲಕ ಮಾರಾಟ ಕಾಣಲಿದೆ. ಇದು ಕೆರಿಬಿಯನ್ ಗ್ರೀನ್, ಮಿಡ್‌ನೈಟ್ ಬ್ಲಾಕ್ ಮತ್ತು ಪೆಸಿಫಿಕ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಇನ್ನು ರೆಡ್ಮಿ 10 ಲಾಂಚ್‌ ಆಫರ್‌ನಲ್ಲಿ HDFC ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ EMI ಗಳನ್ನು ಬಳಸುವ ಗ್ರಾಹಕರಿಗೆ 1,000 ತ್ವರಿತ ರಿಯಾಯಿತಿ ಘೋಷಿಸಲಾಗಿದೆ.

ಏನು ವಿಶೇಷತೆ?:

ರೆಡ್ಮಿ 10 ಸ್ಮಾರ್ಟ್‌ಫೋನ್‌ 6.7 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ನೀಡಲಾಗಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 680 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 13 ಜೊತೆಗೆ ರನ್ ಆಗುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ 2GB ವರೆಗೆ ಇಂಟರ್‌ಬಿಲ್ಟ್‌ ಸ್ಟೋರೇಜ್‌ ಬಳಸಿಕೊಂಡು ವಾಸ್ತವಿಕವಾಗಿ RAM ಅನ್ನು ವಿಸ್ತರಿಸಬಹುದು.

ವಿಶೇಷವಾಗಿ ಇದು ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಪೋರ್ಟ್ರೇಟ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಕ್ಯಾಮರಾ ಸೆಟಪ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ವನ್ನು ಒಳಗೊಂಡಿದೆ.

ಇನ್ನು ಧೀರ್ಘ ಸಮಯ ಬಾಳಿಕೆ ಬರುವ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದೆ. ಇದಕ್ಕೆ ಪೂರಕವಾಗಿ ಆದಷ್ಟು ಬೇಗ ಚಾರ್ಜ್ ಆಗುವಂತಹ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಬಂಡಲ್ ಚಾರ್ಜರ್ 10W ವರೆಗೆ ಚಾರ್ಜ್ ಮಾಡುವುದನ್ನು ಮಾತ್ರ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, GPS/ A-GPS, USB ಟೈಪ್-C ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ.

Realme GT 5G: ಬಂಪರ್ ಆಫರ್: ರಿಯಲ್‌ಮಿ GT 5G ಸ್ಮಾರ್ಟ್​​ಫೋನ್ ಮೇಲೆ ಹಿಂದೆಂದೂ ಕಂಡಿರದ ಡಿಸ್ಕೌಂಟ್

Holi 2022: ವಾಟ್ಸ್​ಆ್ಯಪ್​ನಲ್ಲಿ ಹೋಳಿ ಸ್ಟಿಕ್ಕರ್ ಡೌನ್​ಲೋಡ್ ಮತ್ತು ಕಳುಹಿಸುವುದು ಹೇಗೆ?: ಇಲ್ಲಿದೆ ನೋಡಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ