AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆಜಾನ್​ನಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್​ಫೋನ್ ಯಾವುದು ಗೊತ್ತೇ?: ರಿವೀಲ್ ಆಗಿದೆ ನೋಡಿ

Highest Selling phone on Amazon: ಅಮೆಜಾನ್​ನಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್​ಫೋನ್ ಯಾವುದು ಎಂಬ ವಿಚಾರ ಬೆಳಕಿಗೆ ಬಂದಿದೆ. ಅಮೆಜಾನ್‌ನಲ್ಲಿ ಮೊದಲ ದಿನದ ಮಾರಾಟದಲ್ಲಿ ಹೆಚ್ಚು ಮಾರಾಟವಾದ 5G ಫೋನ್ ಇದೀಗ ಹೆಸರಿಸಿದೆ. ಇದು ಎಷ್ಟು ಫೋನ್ ಸೇಲ್ ಆಗಿದೆ ಎಂಬ ನಿಖರ ಸಂಖ್ಯೆಯನ್ನು ನಮೂದಿಸಿಲ್ಲ.

ಅಮೆಜಾನ್​ನಲ್ಲಿ ಅತಿ ಹೆಚ್ಚು ಮಾರಾಟವಾದ ಸ್ಮಾರ್ಟ್​ಫೋನ್ ಯಾವುದು ಗೊತ್ತೇ?: ರಿವೀಲ್ ಆಗಿದೆ ನೋಡಿ
Redmi 12 5G
Vinay Bhat
|

Updated on: Aug 14, 2023 | 3:47 PM

Share

ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ (Amazon) ಇತ್ತೀಚೆಗೆ ಒಂದಲ್ಲ ಒಂದು ಆಕರ್ಷಕ ಆಫರ್​ಗಳನ್ನು ನೀಡುತ್ತಿರುವ ಕಾರಣ ಬಳಕೆದಾರರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಆ್ಯಪ್ ಅನ್ನು ಉಪಯೋಗಿಸುತ್ತಿದ್ದಾರೆ. ಆಗಾಗ ವಿಶೇಷ ಮೇಳಗಳನ್ನು ಹಮ್ಮಿಕೊಳ್ಳುವ ಅಮೆಜಾನ್​ನಲ್ಲಿ ಮುಖ್ಯವಾಗಿ ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್​ಗಳು ಮಾರಾಟ ಆಗುತ್ತವೆ. ಇದೀಗ ಅಮೆಜಾನ್​ನಲ್ಲಿ ಅತಿ ಹೆಚ್ಚು ಮಾರಾಟವಾದ 5ಜಿ ಸ್ಮಾರ್ಟ್​ಫೋನ್ ಯಾವುದು ಎಂಬ ವಿಚಾರ ಬೆಳಕಿಗೆ ಬಂದಿದೆ. ಶವೋಮಿ ಕಂಪನಿ ಇತ್ತೀಚೆಗಷ್ಟೆ ಬಿಡುಗಡೆ ಮಾಡಿದ ರೆಡ್ಮಿ 12 5G ಅಮೆಜಾನ್ ಇಂಡಿಯಾದಲ್ಲಿ ಮೊದಲ ಅತಿ ಹೆಚ್ಚು ಮಾರಾಟವಾದ 5G ಸ್ಮಾರ್ಟ್‌ಫೋನ್ ಆಗಿದೆಯಂತೆ.

ರೆಡ್ಮಿ 12 5G ಅಮೆಜಾನ್‌ನಲ್ಲಿ ಮೊದಲ ದಿನದ ಮಾರಾಟದಲ್ಲಿ ಹೆಚ್ಚು ಮಾರಾಟವಾದ 5G ಫೋನ್ ಎಂದು ಹೆಸರಿಸಿದೆ. ಇದು ಎಷ್ಟು ಫೋನ್ ಸೇಲ್ ಆಗಿದೆ ಎಂಬ ನಿಖರ ಸಂಖ್ಯೆಯನ್ನು ನಮೂದಿಸಿಲ್ಲ. ಆದರೆ, ಅಮೆಜಾನ್ ಇಂಡಿಯಾದಲ್ಲಿ ಮಾರಾಟವಾದ ಮೊದಲ ದಿನವೇ ಈ ಫೋನ್ ಸೋಲ್ಡ್ ಔಟ್ ಆಗಿದೆ ಎಂದು ಶವೋಮಿ ಬಹಿರಂಗಪಡಿಸಿದೆ. ಕಂಪನಿಯ ಪ್ರಕಾರ, ಈ ಸ್ಮಾರ್ಟ್​ಫೋನ್​ಗೆ ದೇಶದ ಎಲ್ಲಾ ಮೂಲೆಗಳಿಂದ ಆರ್ಡರ್ ಬಂದಿದೆ. ಭಾರತದಾದ್ಯಂತ 9,500 ವಿಭಿನ್ನ ಪಿನ್ ಕೋಡ್‌ಗಳಿಗೆ ಕಳುಹಿಸಲಾಗಿದೆಯಂತೆ.

ಕೇವಲ 10,999 ರೂ. ಗೆ ಖರೀದಿಸಿ 6000mAh ಬ್ಯಾಟರಿ, 50MP ಕ್ಯಾಮೆರಾದ ಈ ಸ್ಯಾಮ್​ಸಂಗ್ ಸ್ಮಾರ್ಟ್​ಫೋನ್

ಇದನ್ನೂ ಓದಿ
Image
108MP ಕ್ಯಾಮೆರಾ, 67W ಫಾಸ್ಟ್ ಚಾರ್ಜರ್: ರಿಯಲ್ ಮಿ 11 ಫೀಚರ್ಸ್ ಬಹಿರಂಗ ಪಡಿಸಿದ ಕಂಪನಿ
Image
ಟೆಕ್ನೋ ಪೋವಾ 5, ಪೋವಾ 5 ಪ್ರೊ ಬೆಲೆ, ಲಭ್ಯತೆ ಬಗ್ಗೆ ಬಹಿರಂಗ ಪಡಿಸಿದ ಕಂಪನಿ
Image
ಸ್ಮಾರ್ಟ್​ಫೋನ್ ಬಳಕೆದಾರರಿಗೆ ಸರ್ಕಾರದಿಂದ ಎಚ್ಚರಿಕೆ: ಆಂಡ್ರಾಯ್ಡ್ ಬಳಕೆದಾರರು ಇಲ್ಲಿ ಗಮನಿಸಿ
Image
ಭಾರತದಲ್ಲಿಂದು ಬಹುನಿರೀಕ್ಷಿತ ಟೆಕ್ನೋ ಪೊವಾ 5 ಸರಣಿ ಸ್ಮಾರ್ಟ್​ಫೋನ್ ಬಿಡುಗಡೆ: ಏನಿದೆ ಫೀಚರ್ಸ್

ರೆಡ್ಮಿ 12 5G ಮೂರು ಸ್ಟೋರೇಜ್ ಆಯ್ಕೆಯಲ್ಲಿ ಖರೀದಿಸಬಹುದು. ಇದರ 4GB+128GB ರೂಪಾಂತರಕ್ಕೆ 10,999 ರೂ., 6GB+128GB ರೂಪಾಂತರಕ್ಕೆ 12,499 ರೂ. ಮತ್ತು 8GB+256GB ರೂಪಾಂತರಕ್ಕೆ 14,999 ರೂ. ನಿಗದಿ ಮಾಡಲಾಗಿದೆ. ಇದನ್ನು ಅಮೆಜಾನ್ ಮಾತ್ರವಲ್ಲದೆ Mi.com, Mi Home, Mi Studio ಮತ್ತು ಚಿಲ್ಲರೆ ಅಂಗಡಿಗಳಲ್ಲಿ ಖರೀದಿಸಬಹುದು. ರೆಡ್ಮಿ 12 5G ಜೊತೆ ರೆಡ್ಮಿ 12 4G ಆವೃತ್ತಿಯನ್ನು ಕೂಡ ರಿಲೀಸ್ ಮಾಡಲಾಗಿತ್ತು. ಇದರ 4GB+128GB ರೂಪಾಂತರಕ್ಕೆ ರೂ 8,999 ಮತ್ತು 6GB+ 128GB ರೂಪಾಂತರಕ್ಕೆ ರೂ 10,499 ಆಗಿದೆ.

ರೆಡ್ಮಿ 12 5G ಬಲಿಷ್ಠವಾದ ಮೊಟ್ಟ ಮೊದಲ ಸ್ನಾಪ್‌ಡ್ರಾಗನ್ 4 ಜೆನ್ 2 ಪ್ರೊಸೆಸರ್‌ನ ಬಲಯವನ್ನು ಹೊಂದಿದೆ. ಇದು ನಿಮಗೆ ಮೃದುವಾದ ಕಾರ್ಯಕ್ಷಮತೆಯನ್ನು ನೀಡುತ್ತದೆ. ಕ್ಯಾಮೆರಾ ವಿಚಾರಕ್ಕೆ ಬಂದರೆ, ರೆಡ್ಮಿ 12 5G 50-ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 2-ಮೆಗಾಪಿಕ್ಸೆಲ್ ಆಲ್ಟ್ರಾ ವೈಡ್ ಕ್ಯಾಮೆರಾ ಮತ್ತು LED ಫ್ಲ್ಯಾಷ್ ಹೊಂದಿದೆ. ಮುಂಭಾಗದ ಕ್ಯಾಮರಾ 8 ಮೆಗಾಪಿಕ್ಸೆಲ್ ಆಗಿದೆ. ಎರಡೂ ಫೋನ್‌ಗಳು 5000mAh ಬ್ಯಾಟರಿಯನ್ನು ಹೊಂದಿದ್ದು ಅದು ಟೈಪ್ C USB ಪೋರ್ಟ್ ಮೂಲಕ 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ