AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi A1: ಶವೋಮಿಯಿಂದ ಊಹಿಸಲಾದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 ಬಿಡುಗಡೆ

ಶವೋಮಿ (Xiaomi) ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿ ಎ1 (Redmi A1) ಫೋನ್ ಲಾಂಚ್ ಆಗಿದೆ.

Redmi A1: ಶವೋಮಿಯಿಂದ ಊಹಿಸಲಾದ ಸ್ಮಾರ್ಟ್​ಫೋನ್: ಕೇವಲ 6,499 ರೂ.ಗೆ ರೆಡ್ಮಿ A1 ಬಿಡುಗಡೆ
Xiaomi Redmi A1
Follow us
TV9 Web
| Updated By: Vinay Bhat

Updated on:Sep 06, 2022 | 2:51 PM

ಭಾರತದಲ್ಲಿ ಇಂದು ಒಂದೇ ದಿನ ಎರಡು ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗಿವೆ. ರಿಯಲ್ ಮಿ ಕಂಪನಿ ಕೇವಲ 8,999 ರೂಪಾಯಿಗೆ ರಿಯಲ್ ಮಿ C33 (Realme C33) ಫೋನನ್ನು ಅನಾವರಣ ಮಾಡಿದ್ದರೆ, ಇತ್ತ ಶವೋಮಿ ಕೂಡ ರಿಯಲ್ ಮಿಗೆ ಪೈಪೋಟಿ ನೀಡಲು ಅತ್ಯಂತ ಕಡಿಮೆ ಬೆಲೆಗೆ ನೂತನ ಸ್ಮಾರ್ಟ್​ಫೋನ್ ಒಂದನ್ನು ಪರಿಚಯಿಸಿದೆ. ಶವೋಮಿ (Xiaomi) ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಬಜೆಟ್ ಬೆಲೆಯ ಫೋನುಗಳನ್ನು ಬಿಡುಗಡೆ ಮಾಡಿ ಕೆಲ ಸಮಯವೇ ಆಗತ್ತು. ಇದೀಗ ಭಾರತದಲ್ಲಿ ಹೊಸ ರೆಡ್ಮಿ 1 (Redmi A1) ಫೋನ್ ಲಾಂಚ್ ಆಗಿದೆ. ಇದು ಬಜೆಟ್ ಬೆಲೆಯ ಮೊಬೈಲ್ ಆಗಿದ್ದರೂ ಅತ್ಯುತ್ತಮ ಫೀಚರ್​ಗಳಿಂದ ಆವೃತ್ತವಾಗಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ವಿಶೇಷತೆ ಇದೆ ಎಂಬುದನ್ನು ನೋಡೋಣ.

ರೆಡ್ಮಿ A1 ಸ್ಮಾರ್ಟ್‌ಫೋನ್‌ ಸದ್ಯಕ್ಕೆ ಭಾರತದಲ್ಲಿ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಅನಾವರಣಗೊಂಡಿದೆ. ಇದರ 2GB RAM + 32GB ಸ್ಟೋರೇಜ್​ಗೆ ಕೇವಲ 6,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಹಾಗೂ ತಿಳಿ ನೀಲಿ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಸೆಪ್ಟೆಂಬರ್ 9 ರಂದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮತ್ತು ಎಂಐ ಅಧಿಕೃತ ವೆಬ್​ಸೈಟ್​ನಲ್ಲಿ ಸೇಲ್ ಕಾಣಲಿದೆ.

ಈ ಸ್ಮಾರ್ಟ್‌ಫೋನ್​ನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಮೀಡಿಯಾಟೆಕ್ ಹೀಲಿಯೊ A22 ಪ್ರೊಸೆಸರ್ ಅಳವಡಿಸಲಾಗಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದುಕೊಂಡಿದೆ.

ಇದನ್ನೂ ಓದಿ
Image
Realme C33: 50MP ಕ್ಯಾಮೆರಾ, 5000mAh ಬ್ಯಾಟರಿ: ಕೇವಲ 9,000 ರೂ. ಗೆ ರಿಲೀಸ್ ಆಯ್ತು ಹೊಸ ಸ್ಮಾರ್ಟ್​ಫೋನ್
Image
ನಿಮ್ಮ ಧ್ವನಿಯಿಂದ ಕೋವಿಡ್-19 ಸೋಂಕನ್ನು ನಿಖರವಾಗಿ ಪತ್ತೆ ಮಾಡುತ್ತ ಈ ಸ್ಮಾರ್ಟ್​ಫೋನ್ ಆ್ಯಪ್
Image
Poco M5: ಬಜೆಟ್ ಫೋನಂದ್ರೆ ಇದು: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ M5 ಸ್ಮಾರ್ಟ್​ಫೋನ್ ರಿಲೀಸ್
Image
Redmi A1: ರೆಡ್ಮಿ-ರಿಯಲ್ ಮಿ ನಡುವೆ ಫೈಟ್: ಇಂದು ಒಂದೇ ದಿನ ಭಾರತದಲ್ಲಿ ಎರಡು ಹೊಸ ಸ್ಮಾರ್ಟ್​ಫೋನ್ ಬಿಡುಗಡೆ

ಈ ಸ್ಮಾರ್ಟ್‌ಫೋನ್​ನಲ್ಲಿ 8 ಮೆಗಾಫಿಕ್ಸೆಲ್​ನ ಡ್ಯುಯೆಲ್ ಕ್ಯಾಮೆರಾ ಸೆಟ್‌ಅಪ್‌ ಇದೆ. ಜೊತೆಗೆ LED ಫ್ಲ್ಯಾಸ್ ಕೂಡ ಇದೆ. ಮುಂಭಾಗ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಫೋನ್ ಭಾರತ 20 ಕ್ಕೂ ಅಧಿಕ ಭಾಷೆಯನ್ನು ಸಪೋರ್ಟ್ ಮಾಡುತ್ತದೆ.

ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, 10W ಸಾಮಾನ್ಯ ವೇಗದ ಚಾರ್ಜರ್​ನೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ.

Published On - 2:51 pm, Tue, 6 September 22

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​