Redmi A1+: ಕೇವಲ 6,999 ರೂ.: ಶವೋಮಿಯಿಂದ ಊಹಿಸಲಾಗದ ಬೆಲೆಗೆ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್​ ಏನಿದೆ ನೋಡಿ

| Updated By: Vinay Bhat

Updated on: Oct 14, 2022 | 1:20 PM

ರೆಡ್ಮಿ ಎ1+ (Redmi A1+) ಸ್ಮಾರ್ಟ್​ಫೋನ್ ಬಿಡುಗಡೆ ಆಗಿದೆ. ಇದು ಬಜೆಟ್ ಬೆಲೆಯ ಫೋನಾಗಿದ್ದು ಇಂದು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.

Redmi A1+: ಕೇವಲ 6,999 ರೂ.: ಶವೋಮಿಯಿಂದ ಊಹಿಸಲಾಗದ ಬೆಲೆಗೆ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಫೀಚರ್ಸ್​ ಏನಿದೆ ನೋಡಿ
Redmi A1+
Follow us on

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿಯ ಸ್ಮಾರ್ಟ್​ಫೋನ್​ಗಳು ಭಾರತದಲ್ಲಿ ಎಗ್ಗಿಲ್ಲದೆ ಮಾರಾಟ ಆಗುತ್ತಿದೆ. ಅದರಲ್ಲೂ ತನ್ನ ಸಬ್​ಬ್ರ್ಯಾಂಡ್ ರೆಡ್ಮಿ ಹೆಸರಿನಲ್ಲಿ ಫೋನುಗಳನ್ನು ರಿಲೀಸ್ ಮಾಡಿದರೆ ಅದು ದೇಶದಲ್ಲಿ ಭರ್ಜರಿ ಸೇಲ್ ಆಗುತ್ತದೆ. ಕಳೆದ ಸೆಪ್ಟೆಂಬರ್​ನಲ್ಲಿ ಶವೋಮಿ ರೆಡ್ಮಿ ಎ1 (Redmi A1) ಎಂಬ ಹೊಸ ಫೋನನ್ನು ಭಾರತದಲ್ಲಿ ಅನಾವರಣ ಮಾಡಿತ್ತು. ಬಜೆಟ್ ಬೆಲೆಯ ಈ ಫೋನಿಗೆ ಈಗಕೂಡ ಬೇಡಿಕೆ ಇದೆ. ಹೀಗಿರುವಾಗ ಈ ಸರಣಿಯ ಮುಂದುವರೆದ ಭಾಗವಾಗಿ ಇದೀಗ ರೆಡ್ಮಿ ಎ1+ (Redmi A1+) ಸ್ಮಾರ್ಟ್​ಫೋನ್ ಬಿಡುಗಡೆ ಆಗಿದೆ. ಇದುಕೂಡ ಬಜೆಟ್ ಬೆಲೆಯ ಫೋನಾಗಿದ್ದು ಇಂದು ಭಾರತೀಯ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು?, ಏನೆಲ್ಲ ಫೀಚರ್ಸ್ ಇದೆ? ಎಂಬುದನ್ನು ನೋಡೋಣ.

ರೆಡ್ಮಿ A1+ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 2GB RAM + 32GB ಸ್ಟೋರೇಜ್​ಗೆ ಕೇವಲ 6,999 ರೂ. ಮತ್ತು 3GB RAM + 32GB ಸ್ಟೋರೇಜ್​ ಆಯ್ಕೆಗೆ 7,999 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಕಪ್ಪು, ತಿಳಿ ಹಸಿರು ಹಾಗೂ ನೀಲಿ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಅಕ್ಟೋಬರ್ 18 ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್ ಮತ್ತು ಎಂಐ ಅಧಿಕೃತ ವೆಬ್​ಸೈಟ್​ನಲ್ಲಿ ಸೇಲ್ ಕಾಣಲಿದೆ.

ಈ ಸ್ಮಾರ್ಟ್‌ಫೋನ್​ನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 1600*720 ಪಿಕ್ಸೆಲ್ ರೆಸಲೂಶನ್ ಸಾಮರ್ಥ್ಯದ 6.52 ಇಂಚಿನ ಹೆಚ್‌ಡಿ ಪ್ಲಸ್‌ ಡಾಟ್ ಡ್ರಾಪ್ ಡಿಸ್‌ಪ್ಲೇ ಹೊಂದಿದೆ. ಡಾರ್ಕ್ ಮೋಡ್ ಮತ್ತು ನೈಟ್ ಮೋಡ್ ಆಯ್ಕೆ ನೀಡಲಾಗಿದೆ. ಮೀಡಿಯಾಟೆಕ್ ಹೀಲಿಯೊ A22 ಪ್ರೊಸೆಸರ್ ಅಳವಡಿಸಲಾಗಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಬೆಂಬಲವನ್ನು ಪಡೆದುಕೊಂಡಿದೆ. 1TB ವರೆಗೆ ಮೈಕ್ರೊ ಎಸ್​ಡಿ ಕಾರ್ಡ್ ಅನ್ನು ವಿಸ್ತರಿಸಬಹುದಾಗಿದೆ.

ಈ ಸ್ಮಾರ್ಟ್‌ಫೋನ್​ನಲ್ಲಿ 8 ಮೆಗಾಫಿಕ್ಸೆಲ್​ನ ಡ್ಯುಯೆಲ್ ಕ್ಯಾಮೆರಾ ಸೆಟ್‌ಅಪ್‌ ಇದೆ. ಜೊತೆಗೆ LED ಫ್ಲ್ಯಾಸ್ ಕೂಡ ಇದೆ. ಮುಂಭಾಗ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದ್ದು, 10W ಸಾಮಾನ್ಯ ವೇಗದ ಚಾರ್ಜರ್​ನೊಂದಿಗೆ ಬರುತ್ತದೆ. 30 ದಿನಗಳ ಸ್ಟ್ಯಾಂಡ್​ ಬೈ ಟೈಮ್ ಎಂದು ಕಂಪನಿ ಹೇಳಿಕೊಂಡಿದೆ.

ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ ಬೆಂಬಲ ಪಡೆದುಕೊಂಡಿಲ್ಲ. ಬದಲಾಗಿ 4G LTE, ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ v5.0, ಹೆಡ್​ಫೋನ್ ಜ್ಯಾಕ್, GPS ಮತ್ತು USB ಟೈಪ್-C ಪೋರ್ಟ್ ಅನ್ನು ಹೊಂದಿದೆ. ಎರಡು ಸಿಮ್ ಅನ್ನು ಸಪೋರ್ಟ್ ಮಾಡುತ್ತದೆ. ವಿಶೇಷವಾಗಿ ಹಿಂಭಾಗದಲ್ಲಿ ಫಿಂಗರ್​ಪ್ರಿಂಟ್ ಸ್ಕ್ಯಾನರ್ ನೀಡಲಾಗಿದೆ.

Published On - 1:20 pm, Fri, 14 October 22