Redmi A2: ಕೇವಲ 5,999 ರೂ. ಬೆಲೆಯ ರೆಡ್ಮಿ ಫೋನಿನ ಮಾರಾಟ ಆರಂಭ: ಭರ್ಜರಿ ಆಫರ್

ಕಳೆದ ವಾರ ಒಂದೇ ದಿನ ಭಾರತದಲ್ಲಿ ರೆಡ್ಮಿ ತನ್ನ ಎ ಸರಣಿಯಲ್ಲಿ ಹೊಸ ರೆಡ್ಮಿ ಎ2 (Redmi A2) ಮತ್ತು ರೆಡ್ಮಿ ಎ2+ (Redmi A2+) ಎಂಬ ಎರಡು ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿತ್ತು. ಈ ಎರಡು ಸ್ಮಾರ್ಟ್‌ಫೋನ್‌ಗಳು ಈಗ ಖರೀದಿಗೆ ಸಿಗುತ್ತಿದೆ.

Redmi A2: ಕೇವಲ 5,999 ರೂ. ಬೆಲೆಯ ರೆಡ್ಮಿ ಫೋನಿನ ಮಾರಾಟ ಆರಂಭ: ಭರ್ಜರಿ ಆಫರ್
Redmi A2
Follow us
Vinay Bhat
|

Updated on:May 23, 2023 | 1:04 PM

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀದ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ತನ್ನ ರೆಡ್ಮಿ ಬ್ರ್ಯಾಂಡ್​ನಡಿಯಲ್ಲಿ ಬಜೆಟ್ ಬೆಲೆಗೆ ನೂತನ ಮೊಬೈಲ್ ಪರಿಚಯಿಸುತ್ತಿದೆ. ಕಳೆದ ವಾರ ಒಂದೇ ದಿನ ಭಾರತದಲ್ಲಿ ಎರಡು ಆಕರ್ಷಕ ಮೊಬೈಲ್ ರಿಲೀಸ್ ಮಾಡಿತ್ತು. ರೆಡ್ಮಿ ತನ್ನ ಎ ಸರಣಿಯಲ್ಲಿ ಹೊಸ ರೆಡ್ಮಿ ಎ2 (Redmi A2) ಮತ್ತು ರೆಡ್ಮಿ ಎ2+ (Redmi A2+) ಎಂಬ ಎರಡು ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡಿತ್ತು. ಈ ಎರಡು ಸ್ಮಾರ್ಟ್‌ಫೋನ್‌ಗಳು ಈಗ ಖರೀದಿಗೆ ಸಿಗುತ್ತಿದೆ.

ಬೆಲೆ ಎಷ್ಟು?:

ರೆಡ್ಮಿ A2+ ಒಂದು ಸ್ಟೋರೇಜ್ ಆಯ್ಕೆಯಲ್ಲಷ್ಟೆ ಬಿಡುಗಡೆ ಆಗಿದೆ. ಇದರ 4GB + 64GB ಸ್ಟೋರೇಜ್ ಆಯ್ಕೆಗೆ 8,499 ರೂ. ಇದೆ. ಅಂತೆಯೆ  ರೆಡ್ಮಿA2 ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ 2GB + 32GB ಆಯ್ಕೆಗೆ 5,999 ರೂ., 2GB + 64GBಗೆ 6,499 ರೂ. ಮತ್ತು 4GB + 64GB ಆಯ್ಕೆಗೆ 7,499 ರೂ. ನಿಗದಿ ಮಾಡಲಾಗಿದೆ.

ಇದನ್ನೂ ಓದಿ
Image
WhatsApp New Updates: ವಾಟ್ಸ್​ಆ್ಯಪ್​ನಲ್ಲಿ ಸೆಂಡ್ ಮಾಡಿದ ಮೆಸೇಜ್ ಎಡಿಟ್ ಮಾಡಬಹುದು: ಬಂದಿದೆ ಹೊಸ ಆಯ್ಕೆ
Image
Best AC in India: ಹೆಚ್ಚಾಗುತ್ತಿದೆ ಸೆಖೆಯ ಪ್ರಮಾಣ: ಇಲ್ಲಿದೆ ನೋಡಿ ಕಡಿಮೆ ಬೆಲೆಯ ಅತ್ಯುತ್ತಮ ಎಸಿಗಳು
Image
Oppo F23 5G: ಭಾರತದ ಗ್ಯಾಜೆಟ್ ಮಾರುಕಟ್ಟೆಗೆ ಬಿಡುಗಡೆಯಾಯ್ತು ಹೊಸ ಒಪ್ಪೊ ಫೋನ್
Image
Lava Agni 2 5G: ದೇಸಿ ಕಂಪನಿಯಿಂದ ಸೂಪರ್ ಬಜೆಟ್ ಲಾವಾ ಸ್ಮಾರ್ಟ್​ಫೋನ್ ಬಿಡುಗಡೆ

ಇಂದು ಈ ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್‌, ಮಿ.ಕಾಮ್‌, ಮೀ ಹೋಮ್ಸ್‌ ಮತ್ತು ಆದ್ಯತೆಯ ಪಾಲುದಾರ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಮೊದಲ ಸೇಲ್ ಪ್ರಯುಕ್ತ ಆಫರ್ ಘೋಷಣೆ ಮಾಡಲಾಗಿದ್ದು ICICI ಬ್ಯಾಂಕ್ ಕಾರ್ಡ್ ಮೂಲಕ ಖರೀದಿ ಮಾಡಿದರೆ 500 ರೂ. ಡಿಸ್ಕೌಂಟ್ ಪಡೆಯಬಹುದು.

Sony Xperia 10 V: ಸೂಪರ್ ಸ್ಟೈಲಿಶ್ ಫೋನ್ ಪರಿಚಯಿಸಿದ ಸೋನಿ ಎಕ್ಸ್​ಪೆರಿಯಾ

ಏನಿದೆ ವಿಶೇಷತೆ?:

ರೆಡ್ಮಿ A2 ಮತ್ತು ರೆಡ್ಮಿ A2+ ಈ ಎರಡು ಸ್ಮಾರ್ಟ್‌ಫೋನ್‌ಗಳ ಡಿಸ್ ಪ್ಲೇ ಒಂದೇ ರೀತಿಯಲ್ಲಿದೆ. ಇದು 1600 x 720 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ LCD ಡಿಸ್‌ ಪ್ಲೇಯನ್ನು ಹೊಂದಿವೆ. ಈ ಡಿಸ್‌ ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು, ವಾಟರ್‌ಡ್ರಾಪ್ ನಾಚ್‌ ವಿನ್ಯಾಸದಿಂದ ಕೂಡಿದೆ. ಪ್ರೊಸೆಸರ್ ಕೂಡ ಸೇಮ್ ಇದೆ. ಮೀಡಿಯಾಟೆಕ್‌ ಹಿಲಿಯೋ G36SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು ಆಂಡ್ರಾಯ್ಡ್‌ 12 (Go Edition) ಬೆಂಬಲ ನೀಡಲಾಗಿದೆ.

ಕ್ಯಾಮೆರಾ ವಿವಾರಕ್ಕೆ ಬರುವುದಾದರೆ, ರೆಡ್ಮಿ A2 ಮತ್ತು ರೆಡ್ಮಿ A2+ ಸ್ಮಾರ್ಟ್‌ಫೋನ್‌ಗಳು ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಮುಖ್ಯ ಕ್ಯಾಮೆರಾ 8MP ಸೆನ್ಸಾರ್‌ ಹೊಂದಿದ್ದು, LED ಫ್ಲ್ಯಾಷ್ ಅನ್ನು ಒಳಗೊಂಡಿದೆ. 0.08 ಮೆಗಾಫಿಕ್ಸೆಲ್​ನ ಡೆಪ್ತ್ ಸೆನ್ಸಾರ್ ನೀಡಲಾಗಿದೆ. ಇದಲ್ಲದೆ ವಿಡಿಯೋ ಕರೆಗಳು ಮತ್ತು ಸೆಲ್ಫಿಗಳಿಗಾಗಿ 5MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ರೆಡ್ಮಿ A2 ಮತ್ತು ರೆಡ್ಮಿ A2+ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಲಿದೆ. ಇದು ಮೈಕ್ರೋ-ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಲ್ಲಿ 10W ಚಾರ್ಜಿಂಗ್ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, 2.4GHz ವೈಫೈ, ಬ್ಲೂಟೂತ್ 5.0, GPS, ಗ್ಲೋನಾಸ್ ಮತ್ತು ಗೆಲಿಲಿಯೋವನ್ನು ಬೆಂಬಲಿಸುತ್ತವೆ. 5ಜಿ ಸಪೋರ್ಟ್ ನೀಡಲಾಗಿಲ್ಲ. ಈ ಎರಡೂ ಫೋನಿನ ಫೀಚರ್ಸ್​ ಬಹುತೇಕ ಒಂದೇ ಆಗಿದ್ದು ರೆಡ್ಮಿ A2+ ನಲ್ಲಿ ಫಿಂಗರ್​ಪ್ರಿಂಟ್ ಸೆನ್ಸಾರ್ ಆಯ್ಕೆ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Tue, 23 May 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ