AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi A1: ರೆಡ್ಮಿಯ ಈ ಹೊಸ ಫೋನ್​ಗೆ ಕಾದು ಕುಳಿತ ಬಜೆಟ್ ಪ್ರಿಯರು: ಸೆ. 6ಕ್ಕೆ ಬಿಡುಗಡೆ

ಕಳೆದ ತಿಂಗಳು ದೇಶದಲ್ಲಿ ರೆಡ್ಮಿ ನೋಟ್ 11 SE ಫೋನ್ ಅನಾವರಣಗೊಳಿಸಿದ್ದ ಕಂಪನಿ ಇದೀಗ ಭಾರತದಲ್ಲಿ ರೆಡ್ಮಿ ಎ1 (Redmi A1) ಎಂಬ ಹೊಸ ಮೊಬೈಲ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ.

Redmi A1: ರೆಡ್ಮಿಯ ಈ ಹೊಸ ಫೋನ್​ಗೆ ಕಾದು ಕುಳಿತ ಬಜೆಟ್ ಪ್ರಿಯರು: ಸೆ. 6ಕ್ಕೆ ಬಿಡುಗಡೆ
Redmi A1
TV9 Web
| Edited By: |

Updated on: Sep 03, 2022 | 12:25 PM

Share

ಮೊದಲೆಲ್ಲ ತಿಂಗಳಿಗೆ ಮೂರರಿಂದ ನಾಲ್ಕು ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದ್ದ ಶವೋಮಿ ಕಂಪನಿ ಈಗ ಇವುಗಳ ಸಂಖ್ಯೆಯಲ್ಲಿ ಕೊಂಚ ಕಡಿಮೆ ಮಾಡಿದೆ. ಎಡೆಬಿಡದೆ ಮಾರುಕಟ್ಟೆಯಲ್ಲಿ ಮೊಬೈಲ್​ಗಳು ರಿಲೀಸ್ ಆಗುತ್ತಿರುವುದರಿಂದ ಅವುಗಳಿಗಿಂತ ವಿಶೇಷವಾದ ಫೋನನ್ನು ತಯಾರಿಸುವಲ್ಲಿ ಶವೋಮಿ ಬ್ಯುಸಿಯಾಗಿದೆ. ಇದೀಗ ಕೆಲ ದಿನಗಳ ಬಳಿಕ ಶವೋಮಿ (Xiaomi) ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದೆ. ಕಳೆದ ತಿಂಗಳು ದೇಶದಲ್ಲಿ ರೆಡ್ಮಿ ನೋಟ್ 11 SE ಫೋನ್ ಅನಾವರಣಗೊಳಿಸಿದ್ದ ಕಂಪನಿ ಇದೀಗ ಭಾರತದಲ್ಲಿ ರೆಡ್ಮಿ ಎ1 (Redmi A1) ಎಂಬ ಹೊಸ ಮೊಬೈಲ್ ಅನ್ನು ರಿಲೀಸ್ ಮಾಡಲು ಮುಂದಾಗಿದೆ.

ಫ್ಲಾಟ್ ಎಡ್ಜ್ ಡಿಸೈನ್ ಹೊಂದಿರುವ ಈ ರೆಡ್ಮಿ A1 ಸ್ಮಾರ್ಟ್​​ಫೋನ್ ಇದೇ ಸೆಪ್ಟಂಬರ್ 6 ರಂದು ಮಧ್ಯಾಹ್ಹ 12 ಗಂಟೆಗೆ ಭಾರತದಲ್ಲಿ ಬಿಡುಗಡೆ ಆಗಲಿದೆ. ವಾಟರ್​ಡ್ರಾಪ್ ನಾಚ್ ಡಿಸ್ ಪ್ಲೇ ಈ ಫೋನ್ ಹೊಂದಿದ್ದು ಬಲಿಷ್ಠವಾದ ಬ್ಯಾಟರಿ, ಆಕರ್ಷಕ ಕ್ಯಾಮೆರಾ ನೀಡಲಾಗಿದೆಯಂತೆ. ಇದೊಂದು ಬಜೆಟ್ ಫೋನಾಗಿದ್ದರೂ ಪವರ್​ಫುಲ್ ಪ್ರೊಸೆಸರ್ ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಕಂಪನಿ ಈ ಫೋನಿನ ಫೀಚರ್ಸ್ ಬಗ್ಗೆ ಮಾಹಿತಿ ನೀಡಿಲ್ಲ. ಆದರೆ, ಮೂಲಗಳ ಪ್ರಕಾರ ಕೆಲ ವಿಶೇಷತೆಗಳು ಸೋರಿಕೆಯಾಗಿವೆ.

ಇದನ್ನೂ ಓದಿ
Image
WhatsApp: ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಖಾತೆ ಬ್ಯಾನ್: ತಪ್ಪಿಯೂ ಹೀಗೆ ಮಾಡಬೇಡಿ
Image
WhatsApp: ಇನ್ಮುಂದೆ ವಾಟ್ಸ್​ಆ್ಯಪ್ ಕಾರ್ಯನಿರ್ವಹಿಸಲ್ಲ: ಐಫೋನ್ ಬಳಕೆದಾರರು ತಪ್ಪದೇ ಈ ಸ್ಟೋರಿ ಓದಿ
Image
iPhone 14: ಸೆಪ್ಟಂಬರ್​ನಲ್ಲಿ ಬಿಡುಗಡೆ ಆಗಲಿರುವ ಸ್ಮಾರ್ಟ್​ಫೋನ್​ಗಳು ಯಾವುವು?: ಇಲ್ಲಿದೆ ನೋಡಿ ಲಿಸ್ಟ್
Image
iPhone 14 Series: ಬಿಡುಗಡೆಗೆ ಕೆಲವೇ ದಿನವಿರುವಾಗ ಸೋರಿಕೆ ಆಯ್ತು ಐಫೋನ್ 14 ಬೆಲೆ: ಎಷ್ಟು ಗೊತ್ತೇ?

ರೆಡ್ಮಿ A1 ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM + 128GBಸ್ಟೋರೇಜ್‌ ಆಯ್ಕೆಗಳಿಂದ ರಿಲೀಸ್ ಆಗುವುದು ಖಚಿತವಾಗಿದೆ. ಬಿಳಿ ಮತ್ತು ಹಸಿರು ಬಣ್ಣಗಗಳ ಆಯ್ಕೆಯಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದೆ. ಇದು 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಐಪಿಎಲ್ ಎಲ್​ಸಿಡಿ ಡಿಸ್‌ಪ್ಲೇ ಹೊಂದಿರುವ ಸಾಧ್ಯತೆ ಇದೆ. 90Hz ರಿಫ್ರೆಶ್ ರೇಟ್ ನೀಡಲಾಗಿದೆ.

ಈ ಫೋನ್​ನಲ್ಲಿ ಮೀಡಿಯಾಟೆಕ್‌ ಹೀಲಿಯೊ A22 ಚಿಪ್​ ಅಳವಡಿಸಲಾಗಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ರೆಡ್ಮಿ A1 ಸ್ಮಾರ್ಟ್‌ಫೋನ್‌ ಕ್ವಾಡ್ ಡ್ಯುಯೆಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ. ಎರಡನೇ ಕ್ಯಾಮೆರಾ 2 ಡೆಪ್ತ್ ಸೆನ್ಸಾರ್‌ನಿಂದ ಕೂಡಿದೆ. ಇವುಗಳ ಜೊತಗೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದದು, ಇದಕ್ಕೆ ತಕ್ಕಂತೆ 18W ವೇಗದ ಚಾರ್ಜಿಂಗ್ ಬೆಂಬಲ ನೀಡಬಹುದು. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G, ಡ್ಯುಯಲ್–ಬ್ಯಾಂಡ್ Wi-Fi, ಬ್ಲೂಟೂತ್ v5.0, ಮತ್ತು ಮಲ್ಟಿಫಂಕ್ಷನಲ್ NFC ಅನ್ನು ಬೆಂಬಲಿಸುತ್ತದೆ. ಇದರ ನಿಖರ ಬೆಲೆ ಬಹಿರಂಗಗೊಂಡಿಲ್ಲ. ಆದರೆ, ಶವೋಮಿ ಬಹಳ ಸಮಯದ ನಂತರ ಭಾರತದಲ್ಲಿ 10,000 ರೂ. ಒಳಗೆ ಈ ಫೋನನ್ನು ಲಾಂಚ್ ಮಾಡಲಿದೆ ಎಂಬ ಮಾತಿದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ