Redmi K50i: ಭಾರತದಲ್ಲಿಂದು ರೆಡ್ಮಿ K50i ಸ್ಮಾರ್ಟ್‌ಫೋನ್ ಬಿಡುಗಡೆ: ಬೆಲೆ ಎಷ್ಟು?, ಫೀಚರ್ಸ್ ಏನು?
ರೆಡ್ಮಿ ಕೆ50ಐ (Redmi K50i) ಫೋನ್ ಇಂದು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಈ ಫೋನ್ 67W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿ ಹೊಂದಿದ್ದು, 15 ನಿಮಿಷ ಚಾರ್ಜ್ ಮಾಡಿದರೆ ದಿನ ಪೂರ್ತಿ ಉಪಯೋಗಿಸಬಹುದಂತೆ .
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಶವೋಮಿ (Xiaomi) ಸಂಸ್ಥೆ ವಿನೂತನ ಪ್ರಯೋಗ ಮಾಡುವುದರಲ್ಲಿ ಎತ್ತಿದ ಕೈ. ಮಾರುಕಟ್ಟೆಗೆ ಸದಾ ಏನಾದರು ಹೊಸ ತನವನ್ನು ಪರಿಚಯಿಸುವ ಶವೋಮಿ ಇದೀಗ ವಿಶೇಷವಾಗಿರುವ ಸ್ಮಾರ್ಟ್‌ಫೋನ್ ಒಂದನ್ನು ಪರಿಚಯಿಸಲು ಹೊರಟಿದೆ. ಇದೇ ವರ್ಷ ಕಳೆದ ಮಾರ್ಚ್ನಲ್ಲಿ ರೆಡ್ಮಿ K50 (Redmi K50) ಸ್ಮಾರ್ಟ್‌ಫೋನ್ ಸರಣಿಯನ್ನು ಲಾಂಚ್ ಮಾಡಿದ್ದ ಶವೋಮಿ, ಇದು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದಿನ ಆವೃತ್ತಿಯನ್ನು ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಅದುವೇ ರೆಡ್ಮಿ ಕೆ50ಐ (Redmi K50i). ಈ ಫೋನ್ ಇಂದು ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಶಾಕಿಂಗ್ ಎಂದರೆ ಈ ಫೋನ್ 67W ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿ ಹೊಂದಿದ್ದು, 15 ನಿಮಿಷ ಚಾರ್ಜ್ ಮಾಡಿದರೆ ದಿನ ಪೂರ್ತಿ ಉಪಯೋಗಿಸಬಹುದಂತೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟಿರಬಹುದು?, ವಿಶೇಷತೆ ಏನು ಎಂಬುದನ್ನು ನೋಡೊಣ.
- ರೆಡ್ಮಿ ತನ್ನ K50i ಸ್ಮಾರ್ಟ್‌ಫೋನ್ ಇಂದು ಮಧ್ಯಾಹ್ನ 12 ಗಂಟೆಗೆ ಅನಾವರಣ ಆಗಲಿದೆ. ಇದರ ಬೆಲೆ 24,000 ರೂ. ಯಿಂದ 28,000 ರೂ. ಒಳಗೆ ಇರಬಹುದೆಂದು ಅಂದಾಜಿಸಲಾಗಿದೆ.
- ಇದು 6.6 ಇಂಚಿನ IPS LCD ಡಿಸ್ ಪ್ಲೇ ಹೊಂದಿರಲಿದೆ. 144 Hz ರಿಫ್ರೆಶ್ ರೇಟ್ನಿಂದ ಕೂಡಿದೆ. ಜೊತೆಗೆ ಫುಲ್ ಹೆಚ್ಡಿ+ ರೆಸಲೂಷನ್ ಇರಲಿದೆಯಂತೆ.
- ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಆಂಡ್ರಾಯ್ಡ್ 12 OS ನೊಂದಿಗೆ ಕಾರ್ಯನಿರ್ವಹಿಸಲಿದೆ.
- ಈ ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸೆಲ್ ಮತ್ತು ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ.
- ಇನ್ನು ಮುಂಭಾಗದಲ್ಲಿ ಇದು 16 ಮೆಗಾ ಪಿಕ್ಸೆಲ್ ಸಂವೇದಕವನ್ನು ಹೊಂದಿದೆ. 5,080mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 67W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಪಡೆದಿದೆ.
- ಉಳಿದಂತೆ ರೆಡ್ಮಿ K50i ಸ್ಮಾರ್ಟ್‌ಫೋನ್ ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ. ಇದು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ಮೂಲಕ ಸೇಲ್ ಕಾಣಲಿದೆ.
ಇದನ್ನೂ ಓದಿ