AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi K50i 5G: 67W ಫಾಸ್ಟ್ ಚಾರ್ಜಿಂಗ್, ಕಡಿಮೆ ಬೆಲೆ: ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ K50i ಸ್ಮಾರ್ಟ್‌ಫೋನ್ ಬಿಡುಗಡೆ

Redmi K50i 5G Price: ರೆಡ್ಮಿ K50i ಸ್ಮಾರ್ಟ್‌ಫೋನ್ ದೇಶದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 6GB + 128GB ರೂಪಾಂತರಕ್ಕೆ 25,999 ರೂ. ನಿಗದಿ ಮಾಡಲಾಗಿದೆ.

Redmi K50i 5G: 67W ಫಾಸ್ಟ್ ಚಾರ್ಜಿಂಗ್, ಕಡಿಮೆ ಬೆಲೆ: ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ K50i ಸ್ಮಾರ್ಟ್‌ಫೋನ್ ಬಿಡುಗಡೆ
Redmi K50i 5G
Follow us
TV9 Web
| Updated By: Vinay Bhat

Updated on: Jul 21, 2022 | 7:49 AM

ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಶವೋಮಿ (Xiaomi) ಸಂಸ್ಥೆ ವಿನೂತನ ಪ್ರಯೋಗ ಮಾಡುವುದರಲ್ಲಿ ಎತ್ತಿದ ಕೈ. ಮಾರುಕಟ್ಟೆಗೆ ಸದಾ ಏನಾದರು ಹೊಸ ತನವನ್ನು ಪರಿಚಯಿಸುವ ಶವೋಮಿ ಇದೀಗ ವಿಶೇಷವಾಗಿರುವ ಸ್ಮಾರ್ಟ್​​ಫೋನ್ ಒಂದನ್ನು ಅನಾವರಣ ಮಾಡಿದೆ. ಇದೇ ವರ್ಷ ಕಳೆದ ಮಾರ್ಚ್​ನಲ್ಲಿ ರೆಡ್ಮಿ K50 (Redmi K50) ಸ್ಮಾರ್ಟ್‌ಫೋನ್ ಸರಣಿಯನ್ನು ಲಾಂಚ್‌ ಮಾಡಿದ್ದ ಶವೋಮಿ, ಇದು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿತ್ತು. ಇದೀಗ ಇದರ ಮುಂದಿನ ಆವೃತ್ತಿಯಾದ ರೆಡ್ಮಿ ಕೆ50(Redmi K50i) ಫೋನನ್ನು ಭಾರತದಲ್ಲಿ ರಿಲೀಸ್ ಮಾಡಿದೆ. ಈ ಫೋನ್ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, 5080 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ನೀಡಲಾಗಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು?, ವಿಶೇಷತೆ ಏನು ಎಂಬುದನ್ನು ನೋಡೊಣ.

  1. ರೆಡ್ಮಿ K50i 5G ಸ್ಮಾರ್ಟ್‌ಫೋನ್ ದೇಶದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 6GB + 128GB ರೂಪಾಂತರಕ್ಕೆ 25,999 ರೂ. ನಿಗದಿ ಮಾಡಲಾಗಿದೆ. ಹಾಗೆಯೇ 8GB + 256GB ಸ್ಟೋರೇಜ್‌ ಫೋನ್ ಬೆಲೆ 28,999 ರೂ. ಆಗಿದೆ.
  2. ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಈ ಫೋನ್ ಜುಲೈ 23 ರಿಂದ ಮಾರಾಟ ಕಾಣಲಿದೆ.
  3. ಆಫರ್ ಕೂಡ ನೀಡಲಾಗಿದ್ದು ICICIಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ 3,000 ರೂ. ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ಜೊತೆಗೆ ಅಮೆಜಾನ್‌ ನಲ್ಲಿ ಅಮೆಜಾನ್‌ ಪೇ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಅನಿಯಮಿತ ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿದೆ.
  4. ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೇಶ್‌ ರೇಟ್‌ ಅನ್ನು ಒಳಗೊಂಡಿದ್ದು, ಡಾಲ್ಬಿ ವಿಷನ್ ಮತ್ತು HDR10 ಸಪೋರ್ಟ್‌ ಸಹ ಪಡೆದಿದೆ.
  5. ಇದನ್ನೂ ಓದಿ
    Image
    OnePlus Nord 2T 5G: 16GB RAM, 150W ಫಾಸ್ಟ್ ಚಾರ್ಜಿಂಗ್: ಒನ್​​ಪ್ಲಸ್ ನಾರ್ಡ್​ 2T ಸ್ಮಾರ್ಟ್​​ಫೋನ್​​ ಬೆಲೆ ಬಹಿರಂಗ
    Image
    Google Pixel 6a: ಭಾರತದಲ್ಲಿ ಗೂಗಲ್‌ ಪಿಕ್ಸೆಲ್‌ 6a ಸ್ಮಾರ್ಟ್​​ಫೋನ್ ಬೆಲೆ ಬಹಿರಂಗ: ಎಷ್ಟು ಗೊತ್ತೇ?
    Image
    ರೆನೋ 8 ಸರಣಿ ಬಿಡುಗಡೆ ಕಾರ್ಯಕ್ರಮದ ಮಧ್ಯೆ ಭಾರತದ ಒಪ್ಪೋ ಯೂಟ್ಯೂಬ್ ಚಾನೆಲ್ ದಿಢೀರ್ ಸ್ಥಗಿತ
    Image
    Oppo Reno 8 Series: ಭಾರತದಲ್ಲಿ ಬಹುನಿರೀಕ್ಷಿತ ಒಪ್ಪೋ 8 ರೆನೋ ಸರಣಿ ಬಿಡುಗಡೆ: ಖರೀದಿಗೆ ಕ್ಯೂ ಗ್ಯಾರಂಟಿ
  6. ಮೀಡಿಯಾ ಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲ ಪಡೆದಿದೆ.
  7. ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ.
  8. ಇದರಲ್ಲಿರುವ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ಕೂಡ ನೀಡಲಾಗಿದೆ.
  9. ರೆಡ್ಮಿ K50i ಸ್ಮಾರ್ಟ್‌ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದು ಲಿಕ್ವಿಡ್‌ಕೂಲ್ 2.0 ಸೌಲಭ್ಯ ಹೊಂದಿರುವುದು ವಿಶೇಷ.

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್