Redmi K50i: ಕಳೆದ ವರ್ಷ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಈ ರೆಡ್ಮಿ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ
Amazon Offer: ಕಳೆದ ವರ್ಷ ಅನಾವರಣಗೊಂಡು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ ಕೆ50ಐ (Redmi K50i) ಫೋನ್ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ.
ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಸಂಸ್ಥೆ ಶವೋಮಿ (Xiaomi) ತನ್ನ ರೆಡ್ಮಿ ಬ್ರ್ಯಾಂಡ್ನ ಅಡಿಯಲ್ಲಿ ಅನೇಕ ಫೋನ್ಗಳನ್ನು ಬಿಡುಗಡೆ ಮಾಡಿದೆ. ರೆಡ್ಮಿ ಫೋನ್ಗೆಂದೇ ದೇಶದಲ್ಲಿ ಹೆಚ್ಚಿನ ಅಭಿಮಾನಿಗಳಿದ್ದಾರೆ. ಈ ಕಂಪನಿಯ ಫೋನ್ ರಿಲೀಸ್ ಆದರೆ, ಅದು ಭರ್ಜರಿ ಆಗಿ ಸೇಲ್ ಕಾಣುತ್ತದೆ. ಸದ್ಯ ಶವೋಮಿ ರೆಡ್ಮಿ ಅಡಿಯಲ್ಲಿ ಯಾವುದೇ ಹೊಸ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡಿಲ್ಲ. ಆದರೆ, ಕಳೆದ ವರ್ಷ ಅನಾವರಣಗೊಂಡು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ ಕೆ50ಐ (Redmi K50i) ಫೋನ್ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ. ಡೈಮೆನ್ಸಿಟಿ 8100 SoC ಪ್ರೊಸೆಸರ್, 5080mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಫೀಚರ್ಗಳನ್ನು ಒಳಗೊಂಡಿರುವ ಈ ಫೋನ್ ಅತಿ ಕಡಿಮೆ ಬೆಲೆಗೆ ಸೇಲ್ ಕಾಣುತ್ತಿದೆ.
ರೆಡ್ಮಿ K50i 5G ಸ್ಮಾರ್ಟ್‌ಫೋನ್ ದೇಶದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 6GB RAM+ 128GB ರೂಪಾಂತರಕ್ಕೆ 31,999 ರೂ. ಇತ್ತು. ಆದರೀಗ ಈ ಸ್ಮಾರ್ಟ್‌ಫೋನ್ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ತಾಣದಲ್ಲಿ ಶೇ. 34 ರಷ್ಟು ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ 6GB RAM + 128GB ಸ್ಟೋರೇಜ್‌ನ ವೇರಿಯಂಟ್ ಅನ್ನು ನೀವು ಕೇವಲ 20,999 ರೂ. ಗಳಿಗೆ ಖರೀದಿಸಬಹುದು.
ಡಿಸ್ಕೌಂಟ್ ಜೊತೆಗೆ ಬ್ಯಾಂಕ್ ಆಫರ್ ಕೂಡ ನೀಡಲಾಗಿದ್ದು ICICIಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ 3,000 ರೂ. ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ಜೊತೆಗೆ ಅಮೆಜಾನ್ ನಲ್ಲಿ ಅಮೆಜಾನ್ ಪೇ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಅನಿಯಮಿತ ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿದೆ. ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ.
Poco F5 Pro 5G: ದೇಶದ ಗ್ಯಾಜೆಟ್ ಮಾರುಕಟ್ಟೆಗೆ ಹೊಸ ಪೋಕೊ ಫೋನ್ ಬಿಡುಗಡೆ
ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೇಶ್ ರೇಟ್ ಅನ್ನು ಒಳಗೊಂಡಿದ್ದು, ಡಾಲ್ಬಿ ವಿಷನ್ ಮತ್ತು HDR10 ಸಪೋರ್ಟ್ ಸಹ ಪಡೆದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 8100 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಬೆಂಬಲ ಪಡೆದಿದೆ.
ಟ್ರಿಪಲ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದರಲ್ಲಿರುವ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ಕೂಡ ನೀಡಲಾಗಿದೆ.
ರೆಡ್ಮಿ K50i ಸ್ಮಾರ್ಟ್‌ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದು ಲಿಕ್ವಿಡ್‌ಕೂಲ್ 2.0 ಸೌಲಭ್ಯ ಹೊಂದಿರುವುದು ವಿಶೇಷ. ಜೊತೆಗೆ 5ಜಿ ಸಪೋರ್ಟ್ ಮಾಡುತ್ತದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ