AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi K50i Offer: ಭಾರತದಲ್ಲಿ ಇದೇ ಮೊದಲ ಬಾರಿ ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ ರೆಡ್ಮಿ K50i 5G ಸ್ಮಾರ್ಟ್‌ಫೋನ್

Amazon Offer: ಡೈಮೆನ್ಸಿಟಿ 8100 SoC ಪ್ರೊಸೆಸರ್‌, 5080mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಫೀಚರ್​ಗಳನ್ನು ಒಳಗೊಂಡಿರುವ ರೆಡ್ಮಿ K50i 5G ಸ್ಮಾರ್ಟ್‌ಫೋನ್ ಭಾರತದಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಬೆಲೆಗೆ ನಿಮ್ಮದಾಗಿಸಬಹುದು.

Redmi K50i Offer: ಭಾರತದಲ್ಲಿ ಇದೇ ಮೊದಲ ಬಾರಿ ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ ರೆಡ್ಮಿ K50i 5G ಸ್ಮಾರ್ಟ್‌ಫೋನ್
Redmi K50i
Vinay Bhat
|

Updated on: Jun 02, 2023 | 12:28 PM

Share

ಚೀನಾದ ಜನಪ್ರಿಯ ಸಂಸ್ಥೆ ಶವೋಮಿ (Xiaomi) ಈಗಾಗಲೇ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಅನೇಕ ಫೋನ್​ಗಳನ್ನು ಬಿಡುಗಡೆ ಮಾಡಿದೆ. ರೆಡ್ಮಿ ಫೋನ್​ ರಿಲೀಸ್ ಆಯಿತು ಎಂದಾದರೆ ಎಗ್ಗಿಲ್ಲದೆ ಸೇಲ್ ಆಗುತ್ತಿದೆ. ದೇಶದಲ್ಲಿ ಈ ಫೋನ್​ಗೆಂದೇ ಹೆಚ್ಚಿನ ಅಭಿಮಾನಿಗಳಿದ್ದಾರೆ. ಕೆಲ ವಾರಗಳ ಹಿಂದೆ ಶವೋಮಿ ಕೇವಲ 5,999 ರೂ. ಗೆ ರೆಡ್ಮಿ A2 ಎಂಬ ಹೊಸ ಸ್ಮಾರ್ಟ್​ಫೋನ್​ (Smartphone) ರಿಲೀಸ್ ಮಾಡಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಕಳೆದ ವರ್ಷ ಅನಾವರಣಗೊಂಡು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ ಕೆ50ಐ (Redmi K50i) ಫೋನ್ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ. ಡೈಮೆನ್ಸಿಟಿ 8100 SoC ಪ್ರೊಸೆಸರ್‌, 5080mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಫೀಚರ್​ಗಳನ್ನು ಒಳಗೊಂಡಿರುವ ಈ ಫೋನ್ ಭಾರತದಲ್ಲಿ ಇದೇ ಮೊದಲ ಬಾರಿಗೆ ಅತಿ ಕಡಿಮೆ ಬೆಲೆಗೆ ನಿಮ್ಮದಾಗಿಸಬಹುದು.

ಏನಿದೆ ಆಫರ್?:

ರೆಡ್ಮಿ K50i 5G ಸ್ಮಾರ್ಟ್‌ಫೋನ್ ದೇಶದಲ್ಲಿ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿತ್ತು. ಇದರ 6GB RAM+ 128GB ರೂಪಾಂತರಕ್ಕೆ 31,999 ರೂ. ಇತ್ತು. ಆದರೀಗ ಈ ಸ್ಮಾರ್ಟ್‌ಫೋನ್‌ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ತಾಣದಲ್ಲಿ ಶೇ. 34 ರಷ್ಟು ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ 6GB RAM + 128GB ಸ್ಟೋರೇಜ್‌ನ ವೇರಿಯಂಟ್‌ ಅನ್ನು ನೀವು ಕೇವಲ 20,999 ರೂ. ಗಳಿಗೆ ಖರೀದಿಸಬಹುದು.

ಇದನ್ನೂ ಓದಿ
Image
Samsung Galaxy A14: ಸ್ಯಾಮ್​ಸಂಗ್ ಲೇಟೆಸ್ಟ್ ಗ್ಯಾಲಕ್ಸಿ ಸ್ಮಾರ್ಟ್​ಫೋನ್ ಭಾರತದಲ್ಲಿ ಬಿಡುಗಡೆ
Image
Alienware m16: ಡೆಲ್ ಸೂಪರ್ ಸ್ಪೀಡ್ ಗೇಮಿಂಗ್ ಲ್ಯಾಪ್​ಟಾಪ್ ಬಿಡುಗಡೆ
Image
Galaxy F54 5G: ಜೂನ್ 6ಕ್ಕೆ ಗ್ಯಾಲಕ್ಸಿ F54 5G ಬಿಡುಗಡೆ: ಭಾರತಕ್ಕೆ ಬರುತ್ತಿದೆ 108MP ಕ್ಯಾಮೆರಾದ ಹೊಸ ಫೋನ್
Image
Facebook Scam: ಫೇಸ್​ಬುಕ್ ಹೊಸ ಸ್ಕ್ಯಾಮ್​ಗೆ ಬೆಚ್ಚಿಬಿದ್ದ ಜನತೆ: ನಿಮಗೂ ಹೀಗೆ ಮೆಸೇಜ್ ಬರಬಹುದು

ಡಿಸ್ಕೌಂಟ್ ಜೊತೆಗೆ ಬ್ಯಾಂಕ್ ಆಫರ್ ಕೂಡ ನೀಡಲಾಗಿದ್ದು ICICIಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ 1,500 ರೂ. ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ಜೊತೆಗೆ ಅಮೆಜಾನ್‌ ನಲ್ಲಿ ಅಮೆಜಾನ್‌ ಪೇ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಅನಿಯಮಿತ ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿದೆ. ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ.

Virus: ಶಾಕಿಂಗ್: ಗೂಗಲ್ ಪ್ಲೇ ಸ್ಟೋರ್‌ನಲ್ಲಿ 100 ಕ್ಕೂ ಹೆಚ್ಚು ಆ್ಯಪ್​ಗಳಿಗೆ ವೈರಸ್: ನಿಮ್ಮಲ್ಲಿದ್ರೆ ತಕ್ಷಣ ಡಿಲೀಟ್ ಮಾಡಿ

ಫೀಚರ್ಸ್ ಏನಿದೆ?:

ರೆಡ್ಮಿ K50i ಸ್ಮಾರ್ಟ್‌ಫೋನ್ 6.6 ಇಂಚಿನ ಐಪಿಎಸ್‌ ಎಲ್‌ಸಿಡಿ ಮಾದರಿಯ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 144Hz ರಿಫ್ರೇಶ್‌ ರೇಟ್‌ ಅನ್ನು ಒಳಗೊಂಡಿದ್ದು, ಡಾಲ್ಬಿ ವಿಷನ್ ಮತ್ತು HDR10 ಸಪೋರ್ಟ್‌ ಸಹ ಪಡೆದಿದೆ. ಮೀಡಿಯಾ ಟೆಕ್‌ ಡೈಮೆನ್ಸಿಟಿ 8100 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಬೆಂಬಲ ಪಡೆದಿದೆ.

ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಹಾಗೆಯೇ ದ್ವಿತೀಯ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಸೆನ್ಸಾರ್‌ ಹೊಂದಿದೆ. ಇದರಲ್ಲಿರುವ ತೃತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 16 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫೀ ಕ್ಯಾಮೆರಾ ಕೂಡ ನೀಡಲಾಗಿದೆ.

ರೆಡ್ಮಿ K50i ಸ್ಮಾರ್ಟ್‌ಫೋನ್ 5,080mAh ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ 67W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಪಡೆದಿದೆ. ಇದು ಲಿಕ್ವಿಡ್‌ಕೂಲ್ 2.0 ಸೌಲಭ್ಯ ಹೊಂದಿರುವುದು ವಿಶೇಷ. ಜೊತೆಗೆ 5ಜಿ ಸಪೋರ್ಟ್ ಮಾಡುತ್ತದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?
ಚುನಾವಣಾ ಆಯೋಗದಿಂದ ನೋಟಿಸ್, ಬಿಹಾರ ಡಿಸಿಎಂ ವಿಜಯ್ ಹೇಳಿದ್ದೇನು?