Redmi K50i: ಶಓಮಿ ರೆಡ್ಮಿ ಸ್ಮಾರ್ಟ್​ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ

ಕಿರಣ್​ ಐಜಿ

Updated on: May 13, 2023 | 11:04 AM

ಕ್ರೆಡಿಟ್ ಕಾರ್ಡ್‌ನೊಂದಿಗೆ 3,000 ರೂ. ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ಜೊತೆಗೆ ಅಮೆಜಾನ್‌ ನಲ್ಲಿ ಅಮೆಜಾನ್‌ ಪೇ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಅನಿಯಮಿತ ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿದೆ.

ಚೀನಾ ಮೂಲದ ಜನಪ್ರಿಯ ಸ್ಮಾರ್ಟ್‌ಫೋನ್‌ ತಯಾರಕ ಸಂಸ್ಥೆ ಶಓಮಿ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಅನೇಕ ಫೋನ್​ಗಳನ್ನು ಬಿಡುಗಡೆ ಮಾಡಿದೆ. ರೆಡ್ಮಿ ಫೋನ್​ಗೆಂದೇ ದೇಶದಲ್ಲಿ ಹೆಚ್ಚಿನ ಅಭಿಮಾನಿಗಳಿದ್ದಾರೆ. ಈ ಕಂಪನಿಯ ಫೋನ್ ರಿಲೀಸ್ ಆದರೆ, ಅದು ಭರ್ಜರಿ ಆಗಿ ಸೇಲ್ ಕಾಣುತ್ತದೆ. ಶಓಮಿ ರೆಡ್ಮಿ ಅಡಿಯಲ್ಲಿ ಯಾವುದೇ ಹೊಸ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿಲ್ಲ. ಆದರೆ, ಕಳೆದ ವರ್ಷ ಅನಾವರಣಗೊಂಡು ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ರೆಡ್ಮಿ ಕೆ50ಐ ಫೋನ್ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದೆ. ಡೈಮೆನ್ಸಿಟಿ 8100 SoC ಪ್ರೊಸೆಸರ್‌, 5080mAh ಸಾಮರ್ಥ್ಯದ ಬ್ಯಾಟರಿ ಸೇರಿದಂತೆ ಅನೇಕ ಫೀಚರ್​ಗಳನ್ನು ಒಳಗೊಂಡಿರುವ ಈ ಫೋನ್ ಅತಿ ಕಡಿಮೆ ಬೆಲೆಗೆ ಲಭ್ಯವಾಗುತ್ತಿದೆ. ಡಿಸ್ಕೌಂಟ್ ಜೊತೆಗೆ ಬ್ಯಾಂಕ್ ಆಫರ್ ಕೂಡ ನೀಡಲಾಗಿದ್ದು ICICI ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನೊಂದಿಗೆ 3,000 ರೂ. ವರೆಗೆ ತ್ವರಿತ ರಿಯಾಯಿತಿ ಪಡೆಯಬಹುದು. ಜೊತೆಗೆ ಅಮೆಜಾನ್‌ ನಲ್ಲಿ ಅಮೆಜಾನ್‌ ಪೇ ಐಸಿಐಸಿಐ ಕ್ರೆಡಿಟ್ ಕಾರ್ಡ್‌ನೊಂದಿಗೆ 5% ಅನಿಯಮಿತ ಕ್ಯಾಶ್ ಬ್ಯಾಕ್ ಆಫರ್ ನೀಡಲಾಗಿದೆ. ಈ ಫೋನ್ ಕ್ವಿಕ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಫ್ಯಾಂಟಮ್ ಬ್ಲೂ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರುತ್ತದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.