AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Price Hike: ಭಾರತದಲ್ಲಿ ಭರ್ಜರಿ ಸೇಲ್: ಈ ಎರಡು ಸ್ಮಾರ್ಟ್​ಫೋನ್​ಗಳ ಬೆಲೆಯಲ್ಲಿ ಏರಿಕೆ

ರೆಡ್ಮಿ ನೋಟ್ 10 ಮತ್ತು ಪೊಕೊ ಎಮ್​3 ಸ್ಮಾರ್ಟ್​ಫೋನ್ ಬೆಲೆಯಲ್ಲಿ ತಲಾ 500 ರೂ. ಹೆಚ್ಚಳ ಮಾಡಲಾಗಿದೆ. ಸದ್ಯ ರೆಡ್ಮಿ ನೋಟ್ 10ನ ಒಂದು ಮಾದರಿಗಷ್ಟೆ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

Price Hike: ಭಾರತದಲ್ಲಿ ಭರ್ಜರಿ ಸೇಲ್: ಈ ಎರಡು ಸ್ಮಾರ್ಟ್​ಫೋನ್​ಗಳ ಬೆಲೆಯಲ್ಲಿ ಏರಿಕೆ
Redmi Note 10, Poco M3
TV9 Web
| Updated By: Vinay Bhat|

Updated on: Aug 28, 2021 | 2:00 PM

Share

ಭಾರತ ಸ್ಮಾರ್ಟ್​ಫೋನ್ (Smartphone) ಕಂಪೆನಿಗಳ ನೆಚ್ಚಿನ ತಾಣ ಎಂದರೆ ತಪ್ಪಾಗಲಾರದು. ದೇಶದಲ್ಲಿ ವಾರಕ್ಕೆ ಕನಿಷ್ಠ ಎಂದರೂ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುತ್ತವೆ. ಅದರಲ್ಲೂ ಬಜೆಟ್ ಬೆಲೆಯ ಫೋನುಗಳಿಗೆ ಭಾರತದಲ್ಲಿ ಎಲ್ಲಿಲ್ಲದ ಬೇಡಿಕೆ. ಹೀಗಾಗಿಯೇ ಕಡಿಮೆ ಬೆಲೆಯ ಆಕರ್ಷಕ ಫೀಚರ್​ಗಳಿರುವ ಸ್ಮಾರ್ಟ್​ಫೋನ್ ಭಾರತದಲ್ಲಿ ಬೇಜಾನ್ ಸೇಲ್ ಕಾಣುತ್ತವೆ. ಇದೇ ಕಾರಣದಿಂದ ಕೆಲ ಕಂಪೆನಿಗಳು ಫೋನನ್ನು ಬಿಡುಗಡೆ ಮಾಡಿ ಉತ್ತಮ ಪ್ರತಿಕ್ರಿಯೆ ಕೇಳಿ ಬರುತ್ತಿದೆ ಎಂಬೊತ್ತಿಗೆ ಇದರ ಬೆಲೆಯನ್ನು ಏರಿಕೆ ಮಾಡುತ್ತವೆ. ಅದರಂತೆ ಇತ್ತೀಚೆಗಷ್ಟೆ ಬಿಡುಗಡೆ ಆದ ಶವೋಮಿ ಕಂಪನಿಯ ರೆಡ್ಮಿ ನೋಟ್ 10 (Redmi Note 10) ಮತ್ತು ಪೊಕೊ ಕಂಪನಿಯ ಪೊಕೊ M3 (Poco M3) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿದೆ.

ರೆಡ್ಮಿ ನೋಟ್ 10 ಮತ್ತು ಪೊಕೊ ಎಮ್​3 ಸ್ಮಾರ್ಟ್​ಫೋನ್ ಬೆಲೆಯಲ್ಲಿ ತಲಾ 500 ರೂ. ಹೆಚ್ಚಳ ಮಾಡಲಾಗಿದೆ. ಸದ್ಯ ರೆಡ್ಮಿ ನೋಟ್ 10ನ ಒಂದು ಮಾದರಿಗಷ್ಟೆ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಇದರ ಪ್ರಕಾರ 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯಕ್ಕೆ 13,999 ರೂ. ಇದೆ. ಅಂತೆಯೆ ಪೊಕೊ M3ಯ 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯಕ್ಕೆ 10,999 ರೂ., 6GB RAM ಮತ್ತು 64GB ಸ್ಟೋರೆಜ್ ಆಯ್ಕೆಗೆ 11,499 ರೂ. ನಿಗದಿ ಮಾಡಲಾಗಿದೆ.

 ರೆಡ್‌ಮಿ ನೋಟ್ 10 ವಿಶೇಷತೆ?:

ರೆಡ್‌ಮಿ ನೋಟ್ 10 ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 678 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ ಐಎಂಎಕ್ಸ್ 582 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಪೊಕೊ M3 ವಿಶೇಷತೆ?:

ಈ ಸ್ಮಾರ್ಟ್‌ಫೋನ್‌ 1,080×2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.53-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ.ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ನಿಮ್ಮ ಸ್ಮಾರ್ಟ್‌ಫೋನಿನಲ್ಲಿರುವ ಡುಪ್ಲಿಕೇಟ್ ಕಾಂಟೆಕ್ಟ್‌ಗಳನ್ನು ಒಮ್ಮೆಲೇ ಡಿಲೀಟ್ ಮಾಡಲು ಇಲ್ಲಿದೆ ಟ್ರಿಕ್

Moto Edge 20 Fusion: ಮೊದಲ ಸೇಲ್ ಕಾಣುತ್ತಿದೆ 108MP ಕ್ಯಾಮೆರಾದ ಮೋಟೋ ಎಡ್ಜ್ 20 ಫ್ಯೂಷನ್: ಬಂಪರ್ ಆಫರ್​ನಲ್ಲಿ ಖರೀದಿಸಿ

(Redmi Note 10 and Poco M3 prices increase in india by rs 500 here is the latest price)