Redmi Note 10 Lite: ಭಾರತದಲ್ಲಿ ಬಂಪರ್ ಫೀಚರ್ಸ್, ಕಡಿಮೆ ಬೆಲೆಯ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್​ಫೋನ್ ರಿಲೀಸ್

ಭಾರತದಲ್ಲಿ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ ಒಟ್ಟು ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ 13,999 ರೂ.

Redmi Note 10 Lite: ಭಾರತದಲ್ಲಿ ಬಂಪರ್ ಫೀಚರ್ಸ್, ಕಡಿಮೆ ಬೆಲೆಯ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್​ಫೋನ್ ರಿಲೀಸ್
Redmi Note 10 Lite

ಭಾರತೀಯ ಸ್ಮಾರ್ಟ್​ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿರುವ ಶವೋಮಿ (Xiaomi) ಇದೀಗ ದೇಶದಲ್ಲಿ ತನ್ನ ರೆಡ್ಮಿ ಬ್ರಾಂಡ್‌ ಅಡಿಯಲ್ಲಿ ಹೊಸ ರೆಡ್ಮಿ ನೋಟ್‌ 10 ಲೈಟ್ (Redmi Note 10 Lite) ಸ್ಮಾರ್ಟ್‌ಫೋನ್‌ ಅನ್ನು ಅನಾವರಣ ಮಾಡಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌, ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್, 18W ವೇಗದ ಚಾರ್ಜಿಂಗ್ ಬೆಂಬಲ ಸೇರಿದಂತೆ ಅನೇಕ ವಿಶೇಷ ಫೀಚರ್ಸ್‌ ಒಳಗೊಂಡಿರುವ ಈ ಸ್ಮಾರ್ಟ್​ಫೋನ್ ಕಳೆದ ವರ್ಷ ಬಿಡುಗಡೆ ಮಾಡಲಾದ ರೆಡ್ಮಿ ನೋಟ್‌ 9 ಪ್ರೋ (Redmi Note 9 Pro) ಫೋನ್‌ನ ಬ್ಯಾಡ್ ವರ್ಷನ್‌ ಆಗಿದೆ.

ಭಾರತದಲ್ಲಿ ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ ಒಟ್ಟು ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಗೆ 13,999 ರೂ. ಹಾಗೂ 4GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ 15,999 ರೂ. ಬೆಲೆ ಹೊಂದಿದೆ. ಇದಲ್ಲದೆ 6GB RAM + 128GB ಸ್ಟೋರೇಜ್ ಮಾದರಿಗೆ 16,999 ರೂ. ನಿಗದಿ ಮಾಡಲಾಗಿದೆ. ಇದು Mi.com ಮತ್ತು ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್​ನಲ್ಲಿ ಅಕ್ಟೋಬರ್ 2 ರಿಂದ ಸೇಲ್‌ ಕಾಣಲಿದೆ. ಲಾಂಚ್ ಆಫರ್ ನಲ್ಲಿ ಎಸ್‌ಬಿಐ ಕ್ರೆಡಿಟ್ ಕಾರ್ಡ್‌ನಲ್ಲಿ ಖರೀದಿ ಮಾಡುವವರಿಗೆ 1,250 ರೂ. ಭರ್ಜರಿ ರಿಯಾಯಿತಿ ಸಿಗಲಿದೆ.

ರೆಡ್ಮಿ ನೋಟ್ 10 ಲೈಟ್ ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 720G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸರ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸರ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರವನ್ನು ಹೊಂದಿದೆ.

5,020mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬ್ಯಾಕಪ್ ಹೊಂದಿದೆ. ಇದು 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ 4G VoLTE, Wi-Fi 802.11ac, ಬ್ಲೂಟೂತ್‌ v5.0, GPS/A-GPS, NavIC, USB Type-C ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇದು ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಮತ್ತು AI ಫೇಸ್ ಅನ್‌ಲಾಕ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆಗಳನ್ನು ಸೇರಿಸಲಾಗಿದೆ.

Amazon: ಕೇವಲ 1 ರೂ. ಗೆ ಸ್ಮಾರ್ಟ್​ಫೋನ್ ಸೇರಿ ಅನೇಕ ಪ್ರಾಡಕ್ಟ್ ಬುಕ್ ಮಾಡಿ: ಅಮೆಜಾನ್​ನಿಂದ ಹಿಂದೆಂದೂ ನೀಡದ ಆಫರ್

WhatsApp: ವಾಟ್ಸ್​ಆ್ಯಪ್​ ಹೊಸ ಅಪ್ಡೇಟ್​ನಲ್ಲಿ ನಿರೀಕ್ಷೆಗೂ ಮೀರಿದ ಫೀಚರ್: ಏನದು ಗೊತ್ತೇ?, ಇಲ್ಲಿದೆ ನೋಡಿ

(Redmi Note 10 Lite Xiaomi has launched latest budget smartphone Redmi Note 10 Lite in India)

Read Full Article

Click on your DTH Provider to Add TV9 Kannada