AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಪರ್ ಪ್ರೊಸೆಸರ್, ಅದ್ಭುತ ಕ್ಯಾಮೆರಾ-ಬ್ಯಾಟರಿ: Redmi Note 10T ಫೋನಿನ 5G ಬೆಲೆ ಇಷ್ಟೆನಾ?

ಭಾರತದಲ್ಲಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಸ್ಮಾರ್ಟ್​ಫೋನ್​ಗಳ ಪೈಕಿ Redmi Note 10T ಕೂಡ ಆಗಿದೆ. ಕಂಪೆನಿ ಈಗಾಗಲೇ ರೆಡ್ಮಿ ನೋಟ್ 10T ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ ಎಂದು ಹೇಳಿದೆ.

ಬಂಪರ್ ಪ್ರೊಸೆಸರ್, ಅದ್ಭುತ ಕ್ಯಾಮೆರಾ-ಬ್ಯಾಟರಿ: Redmi Note 10T ಫೋನಿನ 5G ಬೆಲೆ ಇಷ್ಟೆನಾ?
Redmi Note 10T 5G
TV9 Web
| Edited By: |

Updated on: Jul 15, 2021 | 2:37 PM

Share

ಭಾರತೀಯ ಸ್ಮಾರ್ಟ್​ಫೋನ್ (Smartphone) ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಚೀನಾ ಮೂಲದ ಶವೋಮಿ (Xiaomi) ಕಂಪೆನಿ ತನ್ನ ರೆಡ್ನಿ ನೋಟ್ (Redmi Note) ಸರಣಿಯಲ್ಲಿ ಹೊಸ ಮೊಬೈಲ್ ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಇದೇ ಜುಲೈ 20ಕ್ಕೆ ರೆಡ್ಮಿ ನೋಟ್ 10T 5G ಸ್ಮಾರ್ಟ್​ಫೋನ್ ಭಾರತದಲ್ಲಿ ಲಾಂಚ್ ಆಗಲಿದೆ. ಅತ್ಯುತ್ತಮ ಪ್ರೊಸೆಸರ್, ಕ್ಯಾಮೆರಾ, ಬ್ಯಾಟರಿ ಹೊಂದಿರುವ ಈ ಫೋನಿನ ಬೆಲೆ ಇದೀಗ ಆನ್​ಲೈನ್​ನಲ್ಲಿ ಸೋರಿಕೆಯಾಗಿದೆ.

ಇದು ರೆಡ್ಮಿ ನೋಟ್ 10 ಸರಣಿಯ ಮುಂದುವರೆದ ಭಾಗವಾಗಿದ್ದು, ಚೊಚ್ಚಲ 5G ಸ್ಮಾರ್ಟ್​ಫೋನ್ ಆಗಿದೆ. ಸದ್ಯ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ ಭಾರತದಲ್ಲಿ ಇದು ಒಂದು ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದೆಯಂತೆ. ಅದು 4GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯವನ್ನು ಹೊಂದಿದ್ದು, ಇದರ ಬೆಲೆ ಕೇವಲ 14,999 ರೂ. ಎಂದು ತಿಳಿದುಬಂದಿದೆ.

ಭಾರತದಲ್ಲಿ ಕಡಿಮೆ ಬೆಲೆಗೆ ಲಭ್ಯವಿರುವ ಕೆಲವೇ ಕೆಲವು 5G ಸ್ಮಾರ್ಟ್​ಫೋನ್​ಗಳ ಪೈಕಿ ಇದುಕೂಡ ಆಗಿದೆ. ಕಂಪೆನಿ ಈಗಾಗಲೇ ರೆಡ್ಮಿ ನೋಟ್ 10T ಅಮೆಜಾನ್​ನಲ್ಲಿ ಸೇಲ್ ಕಾಣಲಿದೆ ಎಂದು ಹೇಳಿದೆ.

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್​ನಿಂ ಕಾರ್ಯನಿರ್ವಹಿಸಲಿದ್ದು, ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲ ಪಡೆದಿದೆ.

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಎಫ್ / 1.79 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ಅಳವಡಿಸಲಾಗಿದೆ.

ರೆಡ್ಮಿ ನೋಟ್ 10ಟಿ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಹೇಳಲಾಗಿದೆ.

Amazon: ಅಮೆಜಾನ್​​ನಲ್ಲಿ ಕೇವಲ 740 ರೂ.ಗೆ Nokia G20 ಸ್ಮಾರ್ಟ್​ಫೋನ್ ಖರೀದಿಸಿ: ಇಂದಿನಿಂದ ಸೇಲ್ ಆರಂಭ

ನೀವು WhatsApp Web ಬಳಸುತ್ತಿದ್ದೀರಾ?: ಹಾಗಾದ್ರೆ ಒಮ್ಮೆ ಈ ಟ್ರಿಕ್ ಫಾಲೋ ಮಾಡಿನೋಡಿ

(Redmi Note 10T 5G India price leaks online ahead of July 20 launch)

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ