Redmi Note 11: ಮಾರುಕಟ್ಟೆಯಲ್ಲಿ ಧೂಳೆಬ್ಬಿಸುತ್ತಿದೆ ರೆಡ್ಮಿ ನೋಟ್ 11 ಸರಣಿಯ ಹೊಸ ಸ್ಮಾರ್ಟ್‌ಫೋನ್
Redmi Note 11S: ಈ ಹಿಂದೆ ದಾಖಲೆಯ ಮಟ್ಟದಲ್ಲಿ ಭಾರತದಲ್ಲಿ ಸೇಲ್ ಆಗಿದ್ದ ರೆಡ್ಮಿ ನೋಟ್ ಸರಣಿ ಫೋನ್ಗಳ ಸಾಲಿಗೆ ರೆಡ್ಮಿ ನೋಟ್ 11 ಮತ್ತು ರೆಡ್ಮಿ ನೋಟ್ 11S ಸೇರಲಿದೆ ಎಂದು ಟೆಕ್ ಪಂಡಿತರು ಮಾತನಾಡಿಕೊಳ್ಳುತ್ತಿದ್ದಾರೆ.
ಭಾರತೀಯ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಶವೋಮಿ (Xiaomi) ಕಂಪನಿಯ ರೆಡ್ಮಿ ನೋಟ್ ಸರಣಿಯ ಹವಾ ಮತ್ತೆ ಶುರುವಾಗಿದೆ. ದೇಶದಲ್ಲಿ ಹೊಸ ರೆಡ್ಮಿ ನೋಟ್ 11 (Redmi Note 11) ಮತ್ತು ರೆಡ್ಮಿ ನೋಟ್ 11S (Redmi Note 11S) ಫೋನ್ಗಳು ಲಾಂಚ್ ಆಗಿದ್ದು, ಮೊಬೈಲ್ ಪ್ರಿಯರು ಫಿದಾ ಆಗಿದ್ದಾರೆ. ಈ ಹಿಂದೆ ದಾಖಲೆಯ ಮಟ್ಟದಲ್ಲಿ ಭಾರತದಲ್ಲಿ ಸೇಲ್ ಆಗಿದ್ದ ರೆಡ್ಮಿ ನೋಟ್ ಸರಣಿ ಫೋನ್ಗಳ ಸಾಲಿಗೆ ಇದುಕೂಡ ಸೇರಲಿದೆ ಎಂದು ಟೆಕ್ ಪಂಡಿತರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು 90Hz ರಿಫ್ರೆಶ್ ರೇಟ್ ಬಲಪಡೆದಿರುವ ಅಮೋಲೆಡ್ ಡಿಸ್‌ಪ್ಲೇ ಹೊಂದಿವೆ. ಇದಲ್ಲದೆ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್, 5,000mAh ಸಾಮರ್ಥ್ಯದ ಬ್ಯಾಟರಿ ಬಲವನ್ನು ಪಡೆದುಕೊಂಡಿದೆ. ಇದರ ಬೆಲೆ ಕೂಡ ಕಡಿಮೆ ಇದ್ದು ಬಜೆಟ್ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ.
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, MIUI 13 ನೊಂದಿಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
ಇನ್ನು ರೆಡ್ಮಿ ನೋಟ್ 11S ಸ್ಮಾರ್ಟ್‌ಫೋನ್ ಕೂಡ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ MIUI 13 ನೊಂದಿಗೆ ಆಂಡ್ರಾಯ್ಡ್ 11 ಬೆಂಬಲಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ HM2 ಸೆನ್ಸಾರ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ. ಇದು 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒಳಗೊಂಡಿದೆ.
ಬೆಲೆ ಎಷ್ಟು?:
ರೆಡ್ಮಿ ನೋಟ್ 11S ಸ್ಮಾರ್ಟ್‌ಫೋನ್ ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. 6GB RAM ಮತ್ತು 64GB ಮಾದರಿಗೆ 16,499. ರೂ ಬೆಲೆ ನಿಗದಿ ಪಡಿಸಲಾಗಿದೆ. 6GB RAM ಮತ್ತು 128GB ಮಾದರಿ ಆಯ್ಕೆಗೆ 17,499 ರೂ., 8GB RAM ಮತ್ತು 128GB ಆಯ್ಕೆಯ ಬೆಲೆ 18,499 ರೂ. ಇದೆ. ಈ ಸ್ಮಾರ್ಟ್‌ಫೋನ್ ಫೆಬ್ರವರಿ 16 ರಿಂದ ಅಮೆಜಾನ್ನಲ್ಲಿ ಮಾರಾಟ ಶುರು ಮಾಡಲಿದೆ. ಎಂಐ. ಕಾಮ್, ಎಂಐ ಸ್ಟೋರ್ ಮತ್ತು ರಿಟೇಲ್ ಸ್ಟೋರ್ಗಳಲ್ಲು ಖರೀದಿಸಬಹುದು.
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್ ಕೂಡ ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗುತ್ತದೆ. ಇದರ 4GB RAM ಮತ್ತು 64GB ಮಾದರಿಗೆ 13,499. ರೂ ಬೆಲೆ ನಿಗದಿ ಪಡಿಸಲಾಗಿದೆ. 6GB RAM ಮತ್ತು 64GB ಮಾದರಿ ಆಯ್ಕೆಗೆ 14,499 ರೂ. ಹಾಗೆಯೆ 6GB RAM ಮತ್ತು 128GB ಆಯ್ಕೆಯ ಬೆಲೆ 15,499 ರೂ. ಇದೆ. ಈ ಸ್ಮಾರ್ಟ್‌ಫೋನ್ ಫೆಬ್ರವರಿ 11 ರಿಂದ ಖರೀದಿಗೆ ಲಭ್ಯವಿರುತ್ತದೆ. ಇದುಕೂಡ ಅಮೆಜಾನ್, ಎಂಐ.ಕಾಮ್, ಎಂಐ ಹೋಮ್ ಸ್ಟೋರ್‌ಗಳು, ಎಂಐ ಸ್ಟುಡಿಯೋಸ್ ಮೂಲಕ ಖರೀದಿಸಬಹುದಾಗಿದೆ.