ಭಾರತದ ಸ್ಮಾರ್ಟ್‌ಫೋನ್ (Smartphone) ವಲಯ ಸಾಕಷ್ಟು ದೊಡ್ಡದಿದೆ. ಹಲವು ಕಂಪೆನಿಗಳು ತಮ್ಮ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿವೆ. ಕಳೆದ ತಿಂಗಳು ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಅದರಂತೆ ಈ ನವೆಂಬರ್ ತಿಂಗಳಲ್ಲೂ ಹಲವು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿವೆ. ಅದರಲ್ಲೂ ಈಗ ಹಬ್ಬ ಹರಿದಿನಗಳಿರುವ ಕಾರಣ ಸಾಲು ಸಾಲು ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ಕಾತುರವಾಗಿದೆ. ಹಾಗಾದ್ರೆ ನವೆಂಬರ್ ತಿಂಗಳಿನಲ್ಲಿ ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಯಾವೆಲ್ಲಾ ಫೋನ್‌ಗಳು ಎಂಟ್ರಿ ನೀಡಲಿವೆ ಎಂಬುದನ್ನು ನೋಡೋಣ (Smartphones set to launch in November 2021).
ಜಿಯೋಫೋನ್ ನೆಕ್ಸ್ಟ್: ಭಾರತದಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಜಿಯೋಫೋನ್ ನೆಕ್ಸ್ಟ್ ದೀಪಾವಳಿ ಪ್ರಯುಕ್ತ ಭಾರತದ ಮಾರುಕಟ್ಟೆಗೆ ಲಗ್ಗೆ ಹಾಕಲಿದೆ. ಬಜೆಟ್ ಬೆಲೆಯಲ್ಲಿ ಲಭ್ಯವಾಗಲಿರುವ ಈ ಸ್ಮಾರ್ಟ್‌ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್ ಸಹಯೋಗದೊಂದಿಗೆ ಸಿದ್ದವಾಗಿದೆ. 5.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ QM-215 Soc ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 13 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 3500 mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಪೊಕೊ M4 ಪ್ರೊ: ಈ ಸ್ಮಾರ್ಟ್‌ಫೋನ್ ಕೂಡ ಇದೇ ತಿಂಗಳು ಮಾರುಕಟ್ಟೆಗೆ ಲಗ್ಗೆ ಹಾಕಲಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ IPS LCD ಡಿಸ್ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 810 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ.
ಒನ್‌ಪ್ಲಸ್ 9RT ಸ್ಮಾರ್ಟ್‌ಫೋನ್ ನವೆಂಬರ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದು 6.62 ಇಂಚಿನ AMOLED ಡಿಸ್‌ಪ್ಲೇ ಯನ್ನು ಹೊಂದಿದೆ. ಈ ಡಿಸ್‌ಪ್ಲೇ HDR10+ ಗೆ ಬೆಂಬಲವನ್ನು ಹೊಂದಿರುತ್ತದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 5G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50-ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ.
ಇನ್ನು ಐಕ್ಯೂ 8 ಪ್ರೊ ಸ್ಮಾರ್ಟ್‌ಫೋನ್ ಕೂಡ ನವೆಂಬರ್‌ನಲ್ಲಿ ಬಿಡುಗಡೆಯಾಗಲಿದೆ. ಇದು 6.78 ಇಂಚಿನ AMOLED ಡಿಸ್ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888+ 5G ಪ್ರೊಸೆಸರ್ ಹೊಂದಿದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಹೊಂದಿರಲಿದೆ ಎನ್ನಲಾಗಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.
ಇತ್ತೀಚೆಗಷ್ಟೆ ಚೀನಾದಲ್ಲಿ ಲಾಂಚ್ ಆಗಿ ದಾಖಲೆ ಮಟಟ್ಟದಲ್ಲಿ ಸೇಲ್ ಕಾಣುತ್ತಿರುವ ರೆಡ್ಮಿ ನೋಟ್ 11 ಕೂಡ ಇದೇ ತಿಂಗಳು ಭಾರತಕ್ಕೂ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 920 5G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 6GB RAM ಮತ್ತು 128GB ಸ್ಟೋರೇಜ್, 8GB RAM ಮತ್ತು 128GB ಸ್ಟೋರೇಜ್, ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎನ್ನಲಾಗಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108-ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ 5160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
Redmi Note 11: ರೆಡ್ಮಿಯ ಈ ಹೊಸ ಸ್ಮಾರ್ಟ್‌ಫೋನ್ ಖರೀದಿಗೆ ಕ್ಯೂ ಜನರು: 1 ಗಂಟೆಯೊಳಗೆ 5 ಲಕ್ಷ ಫೋನ್ ಸೇಲ್
(Redmi Note 11 Poco M4 Pro Here we take a look at some of the smartphones set to launch in November)