Redmi Note 11 Pro+: ಇಂದು ಮೊದಲ ಸೇಲ್ ಕಾಣುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್: ಬೆಲೆ ಎಷ್ಟು?

| Updated By: Vinay Bhat

Updated on: Mar 15, 2022 | 2:17 PM

ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ. ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ-ಕಾಮರ್ಸ್‌ ತಾಣವಾದ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಶುರುವಾಗಿದೆ.

Redmi Note 11 Pro+: ಇಂದು ಮೊದಲ ಸೇಲ್ ಕಾಣುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್: ಬೆಲೆ ಎಷ್ಟು?
Redmi Note 11 Pro Plus 5G
Follow us on

ಶವೋಮಿ (Xioami) ಕಂಪನಿಯ ಸ್ಮಾರ್ಟ್​ಫೋನ್​ಗಳಿಗೆ ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಇದಕ್ಕಾಗಿಯೇ ಇದು ದೇಶದ ನಂಬರ್ ಒನ್ ಮೊಬೈಲ್ ಬ್ರ್ಯಾಂಡ್ ಆಗಿದೆ. ತನ್ನ ಎಂಐ, ರೆಡ್ಮಿ (Redmi) ಅಡಿಯಲ್ಲಿ ಹೊಚ್ಚ ಹೊಸ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವ ಶವೋಮಿ ಇತ್ತೀಚೆಗಷ್ಟೆ ಕ್ಯಾಮೆರಾ ಪ್ರಿಯರಿಗಾಗಿ ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್‌ 11 ಪ್ರೊ (Redmi Note 11 Pro) ಮತ್ತು ರೆಡ್ಮಿ ನೋಟ್‌ 11 ಪ್ರೊ + 5G (Redmi Note 11 Pro+) ಯನ್ನು ರಿಲೀಸ್ ಮಾಡಿತ್ತು. ಈ ಪೈಕಿ ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್ ಇಂದು ಮೊದಲ ಸೇಲ್ ಕಾಣುತ್ತಿದೆ. ಮಧ್ಯಾಹ್ನ 12 ಗಂಟೆಯಿಂದ ಪ್ರಸಿದ್ಧ ಇ-ಕಾಮರ್ಸ್‌ ತಾಣವಾದ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಶುರುವಾಗಿದೆ. ಇದರಲ್ಲಿ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್‌, 108 ಮೆಗಾಫಿಕ್ಸೆಲ್ ಕ್ಯಾಮೆರಾ, ದೀರ್ಘ ಬಾಳಿಕೆ ಭರ್ಜರಿ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್​ಗಳಿವೆ. ಅಚ್ಚರಿ ಎಂದರೆ ಇದು ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿದೆ.

ಹೌದು, ಭಾರತದಲ್ಲಿ ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ 5G ಫೋನ್ ಒಟ್ಟು ಮೂರು ವೇರಿಯಂಟ್ ಆಯ್ಕೆ ಪಡೆದಿದೆ. ಇದರ 6GB RAM + 128GB ಸ್ಟೋರೇಜ್‌ ವೇರಿಯಂಟ್ ಬೆಲೆಯು 20,999 ರೂ. ಆಗಿದೆ. 8GB + 128GB ಸ್ಟೋರೇಜ್‌ ವೇರಿಯಂಟ್ ಬೆಲೆಯು 22,999 ರೂ. ಆಗಿದೆ ಹಾಗೂ 8GB RAM + 256GB ಸ್ಟೋರೇಜ್‌ ವೇರಿಯಂಟ್ ಬೆಲೆಯು 24,999 ರೂ. ಆಗಿದೆ. ಈ ಫೋನ್ ಮೇಲೆ ಆಫರ್ ಕೂಡ ನೀಡಲಾಗಿದ್ದು ಹೆಚ್‌ಡಿಎಫ್‌ ಕ್ರೆಡಿಟ್ ಕಾರ್ಡ್‌ ಮೂಲಕ ಖರೀದಿ ಮಾಡಿದರೆ 1,000 ರೂ. ಗಳ ರಿಯಾಯಿತಿ ಸಿಗಲಿದೆ. ಹಾಗೆಯೇ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಿದೆ.

ಇದರ ವಿಶೇಷತೆ ಬಗ್ಗೆ ಗಮನಿಸುವುದಾದರೆ, ರೆಡ್ಮಿ ನೋಟ್‌ 11 ಪ್ರೊ ಪ್ಲಸ್‌ 5G 6.67 ಇಂಚಿನ ಫುಲ್‌ ಹೆಚ್‌ಡಿ + ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಕೂಡ 120Hz ರಿಫ್ರೆಶ್ ರೇಟ್‌ ಮತ್ತು 320Hz ಟಚ್ ಸ್ಯಾಂಪ್ಲಿಂಗ್ ಬೆಂಬಲದೊಂದಿಗೆ ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸಲ್ ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸಲ್ ಮ್ಯಾಕ್ರೋ ಕ್ಯಾಮೆರಾವನ್ನು ಒಳಗೊಂಡಿದೆ.

ವಿಶೇಷವಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 67W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ. ಇನ್ನು ಈ ಫೋನ್ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಸ್ಟಿರಿಯೊ ಸ್ಪೀಕರ್ ಸೆಟಪ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್, (ಹೈಬ್ರಿಡ್) ಮೈಕ್ರೋ-ಎಸ್‌ಡಿ ಕಾರ್ಡ್ ಸ್ಲಾಟ್, ಐಆರ್ ಬ್ಲಾಸ್ಟರ್ ಮತ್ತು 3.5 ಎಂಎಂ ಆಡಿಯೊ ಜಾಕ್ ಅನ್ನು ಹೊಂದಿದೆ. ಇದು IP53 ಸ್ಪ್ಲಾಶ್-ನಿರೋಧಕ ರೇಟಿಂಗ್ ಅನ್ನು ಸಹ ಹೊಂದಿದೆ. ಆಂಡ್ರಾಯ್ಡ್ 11 ಅನ್ನು ಆಧರಿಸಿದ MIUI 13 ಅನ್ನು ಹ್ಯಾಂಡ್‌ಸೆಟ್ ಬೂಟ್ ಮಾಡುತ್ತದೆ.

Telegram Update: ವಾಟ್ಸ್​ಆ್ಯಪ್​ನಲ್ಲಿರದ ಮತ್ತೊಂದು ಅಚ್ಚರಿ ಫೀಚರ್ ಪರಿಚಯಿಸಿದ ಟೆಲಿಗ್ರಾಮ್