ಶವೋಮಿ (Xioami) ಕಂಪನಿಯ ಸ್ಮಾರ್ಟ್ಫೋನ್ಗಳಿಗೆ ಭಾರತದಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ಇದಕ್ಕಾಗಿಯೇ ಇದು ದೇಶದ ನಂಬರ್ ಒನ್ ಮೊಬೈಲ್ ಬ್ರ್ಯಾಂಡ್ ಆಗಿದೆ. ತನ್ನ ಎಂಐ, ರೆಡ್ಮಿ ಅಡಿಯಲ್ಲಿ ಹೊಚ್ಚ ಹೊಸ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವ ಶವೋಮಿ ಇದೀಗ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ಬಂದಿದೆ. ಭಾರತದಲ್ಲಿ ತನ್ನ ಹೊಸ ರೆಡ್ಮಿ ನೋಟ್ 11 ಪ್ರೊ (Redmi Note 11 Pro) ಮತ್ತು ರೆಡ್ಮಿ ನೋಟ್ 11 ಪ್ರೊ + 5G (Redmi Note 11 Pro+) ಯನ್ನು ಮಾರ್ಚ್ 9 ರಂದು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್, 108 ಮೆಗಾಫಿಕ್ಸೆಲ್ ಕ್ಯಾಮೆರಾ, ದೀರ್ಘ ಬಾಳಿಕೆ ಭರ್ಜರಿ ಬ್ಯಾಟರಿ ಸೇರಿದಂತೆ ಆಕರ್ಷಕ ಫೀಚರ್ಗಳಿಂದ ಈ ಸ್ಮಾರ್ಟ್‌ಫೋನ್ ಕೂಡಿದೆ. ಹೀಗೆ ಸಾಕಷ್ಟು ಕುತೂಹಲ ಕೆರಳಿಸಿದ್ದ ಈ ಸ್ಮಾರ್ಟ್‌ಫೋನ್ ಬೆಲೆ ಇದೀಗ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.
ಭಾರತದಲ್ಲಿ ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆಯಂತೆ. ಇದರ 6GB RAM + 128GB ಸ್ಟೋರೇಜ್ ಆಯ್ಕೆಗೆ 16,999 ರೂ. ಬೆಲೆ ಹೊಂದಿರಲಿದೆ ಎನ್ನಲಾಗಿದೆ. ಹಾಗೆಯೇ 8GB RAM + 128GB ಸ್ಟೋರೇಜ್ ರೂಪಾಂತರದ ಬೆಲೆ 18,999 ರೂ. ಇರಲಿದೆ. ಇದು ಫ್ಯಾಂಟಮ್ ವೈಟ್, ಸ್ಕೈ ಬ್ಲೂ ಮತ್ತು ಸ್ಟೆಲ್ತ್ ಬ್ಲ್ಯಾಕ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಇನ್ನು ರೆಡ್ಮಿ ನೋಟ್ 11 ಪ್ರೊ+ 5G ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆ 21,999 ರೂ. ಮತ್ತು ಟಾಪ್-ಆಫ್-ಲೈನ್ 8GB RAM + 128GB ಸ್ಟೋರೇಜ್ ಮಾಡೆಲ್ ಬೆಲೆ 23,999 ರೂ. ನಿಗದಿ ಮಾಡಲಾಗಿದೆಯಂತೆ.
ಈ ಫೋನ್ಗಳ ವಿಶೇಷತೆ ಬಗ್ಗೆ ಗಮನಿಸುವುದಾದರೆ, ರೆಡ್ಮಿ ನೋಟ್ 11 ಪ್ರೊ ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಮೀಡಿಯಾಟೆಕ್ ಹಿಲಿಯೋ G96 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್, ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.
ಇನ್ನು ರೆಡ್ಮಿ ನೋಟ್ 11 ಪ್ರೊ+ 5G ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿರಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಒಳಗೊಂಡಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು 67W ವೇಗದ ಚಾರ್ಜಿಂಗ್ ಬೆಂಬಲಿಸುತ್ತದೆ.
Realme Narzo 50: ಮೊದಲ ಸೇಲ್ನಲ್ಲೇ ಬಂಪರ್ ಡಿಸ್ಕೌಂಟ್: ಇಂದೇ ಖರೀದಿಸಿ ಹೊಸ ರಿಯಲ್ ಮಿ ನಾರ್ಜೊ 50 ಫೋನ್
WhatsApp: ನೀವು ವಾಟ್ಸ್ಆ್ಯಪ್ನಲ್ಲಿ ಆ ರೀತಿಯ ವಿಡಿಯೋ ಕಳುಹಿಸುತ್ತೀರಾ?: ಹಾಗಿದ್ರೆ ತಪ್ಪದೇ ಈ ಸ್ಟೋರಿ ಓದಿ