Redmi Note 11SE: ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್: ಶವೋಮಿಯಿಂದ ರೆಡ್ಮಿ ನೋಟ್‌ 11SE ಬಿಡುಗಡೆ

ರೆಡ್ಮಿ ನೋಟ್ 11 ಎಸ್​​ಇ (Redmi Note 11SE)., ಈ ಹೊಸ ಸ್ಮಾರ್ಟ್​​ಫೋನ್ ಚೀನಾ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಕೆಲವೇ ತಿಂಗಳಲ್ಲಿ ಇದು ಭಾರತಕ್ಕೂ ಕಾಲಿಡಲಿದೆ.

Redmi Note 11SE: ಬಜೆಟ್ ಬೆಲೆಗೆ ಬಂಪರ್ ಸ್ಮಾರ್ಟ್​ಫೋನ್: ಶವೋಮಿಯಿಂದ ರೆಡ್ಮಿ ನೋಟ್‌ 11SE ಬಿಡುಗಡೆ
Redmi Note 11SE
TV9kannada Web Team

| Edited By: Vinay Bhat

May 26, 2022 | 1:56 PM

ಶವೋಮಿ (Xiaomi) ಕಂಪನಿ ತನ್ನ ಎಂಐ (Mi) ಬ್ರ್ಯಾಂಡ್​ ಅಡಿಯಲ್ಲಿ ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡುವುದು ಸ್ಥಗಿತಗೊಳಿಸಿದ ನಂತರ ರೆಡ್ಮಿ ಬ್ರ್ಯಾಂಡ್​ನಡಿಯಲ್ಲಿ ಆಕರ್ಷಕ ಫೋನ್​ಗನ್ನು ಪರಿಚಯಿಸುತ್ತಿದೆ. ಈ ಸಾಲಿಗೆ ಇದೀಗ ಮತ್ತೊಂದು ಹೊಸ ಮೊಬೈಲ್ ಸೇರ್ಪಡೆಯಾಗಿದೆ. ಅದುವೇ ರೆಡ್ಮಿ ನೋಟ್ 11 ಎಸ್​​ಇ (Redmi Note 11SE). ಹೌದು, ಈ ಹೊಸ ಸ್ಮಾರ್ಟ್​​ಫೋನ್ ಚೀನಾ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಕೆಲವೇ ತಿಂಗಳಲ್ಲಿ ಇದು ಭಾರತಕ್ಕೂ ಕಾಲಿಡಲಿದೆ. ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಕೂಡ ನೀಡಲಾಗಿದೆ. ಉಳಿದಂತೆ ಇದರ ಬೆಲೆ ಎಷ್ಟು?, ಇತರೆ ಫೀಚರ್​​ಗಳು ಏನೆಲ್ಲ ಇವೆ ಎಂಬುದನ್ನು ನೋಡೋಣ.

ಇದನ್ನೂ ಓದಿ

  1. ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಒಟ್ಟು ಎರಡು ಮಾದರಿಯಲ್ಲಿ ಖರೀದಿಗೆ ಸಿಗಲಿದೆ. ಇದರ 4GB RAM + 12GB ಸ್ಟೋರೇಜ್ ಮಾದರಿಗೆ CNY 1,099, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 13,000 ರೂ. ಎನ್ನಬಹುದು.
  2. ಅಂತೆಯೆ 8GB RAM + 128GB ಸ್ಟೋರೇಜ್ ಮಾದರಿಗೆ CNY 1,399 (ಭಾರತದಲ್ಲಿ ಅಂದಾಜು 16,000 ರೂ.) ಆಗಿದೆ. ಈ ಸ್ಮಾರ್ಟ್‌ಫೋನ್ ಡೀಪ್ ಸ್ಪೇಸ್ ಬ್ಲೂ ಮತ್ತು ಶ್ಯಾಡೋ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಈಗಾಗಲೇ ಶವೋಮಿಯ ಚೀನಾ ಸೈಟ್‌ನಲ್ಲಿ ಫ್ರೀ-ಆರ್ಡರ್ ಮಾಡಲು ಲಭ್ಯವಿದ್ದು ಮೇ 31 ರಂದು ಮಾರಾಟ ಶುರುವಾಗಲಿದೆ.
  3. ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಅಡಾಪ್ಟಿವ್‌ಸಿಂಕ್ ಟೆಕ್ನಾಲಜಿ ಹೊಂದಿರುವ 6.5 ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ.
  4. ಮೀಡಿಯಾಟೆಕ್‌ ಡೈಮೆನ್ಸಿಟಿ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಹೊಂದಿದೆ.
  5. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  6. ಇವುಗಳ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಎರಡೂ ಕ್ಯಾಮೆರಾ ಸೆಟಪ್‌ಗಳು 30 fps ನಲ್ಲಿ ಫುಲ್‌ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿವೆ.
  7. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಎಂದಿನಿಂತೆ ಬ್ಲೂಟೂತ್ v5.1 ಮತ್ತು ಡ್ಯುಯಲ್-ಬ್ಯಾಂಡ್ ವೈ-ಫೈನೊಂದಿಗೆ ಬರುತ್ತದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada