Redmi Note 11SE: ಒಂದೇ ದಿನ ಬಾಕಿ: ನಾಳೆ ಭಾರತಕ್ಕೆ ಅಪ್ಪಳಿಸಲಿದೆ ರೆಡ್ಮಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್

ಕೆಲ ದಿನಗಳ ಬಳಿಕ ಶವೋಮಿ (Xiaomi) ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ

Redmi Note 11SE: ಒಂದೇ ದಿನ ಬಾಕಿ: ನಾಳೆ ಭಾರತಕ್ಕೆ ಅಪ್ಪಳಿಸಲಿದೆ ರೆಡ್ಮಿಯ ಬಹುನಿರೀಕ್ಷಿತ ಸ್ಮಾರ್ಟ್​ಫೋನ್
Redmi Note 11SE
Follow us
TV9 Web
| Updated By: Vinay Bhat

Updated on: Aug 25, 2022 | 12:09 PM

ಮೊದಲೆಲ್ಲ ತಿಂಗಳಿಗೆ ಮೂರರಿಂದ ನಾಲ್ಕು ಸ್ಮಾರ್ಟ್​ಫೋನ್​ಗಳನ್ನು (Smartphone) ಬಿಡುಗಡೆ ಮಾಡುತ್ತಿದ್ದ ಶವೋಮಿ ಕಂಪನಿ ಈಗ ಇವುಗಳ ಸಂಖ್ಯೆಯಲ್ಲಿ ಕೊಂಚ ಕಡಿಮೆ ಮಾಡಿದೆ. ಎಡೆಬಿಡದೆ ಮಾರುಕಟ್ಟೆಯಲ್ಲಿ ಮೊಬೈಲ್​ಗಳು ರಿಲೀಸ್ ಆಗುತ್ತಿರುವುದರಿಂದ ಅವುಗಳಿಗಿಂತ ವಿಶೇಷವಾದ ಫೋನನ್ನು ತಯಾರಿಸುವಲ್ಲಿ ಶವೋಮಿ ಬ್ಯುಸಿಯಾಗಿದೆ. ಇದೀಗ ಕೆಲ ದಿನಗಳ ಬಳಿಕ ಶವೋಮಿ (Xiaomi) ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​ಫೋನ್ ಬೆಲೆ 20,000 ರೂ. ಒಳಗೆ ಇರಬಹುದೆಂದು ಅಂದಾಜಿಸಲಾಗಿದೆ.

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ ಆಗಲಿದೆಯಂತೆ. ಇದು 6GB RAM + 64GB, 6GB RAM + 128GB ಮತ್ತು 8GB RAM + 128GB ಸ್ಟೋರೇಜ್‌ ಆಯ್ಕೆಗಳಿಂದ ಕೂಡಿದೆ. ಬಿಫ್ರಾಸ್ಟ್ ಬ್ಲೂ, ಕಾಸ್ಮಿಕ್ ವೈಟ್, ಶ್ಯಾಡೋ ಬ್ಲ್ಯಾಕ್ ಮತ್ತು ಥಂಡರ್ ಪರ್ಪಲ್ ಬಣ್ಣಗಗಳ ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ.

ಈ ಸ್ಮಾರ್ಟ್‌ಫೋನ್​ನ ವಿಶೇಷತೆ ಬಗ್ಗೆ ನೋಡುವುದಾದರೆ, ಇದು 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿರಲಿದೆ. ಇದು 1,100 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದ್ದು, ಸಿನಿಮಾ ವೀಕ್ಷಣೆ ಮಾಡುವಾಗ, ಗೇಮ್ ಆಡುವಾಗ ವಿಶೇಷ ಅನುಭವ ನೀಡುತ್ತದೆ. ಮೀಡಿಯಾಟೆಕ್‌ ಹಿಲಿಯೋ G95 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಮಾಲಿ-G76 GPU ಸಪೋರ್ಟ್‌ ಅನ್ನು ಕೂಡ ಪಡೆದುಕೊಂಡಿದೆ.

ಇದನ್ನೂ ಓದಿ
Image
Apple iPhone 14: ಶೀಘ್ರದಲ್ಲಿ ಬರಲಿದೆ Apple iPhone 14, ಭಾರತದ BIS ವೆಬ್‌ಸೈಟ್‌ನಲ್ಲಿ ಹೇಳಿದ್ದೇನು ಗೊತ್ತಾ?
Image
WhatsApp scam: ವಾಟ್ಸಾಪ್​ನಲ್ಲಿ ಬಂದ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಈ ಸ್ಟೋರಿ ಓದಿ
Image
108MP ಕ್ಯಾಮೆರಾ ಫೋನ್ ಬೇಕೆ?: ಅತಿ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ ಎಂಐ 11X ಪ್ರೊ
Image
iPhone 13: ಐಫೋನ್ ಖರೀದಿಗೆ ಇದೇ ಬೆಸ್ಟ್ ಟೈಮ್: ಐಫೋನ್ 13 ಮೇಲೆ ಬಂಪರ್ ಡಿಸ್ಕೌಂಟ್ ಘೋಷಣೆ

ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ನೀಡಲಾಗಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಆಂಗಲ್ ಲೆನ್ಸ್‌, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸಾರ್‌ಗಳಿಂದ ಕೂಡಿದೆ. ಇವುಗಳ ಜೊತಗೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ನೀಡಲಾಗಿದದು, ಇದಕ್ಕೆ ತಕ್ಕಂತೆ 33W ವೇಗದ ಚಾರ್ಜಿಂಗ್ ಬೆಂಬಲಿಲ ಪಡೆದುಕೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 2.4GHz ಮತ್ತು 5GHz ಡ್ಯುಯಲ್ಬ್ಯಾಂಡ್ Wi-Fi, ಬ್ಲೂಟೂತ್ v5.0, ಮತ್ತು ಮಲ್ಟಿಫಂಕ್ಷನಲ್ NFC ಅನ್ನು ಬೆಂಬಲಿಸುತ್ತದೆ.AI ಫೇಸ್ ಅನ್‌ಲಾಕ್ ಫೀಚರ್ ಕೂಡ ನೀಡಲಾಗಿದೆ.

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್