AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Redmi Note 11T 5G: ಅತ್ಯಂತ ಕಡಿಮೆ ಬೆಲೆಯ 5G ಸ್ಮಾರ್ಟ್​ಫೋನ್ ರೆಡ್ಮಿ ನೋಟ್ 11T ಇಂದು ಫಸ್ಟ್ ಸೇಲ್: ಖರೀದಿಸಬಹುದೇ?

Redmi Note 11T 5G First sale: ರೆಡ್ಮಿ ನೋಟ್ 11T 5G ಸ್ಮಾರ್ಟ್​ಫೋನ್ ಡಿಸೈನ್ ಥೇಟ್ ನೋಟ್ 11 ಮಾದರಿಯಲ್ಲೇ ಇದೆ. ಈ ಸ್ಮಾರ್ಟ್​ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಮೊದಲ ಸೇಲ್ ಕಾಣುತ್ತಿದೆ. ಅಮೆಜಾನ್, ಎಂಐ.ಕಾಮ್ ಎಂಐ ಹೋಮ್ ಮತ್ತು ಆಯ್ದ ರಿಟೇಲ್ ಸ್ಟೋರ್​ಗಳಲ್ಲಿ ಇದು ಖರೀದಿಗೆ ಸಿಗುತ್ತಿದೆ.

Redmi Note 11T 5G: ಅತ್ಯಂತ ಕಡಿಮೆ ಬೆಲೆಯ 5G ಸ್ಮಾರ್ಟ್​ಫೋನ್ ರೆಡ್ಮಿ ನೋಟ್ 11T ಇಂದು ಫಸ್ಟ್ ಸೇಲ್: ಖರೀದಿಸಬಹುದೇ?
Redmi Note 11T 5G
TV9 Web
| Edited By: |

Updated on: Dec 07, 2021 | 1:39 PM

Share

ಮೊಬೈಲ್ (Mobile) ಪ್ರಿಯರು ಕಳೆದೊಂದು ತಿಂಗಳುಗಳಿಂದ ಕಾದು ಕುಳಿತಿದ್ದ ಸ್ಮಾರ್ಟ್​ಫೋನ್ (Smartphone) ಇದೀಗ ಗ್ರಾಹಕರ ಕೈಸೇರಲು ಶುರುವಾಗಿದೆ. ಶವೋಮಿ ಕಂಪೆನಿಯ ಬಹುನಿರೀಕ್ಷಿತ ರೆಡ್ಮಿ ನೋಟ್ 11ಟಿ 5ಜಿ (Redmi Note 11T 5G) ಸ್ಮಾರ್ಟ್​ಫೋನ್ ಇಂದು ಮಧ್ಯಾಹ್ನ 12 ಗಂಟೆಯಿಂದ ಮೊದಲ ಸೇಲ್ ಕಾಣುತ್ತಿದೆ. ಇ ಕಾಮರ್ಸ್ ತಾಣವಾದ ಅಮೆಜಾನ್ (Amazon), ಎಂಐ.ಕಾಮ್ (Mi.com), ಎಂಐ ಹೋಮ್ (Mi Home) ಮತ್ತು ಆಯ್ದ ರಿಟೇಲ್ ಸ್ಟೋರ್​ಗಳಲ್ಲಿ ಇದು ಖರೀದಿಗೆ ಸಿಗುತ್ತಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 810SoC ಪ್ರೊಸೆಸರ್ ಬಲವನ್ನು ಈ ಸ್ಮಾರ್ಟ್​ಫೋನ್ ಪಡೆದುಕೊಂಡಿದ್ದು, ಆಕರ್ಷಕ ಕ್ಯಾಮೆರಾ (Camera) ಬೊಂಬಾಟ್ ಬ್ಯಾಟರಿ ಲೈಫ್, ಕೇವಲ ಒಂದೇ ಗಂಟೆಯಲ್ಲಿ 0-100% ಫುಲ್ ಚಾರ್ಜ್ ಸೇರಿದಂತೆ ಬಂಪರ್ ಫೀಚರ್ಸ್​ನಿಂದ ಕೂಡಿದೆ.

ಬೆಲೆ ಎಷ್ಟು?:

ರೆಡ್ಮಿ ನೋಟ್ 11T 5G ಸ್ಮಾರ್ಟ್​ಫೋನ್ ಡಿಸೈನ್ ಥೇಟ್ ನೋಟ್ 11 ಮಾದರಿಯಲ್ಲೇ ಇದೆ. ಇದು ರೆಡ್ಮಿ ನೋಟ್ 10T ಬಳಿಕ ಬಿಡುಗಡೆ ಆಗಿರುವ ಎರಡನೇ 5G ಸ್ಮಾರ್ಟ್​ಫೋನ್ ಎಂಬುದು ವಿಶೇಷ. 90Hzನ ಡಿಸ್​ ಪ್ಲೇ ಹೊಂದಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಇದರ 6GB RAM ಮತ್ತು 64GB ಸ್ಟೋರೇಜ್ ರೂಪಾಂತರಕ್ಕಾಗಿ 16,999 ರೂ.ಬೆಲೆ ಹೊಂದಿದೆ. 6GB RAM ಮತ್ತು 128GB ಸ್ಟೋರೇಜ್ ರೂಪಾಂತರವು 17,999 ರೂ. ಹಾಗೂ ಟಾಪ್-ಎಂಡ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದ ಬೆಲೆ 19,999 ರೂ. ಆಗಿದೆ. ಐಸಿಐಸಿಐ ಬ್ಯಾಂಕ್ ಕಾರ್ಡ್ ದಾರರಿಗೆ ಈ ಸ್ಮಾರ್ಟ್​ಫೋನ್ 1,000 ರೂ. ಡಿಸ್ಕೌಂಟ್​ನಲ್ಲಿ ಸಿಗಲಿದೆ. ಅತ್ಯಂತ ಕಡಿಮೆ ಬೆಲೆಗೆ ಸಿಗುತ್ತಿರುವ ಸ್ಮಾರ್ಟ್​ಫೋನ್ ಇದಾಗಿದೆ. ಹೀಗಾಗಿ ನೀವು 5ಜಿ ಪ್ರಿಯರಾಗಿದ್ದರೆ, ಇದನ್ನು ಖರೀದಿಸಬಹುದು.

ಏನು ವಿಶೇಷತೆ?:

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದರ ಮಧ್ಯದಲ್ಲಿ ಹೋಲ್ ಪಂಚ್ ಕಟ್-ಔಟ್ ಹೊಂದಿರುವ ಅಡಾಪ್ಟಿವ್ ಸಿಂಕ್ ಡಿಸ್ಪ್ಲೇ ಇದೆ. ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ Mali-G57 MC2 GPU ಹೊಂದಿದೆ. ಇದು Realme ಮತ್ತು Vivo ಸ್ಮಾರ್ಟ್‌ಫೋನ್‌ಗಳಲ್ಲಿ ಕಂಡುಬರುವ ಡೈನಾಮಿಕ್ RAM ವಿಸ್ತರಣೆಯನ್ನು ಹೋಲುತ್ತದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್‌ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದು f/2.45 ಲೆನ್ಸ್ ಪಡೆದುಕೊಂಡಿದೆ.

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್‌ಫ್ರಾರೆಡ್ (IR), USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ವಾಯ್ಸ್‌ ಅಸಿಸ್ಟೆಂಟ್‌ ಅನ್ನು ಸಕ್ರಿಯಗೊಳಿಸಲು ಮತ್ತು ಕ್ಯಾಮೆರಾವನ್ನು ಪ್ರಾರಂಭಿಸಲು ಡಬಲ್-ಟ್ಯಾಪ್ ಶಾರ್ಟ್‌ಕಟ್‌ಗಳನ್ನು ಬೆಂಬಲಿಸುವ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಹೊಂದಿದೆ.

WhatsApp Feature: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ ಹೊಸ ಬದಲಾವಣೆ: ನೀವು ಗಮನಿಸಿದ್ರಾ?

(Redmi Note 11T 5G sale started in India for the very first time on Amazon Mi Home Here is the price and offer)

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ