ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಹೊಸ ಪ್ರಯೋಗ ನಡೆಸುವುದರಲ್ಲಿ ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಸಂಸ್ಥೆ ಎತ್ತಿದ ಕೈ. ಈಗಂತು ಅಪರೂಪಕ್ಕೆ ಮೊಬೈಲ್ಗಳನ್ನು ಪರಿಚಯಿಸುತ್ತಿರುವ ಶವೋಮಿ ಸಮಯ ತೆಗೆದುಕೊಂಡ ವಿಭಿನ್ನವಾದ ಮೊಬೈಲ್ನೊಂದಿಗೆ ಬರುತ್ತದೆ. ಅದರಂತೆ ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್ ನಡಿಯಲ್ಲಿ ಕಳೆದ ವಾರ ರೆಡ್ಮಿ ನೋಟ್ 12 ಸರಣಿ (Redmi Note 12 series) ಸ್ಮಾರ್ಟ್ಫೋನನ್ನು ರಿಲೀಸ್ ಮಾಡಿತ್ತು. ಇದರಲ್ಲಿ ರೆಡ್ಮಿ ನೋಟ್ 12, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ (Redmi Note 12 Pro +) ಎಂಬ ಮೂರು ಸ್ಮಾರ್ಟ್ಫೋನ್ಗುಗಳು ಇವೆ. ಚೀನಾದಲ್ಲಿ ಧೂಳೆಬ್ಬಿಸುತ್ತಿರುವ ಈ ಸ್ಮಾರ್ಟ್ಫೋನ್ನಲ್ಲಿ ರೆಡ್ಮಿ ನೋಟ್ 12 ಪ್ರೊ+ ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.
ಭಾರತದಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ ಶವೋಮಿ 12i ಹೈಪರ್ಚಾರ್ಜ್ ಎಂಬ ಹೆಸರಿನೊಂದಿಗೆ ರಿಲೀಸ್ ಆಗಲಿದೆ. ಇದು ಶವೋಮಿ 11i ಹೈಪರ್ಚಾರ್ಜ್ ಫೋನಿನ ಮುಂದಿನ ಆವೃತ್ತಿ. ಈ ಫೋನ್ ಬಿಐಎಸ್ ಸರ್ಟಿಫಿಕೇಶನ್ನಲ್ಲಿ ಕಾಣಿಸಿಕೊಂಡ ಕಾರಣ ಕೆಲವೇ ವಾರಗಳಲ್ಲಿ ಭಾರತದಲ್ಲಿ ಅನಾವರಣವಾಗಲಿದೆ ಎಂದು ಹೇಳಲಾಗಿದೆ. ಶವೋಮಿ 12i ಹೈಪರ್ಚಾರ್ಜ್ ಫೋನಿನಲ್ಲಿರುವ ಫೀಚರ್ ರೆಡ್ಮಿ ನೋಟ್ 12 ಪ್ರೊ+ ನಲ್ಲಿರುವುದೇ ಆಗಿದೆ. ಆದರೆ, 12 ಪ್ರೊ+ 210W ವೇಗದ ಚಾರ್ಜಿಂಗ್ ಬೆಂಬಲ ಪಡೆದುಕೊಂಡಿದ್ದರೆ ಶವೋಮಿ 12i ಹೈಪರ್ಚಾರ್ಜ್ 120W ವೇಗದ ಚಾರ್ಜಿಂಗ್ನೊಂದಿಗೆ ಬರುವ ಸಾಧ್ಯತೆ ಇದೆ.
ಶವೋಮಿ 12i ಹೈಪರ್ಚಾರ್ಜ್ 2,400 x 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಬೆಂಬಲಿಸಲಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯ ಪಡೆದುಕೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.
ಶವೋಮಿ 12i ಹೈಪರ್ಚಾರ್ಜ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, GNSS, NFC, ಮತ್ತು USB ಟೈಪ್-ಸಿ ನೀಡಲಾಗಿದೆ. ಭಾರತದಲ್ಲಿ ಈ ಫೋನ್ ಯಾವ ಬಣ್ಣಗಳಲ್ಲಿ ಹಾಗೂ ಎಷ್ಟು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಲಿದೆ ಎಂಬುದು ತಿಳಿದುಬಂದಿಲ್ಲ. ಇದರ ಬೆಲೆ 25,000 ರೂ. ಯಿಂದ 30,000 ರೂ. ಒಳಗಡೆ ಇರಬಹುದು ಎಂದು ಅಂದಾಜಿಸಲಾಗಿದೆ.