Redmi Note 12 Series: ಹೊಸ ವರ್ಷದಂದು ಭಾರತಕ್ಕೆ ಅಪ್ಪಳಿಸುತ್ತಿದೆ 200MP ಕ್ಯಾಮೆರಾದ ಹೊಸ ರೆಡ್ಮಿ ಸ್ಮಾರ್ಟ್​ಫೋನ್: ಬೆಲೆ ಎಷ್ಟು?

ಇದೀಗ ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್​ ನಡಿಯಲ್ಲಿ ಭಾರತದಲ್ಲಿ ಹೊಸ ಪವರ್​ಫುಲ್ ಮೊಬೈಲ್ ಪರಿಚಯಿಸಲು ಸಿದ್ಧತೆ ಮಾಡಿಕೊಂಡಿದೆ. ಅದುವೇ ರೆಡ್ಮಿ ನೋಟ್ 12 ಸರಣಿ. ಇದರಲ್ಲಿ ರೆಡ್ಮಿ ನೋಟ್ 12, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ ಎಂಬ ಮೂರು ಸ್ಮಾರ್ಟ್​ಫೋನ್​ಗುಗಳಿವೆ.

Redmi Note 12 Series: ಹೊಸ ವರ್ಷದಂದು ಭಾರತಕ್ಕೆ ಅಪ್ಪಳಿಸುತ್ತಿದೆ 200MP ಕ್ಯಾಮೆರಾದ ಹೊಸ ರೆಡ್ಮಿ ಸ್ಮಾರ್ಟ್​ಫೋನ್: ಬೆಲೆ ಎಷ್ಟು?
Redmi Note 12 Series
Follow us
TV9 Web
| Updated By: Vinay Bhat

Updated on:Dec 11, 2022 | 12:36 PM

ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ಏನಾದರು ಹೊಸತನವನ್ನು ಪ್ರಯತ್ನ ಮಾಡುವುದರಲ್ಲಿ ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಸಂಸ್ಥೆ ಎತ್ತಿದ ಕೈ. ಈಗಂತು ಅಪರೂಪಕ್ಕೆ ಮೊಬೈಲ್​ಗಳನ್ನು ಪರಿಚಯಿಸುತ್ತಿರುವ ಶವೋಮಿ ಸಮಯ ತೆಗೆದುಕೊಂಡ ವಿಭಿನ್ನವಾದ ಮೊಬೈಲ್​ನೊಂದಿಗೆ ಬರುತ್ತದೆ. ಅದರಂತೆ ಇದೀಗ ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್​ ನಡಿಯಲ್ಲಿ ಭಾರತದಲ್ಲಿ ಹೊಸ ಪವರ್​ಫುಲ್ ಮೊಬೈಲ್ ಪರಿಚಯಿಸಲು ಸಿದ್ಧತೆ ಮಾಡಿಕೊಂಡಿದೆ. ಅದುವೇ ರೆಡ್ಮಿ ನೋಟ್ 12 ಸರಣಿ (Redmi Note 12 series). ಇದರಲ್ಲಿ ರೆಡ್ಮಿ ನೋಟ್ 12, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ (Redmi Note 12 Pro +) ಎಂಬ ಮೂರು ಸ್ಮಾರ್ಟ್​ಫೋನ್​ಗುಗಳಿವೆ. ಈ ಫೋನ್​ಗಳು ಹೊಸ ವರ್ಷ 2023ಕ್ಕೆ ಭಾರತದಲ್ಲಿ ಅನಾವರಣಗೊಳ್ಳಲಿದೆ. ಅಲ್ಲದೆ ಇದು ಹೊಸ ವರ್ಷದ ಮೊದಲ ಸ್ಮಾರ್ಟ್​ಫೋನ್ ಆಗಿರಲಿದೆ. ವಿಶೇಷ ಎಂದರೆ ಇದರಲ್ಲಿ ರೆಡ್ಮಿ ನೋಟ್‌ 12 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ ಬರೋಬ್ಬರಿ 200 ಮೆಗಾಪಿಕ್ಸೆಲ್‌ ಕ್ಯಾಮೆರಾ ಸೆನ್ಸಾರ್‌ ಹೊಂದಿರಲಿದೆಯಂತೆ.

ಡಿಸ್​ಪ್ಲೇ-ಪ್ರೊಸೆಸರ್

ಈ ಮೂರು ಸ್ಮಾರ್ಟ್​ಫೋನ್​ಗಳ ಪೈಕಿ ರೆಡ್ಮಿ ನೋಟ್‌ 12 ಪ್ರೊ+ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೆ ಈ ಸರಣಿಯ ರೆಡ್ಮಿ ನೋಟ್‌ 12 ಪ್ರೊ ಕೂಡ ಇದೆ ಪ್ರೊಸೆಸರ್ ಹೊಂದಿದೆ. ಆದರೆ ರೆಡ್ಮಿ ನೋಟ್ 12 ಸ್ನಾಪ್​ಡ್ರಾಗನ್ 4 Gen 1 ಪ್ರೊಸೆಸರ್​ನಿಂದ ಕೆಲಸ ಮಾಡುತ್ತದೆ. ಉಳಿದಂತೆ ಮೂರು ಫೋನಿನ ಡಿಸ್ ಪ್ಲೇ ಒಂದೇರೀತಿಯಿದೆ.

ಇದನ್ನೂ ಓದಿ
Image
ಸರ್ವರ್ ಡೌನ್ ಸಮಸ್ಯೆ ಸರಿಪಡಿಸಿದ Gmail, ಸಹಜ ಸ್ಥಿತಿಗೆ ಮರಳಿದ ಮೇಲ್ ಸೇವೆಗಳು
Image
Google Pixel 6a: ಫ್ಲಿಪ್​ಕಾರ್ಟ್​ನಿಂದ ಬಂಪರ್ ಆಫರ್: ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್ ಬೆಲೆ ಕೇಳಿದ್ರೆ ದಂಗಾಗ್ತೀರಾ
Image
Gmail Down: ಪ್ರಪಂಚದಾದ್ಯಂತ ಜಿಮೇಲ್ ಸರ್ವರ್ ಡೌನ್; ಮೇಲ್ ಕಳುಹಿಸಲು, ಸ್ವೀಕರಿಸಲು ಪರದಾಟ
Image
WhatsApp: ವಿಂಡೋಸ್ ವಾಟ್ಸ್​ಆ್ಯಪ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿ ಫೀಚರ್: ಹೊಸ ಅಪ್ಡೇಟ್​ನಲ್ಲಿ ಏನಿದೆ ನೋಡಿ

Samsung Galaxy M04: ಗ್ಯಾಲಕ್ಸಿ M ಸರಣಿಯಲ್ಲಿ ಬಂದಿದೆ ಹೊಸ ಸ್ಮಾರ್ಟ್​ಫೋನ್: ಬೆಲೆ ಕೇವಲ 8,499 ರೂಪಾಯಿ

ಕ್ಯಾಮೆರಾ:

ರೆಡ್ಮಿ ನೋಟ್ 12 ಪ್ರೊ+: ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ರೆಡ್ಮಿ ನೋಟ್ 12 ಪ್ರೊ: ಇದುಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ರೆಡ್ಮಿ ನೋಟ್ 12: ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್​ನಿಂದ ಕೂಡಿದೆ. ಇದಲ್ಲದೆ 8ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ-ಬೆಲೆ:

ಈ ಮೂರು ಸ್ಮಾರ್ಟ್‌ಫೋನ್​ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರಲ್ಲಿ ನೋಟ್ 12 33W ವೇಗದ ಚಾರ್ಜಿಂಗ್‌, ನೋಟ್ 12 ಪ್ರೊ 67W ವೇಗದ ಚಾರ್ಜಿಂಗ್‌ ಹಾಗೂ ನೋಟ್ 12 ಪ್ರೊ+ 210W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ನೋಟ್ 12 ಪ್ರೊ+ ಕೇವಲ 9 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, GNSS, NFC, ಮತ್ತು USB ಟೈಪ್-ಸಿ ನೀಡಲಾಗಿದೆ.

ಈ ಫೋನುಗಳು ಈಗಾಗಲೇ ಚೀನಾದಲ್ಲಿ ಬಿಡುಗಡೆ ಆಗಿ ಧೂಳೆಬ್ಬಿಸುತ್ತುದೆ. ಭಾರತದಲ್ಲಿ ಈ ಫೋನಿನ ನಿಖರ ಬೆಲೆ ಬಹಿರಂಗವಾಗಿಲ್ಲ. ಆದರೆ, ಚೀನಾದಲ್ಲಿ ರೆಡ್ಮಿ ನೋಟ್‌ 12 5G ಆರಂಭಿಕ ಬೆಲೆ CNY 1,199, ಅಂದರೆ ಭಾರತದಲ್ಲಿ ಅಂದಾಜು 13,600ರೂ., ರೆಡ್ಮಿ ನೋಟ್‌ 12 ಪ್ರೊ 5G ಆರಂಭಿಕ ಬೆಲೆ CNY 1,699, ಅಂದರೆ ಭಾರತದಲ್ಲಿ ಅಂದಾಜು 19,300ರೂ., ರೆಡ್ಮಿ ನೋಟ್‌ 12 ಪ್ರೊ+ 5G ಆರಂಭಿಕ ಬೆಲೆ CNY 2,199, ಅಂದರೆ ಭಾರತದಲ್ಲಿ ಅಂದಾಜು 25,500ರೂ. ಎನ್ನಬಹುದು.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Sun, 11 December 22

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ