Redmi Note 12 Pro+: ಹೊಸ ವರ್ಷಕ್ಕೆ ರಿಲೀಸ್ ಆಗಲಿರುವ 200MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ ಬೆಲೆ ಸೋರಿಕೆ: ಎಷ್ಟು ಗೊತ್ತೇ?

Redmi Note 12 Pro Plus: ಈ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಹೊಸ ವರ್ಷದ ಪ್ರಯುಕ್ತ ಜನವರಿ 5ಕ್ಕೆ ಅನಾವರಣಗೊಳ್ಳಲಿದೆ. ಇದರಲ್ಲಿ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಇದೀಗ ರೆಡ್ಮಿ ನೋಟ್ 12 ಪ್ರೊ+ ಫೋನಿನ ಬೆಲೆ ಸೋರಿಕೆ ಆಗಿದೆ.

Redmi Note 12 Pro+: ಹೊಸ ವರ್ಷಕ್ಕೆ ರಿಲೀಸ್ ಆಗಲಿರುವ 200MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ ಬೆಲೆ ಸೋರಿಕೆ: ಎಷ್ಟು ಗೊತ್ತೇ?
Redmi Note 12 Series
Follow us
TV9 Web
| Updated By: Vinay Bhat

Updated on: Dec 21, 2022 | 6:45 AM

ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ಏನಾದರು ಹೊಸ ತನವನ್ನು ಪ್ರಯತ್ನ ಮಾಡುವುದರಲ್ಲಿ ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಸಂಸ್ಥೆ ಎತ್ತಿದ ಕೈ. ಈಗಂತು ಅಪರೂಪಕ್ಕೆ ಮೊಬೈಲ್​ಗಳನ್ನು ಪರಿಚಯಿಸುತ್ತಿರುವ ಶವೋಮಿ ಸಮಯ ತೆಗೆದುಕೊಂಡ ವಿಭಿನ್ನವಾದ ಮೊಬೈಲ್​ನೊಂದಿಗೆ ಬರುತ್ತದೆ. ಅದರಂತೆ ಇದೀಗ ಶವೋಮಿ ತನ್ನ ರೆಡ್ಮಿ ಬ್ರ್ಯಾಂಡ್​ ನಡಿಯಲ್ಲಿ ಹೊಸ ಪವರ್​ಫುಲ್ ಮೊಬೈಲ್ ಪರಿಚಯಿಸಲು ತಯಾರಾಗುತ್ತಿದೆ. ಅದುವೇ ರೆಡ್ಮಿ ನೋಟ್ 12 ಸರಣಿ (Redmi Note 12 series). ಇದರಲ್ಲಿ ರೆಡ್ಮಿ ನೋಟ್ 12, ರೆಡ್ಮಿ ನೋಟ್ 12 ಪ್ರೊ ಮತ್ತು ರೆಡ್ಮಿ ನೋಟ್ 12 ಪ್ರೊ+ (Redmi Note 12 Pro +) ಎಂಬ ಮೂರು ಸ್ಮಾರ್ಟ್​ಫೋನ್​ಗುಗಳು ಬಿಡುಗಡೆ ಆಗಿವೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಹೊಸ ವರ್ಷದ ಪ್ರಯುಕ್ತ ಜನವರಿ 5ಕ್ಕೆ ಅನಾವರಣಗೊಳ್ಳಲಿದೆ. ಇದರಲ್ಲಿ ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಇದೀಗ ರೆಡ್ಮಿ ನೋಟ್ 12 ಪ್ರೊ+ ಫೋನಿನ ಬೆಲೆ ಸೋರಿಕೆ ಆಗಿದೆ.

ಸೋರಿಕೆ ಆಗಿರುವ ಮಾಹಿತಿಯ ಪ್ರಕಾರ, ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್​ಫೋನ್ ಮೂರು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM + 128GB ಸ್ಟೋರೇಜ್  ಆಯ್ಕೆಗೆ 24,999 ರೂ. ಇದೆಯಂತೆ. ಅಂತೆಯೆ 8GB RAM + 256GB ಸ್ಟೋರೇಜ್ ರೂಪಾಂತರಕ್ಕೆ 26,999 ರೂ., 12GB + 256GB ಸ್ಟೋರೇಜ್​ಗೆ 28,999 ರೂ. ನಿಗದಿ ಮಾಡಲಾಗಿದೆಯಂತೆ.

ಡಿಸ್​ಪ್ಲೇ-ಪ್ರೊಸೆಸರ್

ಇದನ್ನೂ ಓದಿ
Image
WhatsApp: ತಕ್ಷಣವೇ ಅಪ್ಡೇಟ್ ಮಾಡಿ: ವಾಟ್ಸ್​ಆ್ಯಪ್​ನಲ್ಲಿ ಬಂದಿದೆ undo ಫೀಚರ್: ಹೇಗೆ ಬಳಸುವುದು?
Image
Google: ವೈದ್ಯರ ಕೈಬರಹ ಅರ್ಥೈಸಲು ಗೂಗಲ್​ನಿಂದ ಹೊಸ ಆ್ಯಪ್ ಬಿಡುಗಡೆ: ಯಾವುದು ಗೊತ್ತೇ?
Image
ಎಲಾನ್ ಮಸ್ಕ್ ತಮ್ಮ ಹುದ್ದೆಯಿಂದ ಕೆಳಗಿಳಿಯಬೇಕಂದ ಶೇ. 57ರಷ್ಟು ಜನ, ಈ ಟ್ವಿಟ್ಟರ್ ಸಮೀಕ್ಷೆಯ ಒಳ ಮರ್ಮವೇನು?
Image
Google: ಭಾರತದ ನೂರು ಭಾಷೆಗಳಲ್ಲಿ ಟೆಕ್ಷ್ಟ್, ವಾಯ್ಸ್ ಸರ್ಚ್​ಗೆ ಎಐ ಅಭಿವೃದ್ಧಿಪಡಿಸುತ್ತಿದೆ ಗೂಗಲ್; ಸುಂದರ್ ಪಿಚೈ

ಈ ಮೂರು ಸ್ಮಾರ್ಟ್​ಫೋನ್​ಗಳ ಪೈಕಿ ರೆಡ್ಮಿ ನೋಟ್‌ 12 ಪ್ರೊ+ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಇದು 2,400 x 1,080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಬೆಂಬಲಿಸಲಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 1080 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೆ ಈ ಸರಣಿಯ ರೆಡ್ಮಿ ನೋಟ್‌ 12 ಪ್ರೊ ಕೂಡ ಇದೆ ಪ್ರೊಸೆಸರ್ ಹೊಂದಿದೆ. ಆದರೆ ರೆಡ್ಮಿ ನೋಟ್ 12 ಸ್ನಾಪ್​ಡ್ರಾಗನ್ 4 Gen 1 ಪ್ರೊಸೆಸರ್​ನಿಂದ ಕೆಲಸ ಮಾಡುತ್ತದೆ. ಉಳಿದಂತೆ ಮೂರು ಫೋನಿನ ಡಿಸ್ ಪ್ಲೇ ಒಂದೇರೀತಿಯಿದೆ.

Tech Tips: ಆಂಡ್ರಾಯ್ಡ್​ನಿಂದ ಐಫೋನ್​ಗೆ ಫೋಟೋ, ವಿಡಿಯೋ, ಚಾಟ್ಸ್​ ವರ್ಗಾವಣೆ ಹೇಗೆ?

ಕ್ಯಾಮೆರಾ:

ರೆಡ್ಮಿ ನೋಟ್ 12 ಪ್ರೊ+: ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ರೆಡ್ಮಿ ನೋಟ್ 12 ಪ್ರೊ: ಇದುಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ರೆಡ್ಮಿ ನೋಟ್ 12: ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಪಡೆದುಕೊಂಡಿದೆ, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್​ನಿಂದ ಕೂಡಿದೆ. ಇದಲ್ಲದೆ 8ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ-ಬೆಲೆ:

ಈ ಮೂರು ಸ್ಮಾರ್ಟ್‌ಫೋನ್​ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರಲ್ಲಿ ನೋಟ್ 12 33W ವೇಗದ ಚಾರ್ಜಿಂಗ್‌, ನೋಟ್ 12 ಪ್ರೊ 67W ವೇಗದ ಚಾರ್ಜಿಂಗ್‌ ಹಾಗೂ ನೋಟ್ 12 ಪ್ರೊ+ 210W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುತ್ತದೆ. ನೋಟ್ 12 ಪ್ರೊ+ ಕೇವಲ 9 ನಿಮಿಷಗಳಲ್ಲಿ ಫುಲ್ ಚಾರ್ಜ್ ಆಗುತ್ತಂತೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಸಿಮ್, 5G, ವೈಫೈ 6, GNSS, NFC, ಮತ್ತು USB ಟೈಪ್-ಸಿ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ