ಭಾರತದ ಟೆಲಿಕಾಂ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ರಿಲಯನ್ಸ್ (Reliance) ಒಡೆತನದ ಜಿಯೋ (Jio) ಟೆಕ್ ವಲಯಕ್ಕೂ ಕಾಲಿಟ್ಟಿದ್ದು, ಇಲ್ಲೂ ಪ್ರಾಬಲ್ಯ ಸಾಧಿಸುತ್ತಿದೆ. ಈಗಾಗಲೇ ಜಿಯೋ ತನ್ನ 5ಜಿ ಸೇವೆ ನೀಡುವುದರಲ್ಲಿ ಬ್ಯುಸಿಯಾಗಿದೆ. ಕೆಲವೇ ದಿನಗಳಲ್ಲಿ ಆಯ್ದ ಕೆಲವು ಪ್ರದೇಶಗಳಲ್ಲಿ ಜಿಯೋ 5ಜಿ ಲಭ್ಯವಾಗಲಿದೆ. ಇದರ ಬೆನ್ನಲ್ಲೇ ಸದ್ಯ ತನ್ನ ಹೊಸ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಸಜ್ಜಾಗಿದೆ. ಈ ಮೂಲಕ ಲ್ಯಾಪ್‌ಟಾಪ್ ವಲಯದಲ್ಲೂ ಸೌಂಡ್ ಮಾಡಲು ಜಿಯೋ ತಯಾರಿ ನಡೆಸುತ್ತಿದೆ. ಜಿಯೋಬುಕ್ ಲ್ಯಾಪ್‌ಟಾಪ್ (Jio Book Laptop) ಅಗ್ಗದ ಬೆಲೆಯಲ್ಲಿ ಉತ್ಕೃಷ್ಟ ತಂತ್ರಜ್ಞಾನ ನೀಡಲಿದೆ ಎನ್ನಲಾಗಿದೆ. ಭಾರತದಲ್ಲಿ ಕಡಿಮೆ ಬೆಲೆಯ ಜಿಯೋ ಫೋನ್ ಯಶಸ್ಸು ಪಡೆದಿದ್ದು, ಇದರ ಮುಂದುವರಿದ ಭಾಗವಾಗಿ ಅತಿ ಕಡಿಮೆ ಬೆಲೆಯ ಲ್ಯಾಪ್‌ಟಾಪ್ ಮಾರುಕಟ್ಟೆಗೆ ಬರಲಿದೆಯಂತೆ.
2018ರಲ್ಲಿಯೇ ಜಿಯೋ ಬುಕ್ ಹೆಸರಿನ ಲಾಪ್ ಟಾಪ್ ಸಿದ್ಧಪಡಿಸಲು ಯೋಜನೆ ರೂಪಿಸಲಾಗಿತ್ತು. ಈ ವಿನೂತನ ಪ್ರಯೋಗಕ್ಕೆ 2019ರಲ್ಲಿ ಚಾಲನೆ ನೀಡಲಾಗಿತ್ತು. ಅದರಂತೆ, ಇದೀಗ ಜಿಯೋ ಲ್ಯಾಪ್‌ಟಾಪ್‌ಗಳ ಬಿಡುಗಡೆಗೆ ರಿಲಯನ್ಸ್ ಜಿಯೋ ಕಂಪೆನಿ ಸಿದ್ದವಾಗಿದೆ ಎಂದು ಹೇಳಲಾಗಿದೆ. ಸುದ್ದಿ ಸಂಸ್ಥೆ ರಾಯಿಟರ್ಸ್ ಈ ಬಗ್ಗೆ ವರದಿ ಮಾಡಿದ್ದು, ಜಿಯೋಬುಕ್ ARM Mali G72 ನಿಂದ ಸಹಾಯ ಮಾಡಲಿದೆಯಂತೆ. ಇದು ಸಿಂಗಲ್-ಕೋರ್ ಸ್ಕೋರ್ 1178 ಮತ್ತು ಮಲ್ಟಿ-ಕೋರ್ ಸ್ಕೋರ್ 4246 ಅನ್ನು ಪಡೆದುಕೊಂಡಿದೆ. ಈ ಲ್ಯಾಪ್‌ಟಾಪ್ Android ಆಧಾರಿತ ಆಪರೇಟಿಂಗ್ ಸಿಸ್ಟಮ್ ಅನ್ನು ನಿರೀಕ್ಷಿಸಬಹುದು. ಇನ್ನು ಈ ಲ್ಯಾಪ್‌ಟಾಪ್ ಫುಲ್ HD ರೆಸಲ್ಯೂಶನ್ ಅನ್ನು ಬೆಂಬಲಿಸಲಿದೆ. ಆದರೆ ಪ್ರೈಸ್ ಟ್ಯಾಗ್ ಕಡಿಮೆ ಆದಂತೆ ಜಿಯೋಬುಕ್ ಕಡಿಮೆ ರೆಸಲ್ಯೂಶನ್ ಡಿಸ್‌ಪ್ಲೇಯನ್ನು ಪಡೆಯುವ ನಿರೀಕ್ಷೆಯಿದೆ. ಕನೆಕ್ಟಿವಿಟಿ ವೈಶಿಷ್ಟ್ಯಗಳಲ್ಲಿ ಮಿನಿ HDMI ಕನೆಕ್ಟರ್, ಡ್ಯುಯಲ್-ಬ್ಯಾಂಡ್ ವೈಫೈ ಮತ್ತು ಬ್ಲೂಟೂತ್ ಸೇರಿವೆ. ಇದು 3-ಅಕ್ಷದ ವೇಗವರ್ಧಕ ಮತ್ತು ಕ್ವಾಲ್ಕಾಮ್ ಆಡಿಯೊ ಚಿಪ್‌ನೊಂದಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.
ಜಿಯೋ ಕಂಪನಿ ಜಿಯೋ ಬುಕ್ ಎನ್ನುವ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಜಾಗತಿಕ ಕಂಪನಿಗಳಾದ ಕ್ವಾಲ್‌ಕೊಮ್ ಹಾಗೂ ಮೈಕ್ರೋಸಾಫ್ಟ್ ಜೊತೆಗೆ ಕೈಜೋಡಿಸಿ 4ಜಿ ಸಿಮ್‌ಕಾರ್ಡ್ ಇರುವ ಜಿಯೋಬುಕ್ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಅಕ್ಟೋಬರ್‌ನಿಂದಲೇ ಶಾಲೆಗಳು, ಸರ್ಕಾರಿ ಸಂಸ್ಥೆಗಳಿಗೆ ಈ ಲ್ಯಾಪ್‌ಟಾಪ್ ಒದಗಿಸುವ ಯೋಜನೆಯಿದ್ದು, ಮುಂದಿನ 3 ತಿಂಗಳಲ್ಲಿ ಇದು ಎಲ್ಲ ಗ್ರಾಹಕರಿಗೂ ಲಭ್ಯವಾಗಲಿದೆ. ಇದರೊಂದಿಗೆ ಜಿಯೋ 5ಜಿ ಬೆಂಬಲಿತ ಸ್ಮಾರ್ಟ್ ಪೋನ್ ಕೂಡಾ ಮಾರುಕಟ್ಟೆಗೆ ಬರಲಿದೆ ಎನ್ನಲಾಗಿದೆ.
ರಾಯಿಟರ್ಸ್ ವರದಿಯ ಪ್ರಕಾರ ಈ ಲ್ಯಾಪ್‌ಟಾಪ್ ಬೆಲೆ ಕೇವಲ 15,000 ರೂಪಾಯಿ ಇರಬಹುದು ಎನ್ನಲಾಗಿದೆ. ಜಿಯೋಬುಕ್ ಲ್ಯಾಪ್‌ಟಾಪ್ ಎರಡು ರೂಪಾಂತರಗಳಲ್ಲಿ ಬಿಡುಗಡೆ ಮಾಡುವ ಪ್ಲಾನ್ನಲ್ಲಿದೆಯಂತೆ. ಈ ಎರಡು ಲ್ಯಾಪ್‌ಟಾಪ್‌ಗಳಲ್ಲಿ, ಸ್ನಾಪ್‌ಡ್ರಾಗನ್ 665 ಪ್ರೊಸೆಸರ್‌ನಿಂದ ಚಾಲಿತವಾಗುವಂತೆ ಪಟ್ಟಿ ಮಾಡಲಾಗಿದೆ. HDMI, USB-A ನಂತಹ ಕನೆಕ್ಟಿವಿಟಿ ಪೋರ್ಟ್‌ಗಳನ್ನು ಪಡೆಯುವ ನಿರೀಕ್ಷೆಯಿದೆ.