Reliance Jio 5G in Mysore: ಹೊಸ ವರ್ಷಕ್ಕೆ ಬಂಪರ್ ಕೊಡುಗೆ: ಮೈಸೂರು ಸೇರಿ 11 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಪ್ರಾರಂಭ

Reliance JIO 5G: ರಾಜ್ಯದಲ್ಲಿ ಬೆಂಗಳೂರಿನ ನಂತರ ಬಹುನಿರೀಕ್ಷಿತ 5ಜಿ ಸೇವೆಗೆ ಚಾಲನೆ ದೊರೆತ ರಾಜ್ಯದ ಎರಡನೇ ನಗರ ಎಂಬ ಹೆಗ್ಗಳಿಕೆ ಇದೀಗ ಮೈಸೂರಿಗೆ ದೊರೆತಿದೆ. ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ.

Reliance Jio 5G in Mysore: ಹೊಸ ವರ್ಷಕ್ಕೆ ಬಂಪರ್ ಕೊಡುಗೆ: ಮೈಸೂರು ಸೇರಿ 11 ನಗರಗಳಲ್ಲಿ ಜಿಯೋ ಟ್ರೂ 5G ಸೇವೆ ಪ್ರಾರಂಭ
Reliance Jio 5G
Edited By:

Updated on: Dec 29, 2022 | 2:20 PM

ಭಾರತದಲ್ಲಿ ಈಗಾಗಲೇ 5ಜಿ ಸೇವೆಯನ್ನು (5G Service) ಆರಂಭ ಮಾಡಲಾಗಿದ್ದು ಲಕ್ಷಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ. ಏರ್ಟೆಲ್ ಹಾಗೂ ರಿಲಯನ್ಸ್ ಜಿಯೋದಂತಹ (Reliance Jio) ಪ್ರಮುಖ ಟೆಲಿಕಾಂ ಸಂಸ್ಥೆಗಳು 5ಜಿ ಸೇವೆ ಪ್ರಾಯೋಗಿಕ ಪ್ರಯೋಗವನ್ನು ಆರಂಭಿಸಿದೆ. ಇದೀಗ ಮೈಸೂರಿನಲ್ಲಿ ಟ್ರೂ 5ಜಿ ಸೇವೆಗಳಿಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಬೆಂಗಳೂರಿನ ನಂತರ ಬಹುನಿರೀಕ್ಷಿತ 5ಜಿ ಸೇವೆಗೆ ಚಾಲನೆ ದೊರೆತ ರಾಜ್ಯದ ಎರಡನೇ ನಗರ ಎಂಬ ಹೆಗ್ಗಳಿಕೆ ಇದೀಗ ಮೈಸೂರಿಗೆ ದೊರೆತಿದೆ. ಮೈಸೂರು (Mysuru) ಜೊತೆ ದೇಶದ ಇತರೆ 11 ನಗರಗಳಾದ ಲಖನೌ, ತಿರುವನಂತಪುರಂ, ನಾಸಿಕ್, ಔರಂಗಾಬಾದ್, ಚಂಡೀಗಢ, ಮೊಹಾಲಿ, ಪಂಚಕುಲ, ಜಿರಾಕ್‌ಪುರ, ಖರಾರ್ ಮತ್ತು ದೇರಾಬಸ್ಸಿಯಲ್ಲಿ ಜಿಯೋ ಟ್ರೂ 5ಜಿ ಸೇವೆ ಆರಂಭವಾಗಿದೆ.

ಮೈಸೂರಿನಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸುವ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ. ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್‌+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಮೈಸೂರಿನಲ್ಲಿರುವ ಜಿಯೋ ಬಳಕೆದಾರರನ್ನು ಜಿಯೋ ವೆಲ್‌ಕಮ್ ಆಫರ್‌ಗೆ ಆಹ್ವಾನಿಸಲಾಗುತ್ತದೆ. ಸದ್ಯ ಇದು ಸಂಪೂರ್ಣವಾಗಿ ಆಹ್ವಾನಿತ ಸೇವೆಯಾಗಿದ್ದು ಅಂದರೆ Invite Only Basisನಲ್ಲಿ ಬಳಕೆದಾರರಿಗೆ ಲಭ್ಯವಿದೆ.

ಈ ಸಂದರ್ಭ ಮಾತನಾಡಿದ ಜಿಯೋ ವಕ್ತಾರರು, ‘ಮೈಸೂರು ನಗರದಲ್ಲಿ 5ಜಿ ಆರಂಭಿಸುವುದಕ್ಕೆ ನಾವು ಹೆಮ್ಮೆಪಡುತ್ತೇವೆ. ಜಿಯೋ ಟ್ರೂ 5ಜಿ ತಂತ್ರಜ್ಞಾನದ ವೇರಿಯಂಟ್‌ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರಿಂದ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ. ಮೈಸೂರು ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರ. ಈ ಪ್ರದೇಶವನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Elon Musk: ಸರಿಯಾಯಿತು ಕೆಟ್ಟು ಹೋಗಿದ್ದ ಟ್ವಿಟರ್: ಎಲಾನ್ ಮಸ್ಕ್ ನೀಡಿದ ಕಾರಣವೇನು ನೋಡಿ
Google Pixel 6a: 38,899 ರೂ. ಡಿಸ್ಕೌಂಟ್: ಕೇವಲ 5,100 ರೂ. ಗೆ ಖರೀದಿಸಿ ಗೂಗಲ್ ಪಿಕ್ಸೆಲ್ 6a ಸ್ಮಾರ್ಟ್​ಫೋನ್
Twitter Down: ಭಾರತ ಸೇರಿದಂತೆ ವಿಶ್ವದ ಕೆಲ ಕಡೆಗಳಲ್ಲಿ ಟ್ವಿಟರ್ ಡೌನ್: ಲಾಗಿನ್ ಮಾಡಲು ಜನರ ಪರದಾಟ
Call Before You Dig: 5G ಚಾಲನೆಗೆ ಮುನ್ನ CBUD ಆಪ್ ಕಡ್ಡಾಯವಾಗಿ ಬಳಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

Year Ender 2022: ಅತ್ಯುತ್ತಮ ಫೀಚರ್​ಗಳಿದ್ದರೂ ಈ ವರ್ಷ ಮಾರುಕಟ್ಟೆಯಲ್ಲಿ ಫೇಲ್ ಸ್ಮಾರ್ಟ್​ಫೋನ್​ಗಳು ಯಾವುವು?

5ಜಿಯಲ್ಲಿ 100MHz ಅತೀ ಕಡಿಮೆ ಬ್ಯಾಂಡ್ ಆಗಿದ್ದು, 2.3GHz ಮಧ್ಯಮ ಬ್ಯಾಂಡ್ ಆಗಿದೆ. ಅದಕ್ಕಿಂತ ಅಧಿಕ ಬ್ಯಾಂಡ್‌ಗಳು ಕೂಡಾ ಇದೆ. ಮಧ್ಯಮ ಬ್ಯಾಂಡ್‌ನಲ್ಲಿಯೇ ಉತ್ತಮ ನೆಟ್‌ವರ್ಕ್ ಲಭ್ಯವಾಗಲಿದೆ. 5ಜಿ ನೆಟ್‌ವರ್ಕ್ 4ಜಿ ನೆಟ್‌ವರ್ಕ್‌ಗಿಂತಲೂ ಸ್ಪೀಡ್ ಆಗಿರುತ್ತದೆ. ನೀವು ಯಾವುದೇ ಸಿನಿಮಾ, ವಿಡಿಯೋ, ಆಪ್ ಡೌನ್‌ಲೋಡ್ ಅನ್ನು ಶೀಘ್ರವಾಗಿ ಮಾಡಲು ಸಾಧ್ಯವಾಗಲಿದೆ. ಇದು ಪ್ರತಿ ಸೆಕೆಂಡಿಗೆ 10 ಜಿಬಿ ವೇಗದಲ್ಲಿ ಕಾರ್ಯನಿರ್ವಹಣೆ ಮಾಡಲಿದೆ. ಭಾರತದಲ್ಲಿ ಪ್ರಸ್ತುತವಿರುವ 4ಜಿ ಡೌನ್‌ಲೋಡ್‌ ಸ್ಪೀಡ್‌ಗಿಂತ ನೂರು ಪಟ್ಟು ಅಧಿಕ ವೇಗವನ್ನು 5ಜಿ ನೆಟ್‌ವರ್ಕ್ ಹೊಂದಿರಲಿದೆ.

5G ನೆಟ್‌ವರ್ಕ್‌ಗೆ ಸಂಪರ್ಕಿಸಲು ಹೊಸ 5G ಸಿಮ್ ಖರೀದಿಸಬೇಕಾಗಿಲ್ಲ ಎಂದು ಜಿಯೋ ಈ ಹಿಂದೆ ತನ್ನ ಬಳಕೆದಾರರಿಗೆ ಭರವಸೆ ನೀಡಿದೆ. ಸದ್ಯ ಬಳಕೆಯಲ್ಲಿರುವ ಜಿಯೋ 4G ಸಿಮ್, ನೂತನ 5G ಸಂಪರ್ಕವನ್ನು ಸಪೋರ್ಟ್ ಮಾಡಲಿದೆ. ಜಿಯೋ ಮೈ ಜಿಯೋ ಅಪ್ಲಿಕೇಶನ್‌ನಲ್ಲಿ ವೆಲ್‌ಕಮ್‌ ಆಫರ್‌ನ ಆಹ್ವಾನವನ್ನು ಕಳುಹಿಸುತ್ತದೆ. ಈ ನಿಟ್ಟಿನಲ್ಲಿ ನೀವೇನಾದರೂ ಜಿಯೋ 5G ಸಪೋರ್ಟ್‌ ಇರುವ ನಗರಗಳಲ್ಲಿ ಇದ್ದರೆ, ಮೈ ಜಿಯೋ (MyJio) ಅಪ್ಲಿಕೇಶನ್‌ನಲ್ಲಿ ವೆಲ್‌ಕಮ್‌ ಆಫರ್ ಪಡೆಯಬಹುದು.

ಜಿಯೋ ಟ್ರೂ 5G ಸೇವೆ ಇರುವ ನಗರಗಳ ಪಟ್ಟಿ ಇಲ್ಲಿದೆ:

ದೆಹಲಿ, ಬೆಂಗಳೂರು, ಮುಂಬೈ, ವಾರಣಾಸಿ, ಕೋಲ್ಕತ್ತಾ, ಹೈದರಾಬಾದ್, ಚೆನ್ನೈ, ನಾಥದ್ವಾರ, ಪುಣೆ, ಗುರುಗ್ರಾಮ, ನೋಯ್ಡಾ, ಘಾಜಿಯಾಬಾದ್, ಫರಿದಾಬಾದ್, ಗುಜರಾತ್‌ನ 33 ಜಿಲ್ಲಾ ಕೇಂದ್ರಗಳಲ್ಲಿ ಜಿಯೋ ಟ್ರೂ 5ಜಿ ಸೇವೆ ಲಭ್ಯವಾಗುತ್ತಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:20 pm, Thu, 29 December 22