ಭಾರತದಲ್ಲಿ ಈಗಾಗಲೇ 5ಜಿ ಸೇವೆಯನ್ನು (5G Service) ಆರಂಭ ಮಾಡಲಾಗಿದ್ದು ಲಕ್ಷಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ. ಏರ್ಟೆಲ್ ಹಾಗೂ ರಿಲಯನ್ಸ್ ಜಿಯೋದಂತಹ (Reliance Jio) ಪ್ರಮುಖ ಟೆಲಿಕಾಂ ಸಂಸ್ಥೆಗಳು 5ಜಿ ಸೇವೆ ಪ್ರಾಯೋಗಿಕ ಪ್ರಯೋಗವನ್ನು ಆರಂಭಿಸಿದೆ. ಮೊನ್ನೆಯಷ್ಟೆ ಕರ್ನಾಟಕದ ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ತುಮಕೂರಿನಲ್ಲಿ ಜಿಯೋ ಟ್ರೂ 5ಜಿ ಸೇವೆಯನ್ನು ಸ್ಥಾಪಿಸಿತ್ತು. ಇದೀಗ ಮೂರು ನಗರಗಳಲ್ಲಿ ಜಿಯೋ 5ಜಿ (JIO 5G) ಲಭ್ಯವಾಗುತ್ತಿದೆ. ಕಾರವಾರ, ರಾಣೆಬೆನ್ನೂರು ಮತ್ತು ಹಾವೇರಿಯಲ್ಲಿ ಜಿಯೋ ಟ್ರೂ 5ಜಿ ಸೇವೆ ಅನ್ನು ಇದೇ ಮಾರ್ಚ್ 15 ರಿಂದ ಆರಂಭಿಸಲಾಗಿದೆ. ರಾಜ್ಯದ ಈ 3 ನಗರಗಳು ಸೇರಿದಂತೆ ದೇಶದ ಹತ್ತು ರಾಜ್ಯಗಳ, ಒಟ್ಟು 34 ಹೊಸ ನಗರಗಳಲ್ಲಿ ತನ್ನ ಜಿಯೋ ತನ್ನ 5G ಸೇವೆಗಳನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದೆ.
2023 ರ ಅಂತ್ಯದ ವೇಳೆಗೆ ಭಾರತದಾದ್ಯಂತ ಹೈಸ್ಪೀಡ್ 5ಜಿ ಟೆಲಿಕಾಂ ಸೇವೆಗಳನ್ನು ಒದಗಿಸುವುದಾಗಿ ರಿಲಯನ್ಸ್ ಜಿಯೋ ಹೇಳಿದೆ. ಈಗಾಗಲೇ ಕೇರಳದ ಅಟ್ಟಿಂಗಲ್, ಮೇಘಾಲಯದ ತುರಾ, ಒಡಿಶಾದ ಭವಾನಿಪಟ್ನಾ, ಜತಾನಿ, ಖೋರ್ಧಾ, ಸುಂದರ್‌ಗಢ, ತಮಿಳುನಾಡಿನ ಅಂಬೂರ್, ಚಿದಂಬರಂ , ನಾಮಕ್ಕಲ್, ಪುದುಕೋಟ್ಟೈ, ರಾಮನಾಥಪುರಂ, ಶಿವಕಾಶಿ, ತಿರುಚೆಂಗೋಡ್, ವಿಲುಪ್ಪುರಂ ಹಾಗೂ ತೆಲಂಗಾಣದ ಸೂರ್ಯಪೇಟ್ ಸೇರಿದಂತೆ ದೇಶದ 365 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳು ಲಭ್ಯ ಆಗುತ್ತಿವೆ.
Poco X5 5G: 22 ನಿಮಿಷಗಳಲ್ಲಿ ಚಾರ್ಜ್ ಫುಲ್: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಪೋಕೋ X5 5G ಸ್ಮಾರ್ಟ್ಫೋನ್ ಬಿಡುಗಡೆ
ಈ ಬಗ್ಗೆ ಜಿಯೋ ವಕ್ತಾರರು ಮಾತನಾಡಿದ್ದು, ಜಿಯೋ ಇಂಜಿನಿಯರ್‌ಗಳು ಟ್ರೂ-5ಜಿ ಪ್ರಯೋಜನಗಳನ್ನು ಪ್ರತಿ ಭಾರತೀಯರಿಗೂ ತಲುಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರಿಂದ ದೇಶದ ಪ್ರತಿಯೊಬ್ಬ ನಾಗರಿಕರು ಈ ತಂತ್ರಜ್ಞಾನದ ಪರಿವರ್ತನಾ ಶಕ್ತಿ ಮತ್ತು ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು. ಹೆಚ್ಚಿನ ವೇಗದ, ಲೋ- ಲೇಟೇನ್ಸಿ, ಅದ್ವಿತೀಯ ಟ್ರೂ 5ಜಿ ಸೇವೆಗಳ ತಾಂತ್ರಿಕ ಪ್ರಯೋಜನಗಳನ್ನು ಜನರು ಮತ್ತು ವ್ಯವಹಾರಗಳಿಗೆ ಲಭ್ಯವಾಗುವಂತೆ ಮಾಡಲಾಗುತ್ತದೆ. ಪ್ರವಾಸೋದ್ಯಮ, ಉತ್ಪಾದನೆ, ಎಸ್ಎಂಇಗಳು, ಆಡಳಿತ, ಶಿಕ್ಷಣ, ಆರೋಗ್ಯ, ಕೃಷಿ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್ ಮತ್ತು ಐಟಿ ಈ ಕ್ಷೇತ್ರಗಳಲ್ಲಿ ಹೊಸ ಬೆಳವಣಿಗೆಯ ಅವಕಾಶಗಳನ್ನು ತೆರೆಯುತ್ತದೆ ಎಂದು ಹೇಳಿದ್ದಾರೆ.
5ಜಿಯಲ್ಲಿ 100MHz ಅತೀ ಕಡಿಮೆ ಬ್ಯಾಂಡ್ ಆಗಿದ್ದು, 2.3GHz ಮಧ್ಯಮ ಬ್ಯಾಂಡ್ ಆಗಿದೆ. ಅದಕ್ಕಿಂತ ಅಧಿಕ ಬ್ಯಾಂಡ್‌ಗಳು ಕೂಡಾ ಇದೆ. ಮಧ್ಯಮ ಬ್ಯಾಂಡ್‌ನಲ್ಲಿಯೇ ಉತ್ತಮ ನೆಟ್‌ವರ್ಕ್ ಲಭ್ಯವಾಗಲಿದೆ. 5ಜಿ ನೆಟ್‌ವರ್ಕ್ 4ಜಿ ನೆಟ್‌ವರ್ಕ್‌ಗಿಂತಲೂ ಸ್ಪೀಡ್ ಆಗಿರುತ್ತದೆ. ನೀವು ಯಾವುದೇ ಸಿನಿಮಾ, ವಿಡಿಯೋ, ಆಪ್ ಡೌನ್‌ಲೋಡ್ ಅನ್ನು ಶೀಘ್ರವಾಗಿ ಮಾಡಲು ಸಾಧ್ಯವಾಗಲಿದೆ. ಇದು ಪ್ರತಿ ಸೆಕೆಂಡಿಗೆ 10 ಜಿಬಿ ವೇಗದಲ್ಲಿ ಕಾರ್ಯನಿರ್ವಹಣೆ ಮಾಡಲಿದೆ. ಭಾರತದಲ್ಲಿ ಪ್ರಸ್ತುತವಿರುವ 4ಜಿ ಡೌನ್‌ಲೋಡ್ ಸ್ಪೀಡ್‌ಗಿಂತ ನೂರು ಪಟ್ಟು ಅಧಿಕ ವೇಗವನ್ನು 5ಜಿ ನೆಟ್‌ವರ್ಕ್ ಹೊಂದಿರಲಿದೆ.
5G ನೆಟ್‌ವರ್ಕ್‌ಗೆ ಸಂಪರ್ಕಿಸಲು ಹೊಸ 5G ಸಿಮ್ ಖರೀದಿಸಬೇಕಾಗಿಲ್ಲ ಎಂದು ಜಿಯೋ ಈ ಹಿಂದೆ ತನ್ನ ಬಳಕೆದಾರರಿಗೆ ಭರವಸೆ ನೀಡಿದೆ. ಸದ್ಯ ಬಳಕೆಯಲ್ಲಿರುವ ಜಿಯೋ 4G ಸಿಮ್, ನೂತನ 5G ಸಂಪರ್ಕವನ್ನು ಸಪೋರ್ಟ್ ಮಾಡಲಿದೆ. ಜಿಯೋ ಮೈ ಜಿಯೋ ಅಪ್ಲಿಕೇಶನ್‌ನಲ್ಲಿ ವೆಲ್‌ಕಮ್ ಆಫರ್‌ನ ಆಹ್ವಾನವನ್ನು ಕಳುಹಿಸುತ್ತದೆ. ಈ ನಿಟ್ಟಿನಲ್ಲಿ ನೀವೇನಾದರೂ ಜಿಯೋ 5G ಸಪೋರ್ಟ್ ಇರುವ ನಗರಗಳಲ್ಲಿ ಇದ್ದರೆ, ಮೈ ಜಿಯೋ (MyJio) ಅಪ್ಲಿಕೇಶನ್‌ನಲ್ಲಿ ವೆಲ್‌ಕಮ್ ಆಫರ್ ಪಡೆಯಬಹುದು.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ