AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RIP Twitter: ಮುಳುಗುತ್ತಿದೆ ಟ್ವಿಟ್ಟರ್​: ನೌಕರರ ಸಾಮೂಹಿಕ ರಾಜೀನಾಮೆ: ಕಚೇರಿಗಳು ತಾತ್ಕಾಲಿಕ ಬಂದ್

ನೂರಾರು ಟ್ವಿಟ್ಟರ್​ ಉದ್ಯೋಗಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಎಲ್ಲೆಡೆ ಟ್ವಿಟ್ಟರ್ ಕಚೇರಿಗಳನ್ನು ಮುಚ್ಚಲಾಗುತ್ತಿದೆ. ಅಲ್ಲದೆ ಟ್ವಿಟ್ಟರ್​​ನಲ್ಲಿ #GoodByeTwitter, #RIPTwitter, #TwitterDown ಹ್ಯಾಶ್​ಟ್ಯಾಗ್​ಗಳು ಟ್ರೆಂಡಿಂಗ್​ನಲ್ಲಿದೆ.

RIP Twitter: ಮುಳುಗುತ್ತಿದೆ ಟ್ವಿಟ್ಟರ್​: ನೌಕರರ ಸಾಮೂಹಿಕ ರಾಜೀನಾಮೆ: ಕಚೇರಿಗಳು ತಾತ್ಕಾಲಿಕ ಬಂದ್
ಎಲಾನ್ ಮಸ್ಕ್ ಮತ್ತು ಟ್ವಿಟರ್ ಲೋಗೊ
TV9 Web
| Updated By: Vinay Bhat|

Updated on: Nov 18, 2022 | 1:35 PM

Share

ಎಲಾನ್ ಮಸ್ಕ್ (Elon Muck) ಮಾಲೀಕತ್ವದ ಟ್ವಿಟ್ಟರ್ (Twitter)​ ಕಂಪನಿ ಮುಳುಗುವ ಭೀತಿಯಲ್ಲಿದೆ. ನೂತನ ಬದಲಾವಣೆ ತರಲು ಮುಂದಾದ ಮಸ್ಕ್​ಗೆ ಈಗ ಸಂಕಷ್ಟ ಎದುರಾಗಿದೆ. ನೂರಾರು ಟ್ವಿಟ್ಟರ್​ ಉದ್ಯೋಗಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆ ಎಲ್ಲೆಡೆ ಟ್ವಿಟ್ಟರ್ ಕಚೇರಿಗಳನ್ನು ಮುಚ್ಚಲಾಗುತ್ತಿದೆ. ಅಲ್ಲದೆ ಟ್ವಿಟ್ಟರ್​​ನಲ್ಲಿ #GoodByeTwitter, #RIPTwitter, #TwitterDown ಹ್ಯಾಶ್​ಟ್ಯಾಗ್​ಗಳು ಟ್ರೆಂಡಿಂಗ್​ನಲ್ಲಿದೆ. ವರದಿಗಳ ಪ್ರಕಾರ, ಟ್ವಿಟ್ಟರ್​ ಉದ್ಯೋಗಿಗಳಿಗೆ ಕಂಪನಿಯಲ್ಲಿ ಉಳಿಯಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಗುರುವಾರ ಮಧ್ಯಾಹ್ನ 2 ಗಂಟೆಯ ವರೆಗೆ ಸಮಯಾವಕಾಶ ನೀಡಲಾಗಿತ್ತು. ಆದರೆ, ಉದ್ಯೋಗಿಗಳು ಸೆಲ್ಯೂಟ್‌ ಎಮೋಜಿಗಳನ್ನು ಕಳುಹಿಸಿ ವಿದಾಯ ಸಂದೇಶಗಳನ್ನು ಪೋಸ್ಟ್‌ ಮಾಡುತ್ತಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಟ್ವಿಟ್ಟರ್​ನ ಎಲ್ಲಾ ಕಚೇರಿಗಳು ತಾತ್ಕಾಲಿಕವಾಗಿ ಬಂದ್ ಅಗಿರುವುದು ತಿಳಿದುಬಂದಿದೆ. “ಕೂಡಲೇ ಜಾರಿಯಾಗುವಂತೆ ಕಚೇರಿ ಕಟ್ಟಡಗಳನ್ನು ತಾತ್ಕಾಲಿಕವಾಗಿ ಮುಚ್ಚುತ್ತಿದ್ದೇವೆ. ಎಲ್ಲಾ ಬ್ಯಾಡ್ಜ್ ಅಕ್ಸೆಸ್ ಅನ್ನು ರದ್ದು ಮಾಡಲಾಗಿದೆ. ನವೆಂಬರ್ 21, ಸೋಮವಾರ ಕಚೇರಿಗಳು ಮತ್ತೆ ಬಾಗಿಲು ತೆರೆಯುತ್ತವೆ. ನಿಮ್ಮ ಹೊಂದಾಣಿಕೆಗೆ ನಮ್ಮ ಧನ್ಯವಾದ. ಕಂಪನಿಯ ಗೌಪ್ಯ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲಾಗಲೀ, ಮಾಧ್ಯಮದಲ್ಲಾಗಲೀ ಅಥವಾ ಬೇರೆಲ್ಲಿಯಾಗಲೀ ಚರ್ಚಿಸದೆ ಕಂಪನಿಯ ನೀತಿಗೆ ಬದ್ಧತೆಯನ್ನು ಮುಂದುವವರಿಸಿರಿ,” ಎಂದು ಟ್ವಿಟ್ಟರ್‌ನ ಮ್ಯಾನೇಜ್ಮೆಂಟ್ ತನ್ನ ಉದ್ಯೋಗಿಗಳಿಗೆ ಮೇಲ್ ಕಳುಹಿಸಿದೆ.

ಎಲಾನ್ ಮಸ್ಕ್ ಟ್ವಿಟ್ಟರ್‌ನಲ್ಲಿ ದಿನಕ್ಕೆ ಕನಿಷ್ಠ 12 ಗಂಟೆ ಕೆಲಸ ಮಾಡುವಂತೆ ಉದ್ಯೋಗಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಾರ್ಡ್ ಕೋರ್ ಆಗಿ ಕೆಲಸ ಮಾಡುವುದಿದ್ದರೆ ಇರಿ ಇಲ್ಲದಿದ್ದರೆ ಕೆಲಸ ಬಿಟ್ಟು ಹೋಗಿ ಎಂಬ ಎರಡು ಆಯ್ಕೆಯನ್ನು ಮಸ್ಕ್ ನೀಡಿದ್ದರು ಎನ್ನಲಾಗಿದೆ. ಈಗಾಗಲೇ ಟ್ವಿಟ್ಟರ್ ಕಂಪನಿಯನ್ನು ಸ್ವಾಧೀನಪಡಿಸಿಕೊಂಡ ನಂತರ ಮಸ್ಕ್ ತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ್ದಾರೆ. ಇದೀಗ ಸುಮಾರು 3,000 ಉದ್ಯೋಗಿಗಳು ಟ್ವಿಟ್ಟರ್ ತೊರೆದಿದ್ದಾರೆ.

ಇದನ್ನೂ ಓದಿ
Image
Realme 10 Pro: ರಿಯಲ್ ಮಿಯಿಂದ ಒಂದಲ್ಲ ಎರಡು 108MP ಕ್ಯಾಮೆರಾದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ ಎಷ್ಟು?
Image
Meta India Head: ಭಾರತದಲ್ಲಿ ಸಂಧ್ಯಾ ದೇವನಾಥನ್​ಗೆ ಮೆಟಾ ಚುಕ್ಕಾಣಿ; ಆದಾಯ ವೃದ್ಧಿಯತ್ತ ಚಿತ್ತ
Image
Oppo A1 Pro 5G: ಒಪ್ಪೋದಿಂದ 108MP ಕ್ಯಾಮೆರಾದ ಚೊಚ್ಚಲ ಸ್ಮಾರ್ಟ್​ಫೋನ್ ಬಿಡುಗಡೆ: ಯಾವುದು?, ಬೆಲೆ ಎಷ್ಟು?
Image
Jio Offers: 5 ಹೊಸ ಪ್ಲಾನ್: ಫಿಫಾ ವಿಶ್ವಕಪ್ ಆರಂಭಕ್ಕೂ ಮುನ್ನ ಜಿಯೋದಿಂದ ಧಮಾಕ ಆಫರ್ ಘೋಷಣೆ

ಬಿಬಿಸಿ ವರದಿಯೊಂದರ ಪ್ರಕಾರ,  ಟ್ವಿಟ್ಟರ್‌ನಲ್ಲಿ ಸದ್ಯಕ್ಕೆ ಉಳಿಯಲಿರುವುದು ಎರಡು ಸಾವಿರ ಉದ್ಯೋಗಿಗಳು ಮಾತ್ರ. ಎಲಾನ್ ಮಸ್ಕ್ ಬರುವ ಮುನ್ನ ಟ್ವಿಟ್ಟರ್‌ನಲ್ಲಿ 7,500 ಉದ್ಯೋಗಿಗಳಿದ್ದರು. ಮಸ್ಕ್ ಬಂದಾಗಲೇ ಶೇ. 50ರಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂಬ ಸುದ್ದಿ ಇತ್ತು. ಆದರೀಗ ಶೇ. 70ರಷ್ಟು ಉದ್ಯೋಗಿಗಳು ಕೆಲಸ ಬಿಟ್ಟಿರುವಂತಿದೆ. ಒಟ್ಟಾರೆ ಟ್ವಿಟ್ಟರ್‌ನಲ್ಲಿ ಎಲಾನ್ ಮಸ್ಕ್ ಆಳ್ವಿಕೆ ಶುರುವಾದಾಗಿನಿಂದ ಭಾರೀ ಗೊಂದಲಮಯ ವಾತಾವರಣ ನಿರ್ಮಾಣವಾಗಿದೆ.

ಟ್ವಿಟ್ಟರ್​ನ ಬ್ಲೂ ಸಬ್​ಸ್ಕ್ರಿಪ್ಷನ್:

ಟ್ವಿಟ್ಟರ್​ ಬ್ಲೂ ಶುಲ್ಕ ಚಂದಾದಾರಿಕೆ ಭಾರತದಲ್ಲಿ ಕೆಲವು ಜನರು ತಿಂಗಳಿಗೆ ರೂ. 719ಕ್ಕೆ, ಅಂದರೆ ಸುಮಾರು $8.9ಕ್ಕೆ ಸಮನಾಗಿ ಪಾವತಿಸಿ ಪಡೆಯುತ್ತಿದ್ದಾರೆ. ಇದನ್ನು ಪಡೆದ ಗ್ರಾಹಕರು 42 ನಿಮಿಷಗಳವರೆಗೆ ದೊಡ್ಡ ವಿಡಿಯೋಗಳನ್ನು ಅಪ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಇವರು ಹಂಚಿಕೊಂಡ ಪೋಸ್ಟ್‌ಗಳು ಹೆಚ್ಚು ಆದ್ಯತೆಯ ಶ್ರೇಯಾಂಕವನ್ನು ಪಡೆಯಲಿವೆ. ಮತ್ತು ಟ್ವಿಟ್ಟರ್ ಖಾತೆಗಳಲ್ಲಿ ಜಾಹಿರಾತು ವೀಕ್ಷಣೆ ಪ್ರಮಾಣ ಕಡಿಮೆ ಇರಲಿದ್ದು ಏನೇ ಹೊಸ ಅಪ್‌ಡೇಟ್‌ಗಳು ಬಂದರೆ ಟ್ವಿಟ್ಟರ್​ ಬ್ಲೂ ಗ್ರಾಹಕರಿಗೆ ಮೊದಲು ಸಿಗಲಿದೆ. ವಿಶೇಷ ಎಂದರೆ ಟ್ವಿಟ್ಟರ್​ ಬ್ಲೂ ಚಂದಾದಾರಿಕೆಯನ್ನು ಯಾವ ವ್ಯಕ್ತಿ ಬೇಕಾದರೂ ಖರೀದಿಸಬಹುದು. ಇದಕ್ಕೆ ಸೆಲೆಬ್ರಿಟಿಗಳೇ ಆಗಬೇಕು ಅಥವಾ ಕಂಪನಿಗಳು ಮತ್ತು ರಾಜಕಾರಣಿಗಳೇ ಆಗಬೇಕಂತಿಲ್ಲ. ಓರ್ವ ಸಾಮಾನ್ಯ ವ್ಯಕ್ತಿ ಕೂಡ ಟ್ವಿಟ್ಟರ್ ಬ್ಲೂ ಚಂದಾದಾರಿಕೆಯನ್ನು ಖರೀದಿಸಲು ಎಲಾನ್ ಮಸ್ಕ್ ಅವಕಾಶ ನೀಡಿದ್ದಾರೆ.

ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?